ಮಂಗಳೂರು: ಮಹಾರಾಷ್ಟ್ರದ ನಾಗ್ಪುರದ ಖ್ಯಾತ ಡಾಲಿ ಚಾಯ್‌ವಾಲ (ಸುನಿಲ್ ಪಾಟೀಲ್) ಅವರು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಜ.18 ರಿಂದ 22ರ ವರೆಗೆ ಐದು ದಿನಗಳ ಕಾಲ ನಗರದಲ್ಲಿ “ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ’ ನಡೆಯಲಿದೆ. ಈ ಕಾರ್ಯಕ್ರಮದ ಮೊದಲ ದಿನದ ಆಕರ್ಷಣೆಯಾಗಿ ಡಾಲಿ ಚಾಯ್‌ವಾಲ ಅವರು ಭಾಗವಹಿಸಲಿದ್ದಾರೆ.
“ಮಜಾ ಕರೇಂಗೆ .. ಚಾಯ್ ಪಿಯೇಂಗೆ’
ತನ್ನ ಬರುವಿಕೆಯ ಕುರಿತು ಡಾಲಿ ಚಾಯ್‌ವಾಲ ಅವರು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಮಾಡಿದ್ದು, ಜ. 18ರಂದು ಮಂಗಳೂರಿನಲ್ಲಿ ಸಿಗುತ್ತೇನೆ. “ಮಜಾ ಕರೇಂಗೆ .. ಚಾಯ್ ಪಿಯೇಂಗೆ’ ಎಂದು ಪೋಸ್ಟ್ ಮಾಡಿದ್ದಾರೆ. ಮೈಕ್ರೋಸಾಪ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಡಾಲಿ ಅವರ ಚಹಾ ಅಂಗಡಿಗೆ ಭೇಟಿ ನೀಡಿ ಚಹಾ ಕುಡಿದು ಪೋಸ್ಟ್ ಹಂಚಿದ್ದರು. ಇದಾದ ಬಳಿ ಡಾಲಿ ಚಾಯ್‌ವಾಲ ಅವರು ದೇಶಾದ್ಯಂತ ಇನ್ನಷ್ಟು ಪರಿಚಿತರಾದರು.
Discover more from Coastal Times Kannada
Subscribe to get the latest posts sent to your email.
Discussion about this post