ಬೆಂಗಳೂರು: ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ, ಸಮವಸ್ತ್ರವನ್ನು ಕಡ್ಡಾಯ ಮಾಡುವುದು ಸಂವಿಧಾನದ 19 (1) (ಎ) ಮತ್ತು 25 ರ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಲ್ಲ. ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ನ ತ್ರಿಸದಸ್ಯ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿ ಹಿಜಾಬ್ ಕುರಿತ ಅರ್ಜಿಯನ್ನು ವಜಾಗೊಳಿಸಿದೆ.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ಮಂಗಳವಾರ(ಮಾರ್ಚ್ 15)ಮಹತ್ವದ ತೀರ್ಪು ನೀಡಿದೆ. ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿ, ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಸೇರಿದಂತೆ ಮೂವರು ನ್ಯಾಯಾಧೀಶರನ್ನೊಳಗೊಂಡ ತ್ರಿಸದಸ್ಯ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ.
ಫೆಬ್ರವರಿ 5ರಂದು ಕರ್ನಾಟಕ ಸರ್ಕಾರ ಸಮವಸ್ತ್ರ ಕುರಿತು ಹೊರಡಿಸಿರುವ ಆದೇಶವನ್ನು ಎತ್ತಿಹಿಡಿದಿರುವ ನ್ಯಾಯಾಲಯ, ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್, ಜೆ ಎಂ ಖಾಜಿ ನೇತೃತ್ವದ ತ್ರಿಸದಸ್ಯ ಪೀಠ ಬಹುನಿರೀಕ್ಷಿತ ತೀರ್ಪನ್ನು ಇಂದು ಪ್ರಕಟಿಸಿದರು.
I welcome the decision of the Karnataka High Court on the issue of uniforms/dress code. This is a victory for our Constitution. Let fanaticism come to an end and may law always prevail.#YesToUniform_NoToHijab https://t.co/aFFbQ9PkEa
— K Raghupathi Bhat (Modi Ka Parivar) (@RaghupathiBhat) March 15, 2022
Discover more from Coastal Times Kannada
Subscribe to get the latest posts sent to your email.
Discussion about this post