ಬೆಂಗಳೂರು, ಮಾ 15: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಬೆಂಗಳೂರಿನ ಸದಾಶಿವನಗರ ಪೊಲೀಸ ಠಾಣೆಯಲ್ಲಿ ಗುರುವಾರ (ಮಾರ್ಚ್ 14) ತಡರಾತ್ರಿ 7 ವರ್ಷದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ತಾಯಿ ನೀಡಿದ ದೂರಿನ ಮೇರೆಗೆ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (81) ಅವರ ವಿರುದ್ಧ 2012 ರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಸೆಕ್ಷನ್ ಅಡಿಯಲ್ಲಿ ಕೇಸು ದಾಖಲಾಗಿದೆ. ಪೊಲೀಸರು ‘ಪೋಕ್ಸೊ’ ಕಾಯ್ದೆಯ ಸೆಕ್ಷನ್ 8 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ ಎಂದು ವರದಿ ಆಗಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಜೊತೆಗಿದ್ದ ತಾಯಿ ಗುರುವಾರ ಸಂಜೆ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಮಧ್ಯರಾತ್ರಿ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಖಚಿತವಾಗಿದೆ.
ದೌರ್ಜನ್ಯ ಪ್ರಕರಣವು ಕಳೆದ ತಿಂಗಳ ಫೆಬ್ರವರಿ 02 ರಂದು ನಡೆದಿದೆ ಎನ್ನಲಾಗಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯ ಸಹಾಯವನ್ನು ಪಡೆಯಲು ಸಂತ್ರಸ್ತ ಮಗಳ ಜೊತೆ ತಾಯಿ ತೆರಳಿದ್ದ ವೇಳೆ ಲೈಂಗಿಕ ದೌರ್ಜನ್ಯದ ಘಟನೆ ಸಂಭವಿಸಿದೆ ಎಂದು ವರದಿ ಆಗಿದೆ.
53 ಮಂದಿ ವಿರುದ್ಧ ದೂರು ನೀಡಿದ ಮಹಿಳೆ : ಯಡಿಯೂರಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಿರುವ ಶಿವಮೊಗ್ಗ ಜಿಲ್ಲೆ ಮೂಲಕ ಈ ಮಹಿಳೆಯ ಅನೇಕ ಅಧಿಕಾರಿಗಳು, ಬಿಸಿನೆಸ್ ಮ್ಯಾನ್‌ಗಳು ,ರಾಜಕೀಯ ನಾಯಕರ ವಿರುದ್ಧವು ಸೇರಿ ಸುಮಾರು 53 ಪ್ರಕರಣ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿಂದೆ ಕೆಲವು ಬಾರಿ ತಮ್ಮ ಸಮಸ್ಯೆಗಳನ್ನು ಯಡಿಯೂರಪ್ಪ ಬಳಿ ಹೇಳಿಕೊಂಡಿದ್ದರು ಎನ್ನಲಾಗಿದೆ.
ಯಡಿಯೂರಪ್ಪ ಬೆಂಬಲಿಗರಿಗೆ ಶಾಕ್ : ಲೋಕಸಭಾ ಚುನಾವಣೆ ಹೊತ್ತಿನಲ್ಲಿ ರಾಜ್ಯದ ಹಿರಿಯ ನಾಯಕರ ವಿರುದ್ಧ ಇಂಥದ್ದೊಂದು ಪ್ರಕರಣ ದಾಖಲಾಗಿದ್ದನ್ನು ನಂಬಬೇಕೋ, ಬೇಡವೋ ಎಂದು ಜನರು ಗೊಂದಲ್ಲಿದ್ದಾರೆ. ಇದು ನಿಜವೇ? ಚುನಾವಣೆಯ ದುರುದ್ದೇಶಕ್ಕೆ ಯಡಿಯೂರಪ್ಪ ಒಳಗಾದರೆ ಎಂದು ಕೆಲವು ಮಾತನಾಡಿಕೊಳ್ಳುತ್ತಿದ್ದಾರೆ.
ಆದರೆ ಬಿಜೆಪಿ ನಾಯಕರಿಗೆ ಅದರಲ್ಲೂ ಬಿಎಸ್ ಯಡಿಯೂರಪ್ಪ ಅವರ ಬೆಂಬಲಿಗರು, ಕಾರ್ಯಕರ್ತರಲ್ಲಿ ಈ ಪೋಕ್ಸೊ ದೂರು ದಾಖಲು ಘಟನೆ ಆಘಾತ ನೀಡಿದೆ. ಚುನಾವಣೆ ಹೊತ್ತಿನಲ್ಲಿ ಎಲ್ಲರೂ ಪ್ರಚಾರ, ಟಿಕೆಟ್ ಹಂಚಿಕೆ ಗೆಲುವು, ಸೋಲಿನ ಲೆಕ್ಕಾಚಾರದಲ್ಲಿದ್ದರು. ಈ ಮಧ್ಯೆ ಶುಕ್ರವಾರ ಬೆಳ್ಳಂಬೆಳಗ್ಗೆ ಪೋಕ್ಸೋ ಕೇಸ್ ದಾಖಲಾಗಿದ್ದು ಬಹಿರಂಗವಾಯಿತು.
Discover more from Coastal Times Kannada
Subscribe to get the latest posts sent to your email.
Discussion about this post