• About us
  • Contact us
  • Disclaimer
Wednesday, February 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಎಂಸಿಸಿ. ಬ್ಯಾಂಕ್ 2024–25 ವಿತ್ತೀಯ ವರ್ಷದಲ್ಲಿ 13.00 ಕೋಟಿ ಲಾಭ, ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ

Coastal Times by Coastal Times
April 15, 2025
in ಕರಾವಳಿ
ಎಂಸಿಸಿ. ಬ್ಯಾಂಕ್ 2024–25 ವಿತ್ತೀಯ ವರ್ಷದಲ್ಲಿ 13.00 ಕೋಟಿ ಲಾಭ, ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ
20
VIEWS
WhatsappTelegramShare on FacebookShare on Twitter

ಮಂಗಳೂರು : ಅವಿಭಜಿತ ದ.ಕ.ಜಿಲ್ಲೆಯ ಎಂಸಿಸಿ ಬ್ಯಾಂಕ್ 2024-25ನೇ ಆರ್ಥಿಕ ವರ್ಷದಲ್ಲಿ 13 ಕೋ.ರೂ. ವ್ಯವಹಾರಿಕ ಲಾಭಗಳಿಸಿದೆ. ಸತತವಾಗಿ ಎನ್‌ಪಿಎ ಪ್ರಮಾಣ ಕಡಿಮೆಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷ ಶೇ.1.30 ಎನ್‌ಪಿಎ ದಾಖಲಿಸಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ.

ಬ್ಯಾಂಕ್‌ನ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾಖಲೆಯ ಲಾಭ ಮತ್ತು ಕನಿಷ್ಠ ಎನ್.ಪಿ.ಎ. ಜೊತೆಗೆ, 2024–2025ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದ, ಬ್ಯಾಂಕ್ ಸ್ಥಾಪನೆಯಾದಂದಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದ್ದು, ವಿತ್ತೀಯ ವರ್ಷದಲ್ಲಿ ಬೆಳ್ತಂಗಡಿ ಮತ್ತು ಬೆಳ್ಮಣ್’ನಲ್ಲಿ ಕ್ರಮವಾಗಿ 18ನೇ ಮತ್ತು 19ನೇ ಶಾಖೆಯನ್ನು ತೆರೆದಿದ್ದು, ಬೈಂದೂರ್‌ನಲ್ಲಿ ಶೀಘ್ರದಲ್ಲೇ ಶಾಖೆಯನ್ನು ತೆರೆಯಲಾಗುವುದು. ಅನಿವಾಸಿ ಭಾರತೀಯರಿಗೆ (ಎನ್‌ಆರ್‌ಐ) ಸೇವಾ ಸೌಲಭ್ಯವನ್ನು ನೀಡುವ ಕರ್ನಾಟಕದ ಪಟ್ಟಣ ಸಹಕಾರಿ ಬ್ಯಾಂಕುಗಳ ಪೈಕಿ ಎರಡನೇ ಬ್ಯಾಂಕ್ ಆಗಿರುತ್ತದೆ. ಬ್ಯಾಂಕಿನ ವ್ಯವಹಾರವು ರೂ. 1240 ಕೋಟಿ ತಲುಪಿದ್ದು, ಈ ಆರ್ಥಿಕ ವರ್ಷದ ಇನ್ನೊಂದು ಮಹತ್ವದ ಸಾಧನೆಯಾಗಿರುತ್ತದೆ.

ಕರ್ನಾಟಕ ರಾಜ್ಯದ್ಯಾಂತ ಕಾರ್ಯವ್ಯಾಪ್ತಿ ಹೊಂದಿರುವ ಎಮ್.ಸಿ.ಸಿ. ಬ್ಯಾಂಕ್, ಮಂಗಳೂರಿನಲ್ಲಿ ನವೀಕೃತಗೊಂಡ ಸುಸಜ್ಜಿತ ಆಡಳಿತ ಕಛೇರಿಯೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 19 ಶಾಖೆಗಳನ್ನು ಹೊಂದಿದ್ದು, 2024–25 ವಿತ್ತೀಯ ವರ್ಷದಲ್ಲಿ ದಾಖಲೆಯ ರೂ. 13.00 ಕೋಟಿ ವ್ಯವಹಾರಿಕ ಲಾಭವನ್ನು ಗಳಿಸಿದೆ. 2024–25 ವಿತ್ತೀಯ ವರ್ಷದಲ್ಲಿ ಗಣನೀಯ ಪ್ರಮಾಣದಲ್ಲಿ ಬ್ಯಾಂಕಿನ ವ್ಯವಹಾರ ಪ್ರಗತಿಯನ್ನು ದಾಖಲಿಸಿದ್ದು, ಬ್ಯಾಂಕಿನ ನಿವ್ವಳ ಮೌಲ್ಯ (Net Worth) ರೂ. 76.00 ಕೋಟಿಯಿಂದ ರೂ.86.68 ಕೋಟಿಗೆ ತಲುಪಿದೆ. ಬ್ಯಾಂಕಿನ ವ್ಯವಹಾರ ರೂ. 1240 ಕೋಟಿ ದಾಟಿದ್ದು ಕಳೆದ ವರ್ಷಕ್ಕಿಂತ ಶೇಕಡಾ 15 ಏರಿಕೆಯಾಗಿದೆ. ಒಟ್ಟು ಠೇವಣಿಯಲ್ಲಿ ಶೇಕಡಾ 11.00 ಪ್ರಗತಿ ಸಾಧಿಸಿದ್ದು, ರೂ.705.40 ಕೋಟಿ ಠೇವಣಿ, ಒಟ್ಟು ಮುಂಗಡದಲ್ಲಿ ಶೇಕಡಾ 20.37 ಪ್ರಗತಿ ಸಾಧಿಸಿದ್ದು ರೂ.535.49 ಕೋಟಿ ಮುಂಗಡಗಳು, ದುಡಿಯುವ ಬಂಡವಾಳ ರೂ.836.73 ಕೋಟಿ (ಪ್ರಗತಿ ಶೇಕಡಾ 11.13) ಮತ್ತು ಶೇರು ಬಂಡವಾಳ ರೂ.32.43 ಕೋಟಿ (ಪ್ರಗತಿ ಶೇಕಡಾ 3.91) ಆಗಿರುತ್ತದೆ. ಬ್ಯಾಂಕಿನ CRAR (Capital to Risk Assets Ratio) ಪ್ರಮಾಣವು ಶೇಕಡಾ 22.81 ಇದ್ದು ನಿಗದಿತ ಕನಿಷ್ಟ ಪ್ರಮಾಣ ಶೇಕಡಾ 12ಕ್ಕಿಂತ ಜಾಸ್ತಿಯಿರುತ್ತದೆ.

ಬ್ಯಾಂಕಿನ ಕಾರ್ಯವ್ಯಾಪ್ತಿಯು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದೆ. ಬ್ಯಾಂಕಿನ ವ್ಯವಹಾರವನ್ನು ಸಂಪೂರ್ಣ ಕೋರ್ ಬ್ಯಾಂಕಿಂಗ್ ಮುಖಾಂತರ ನಡೆಸುತ್ತಿದ್ದು, ಇತರ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ಎಲ್ಲಾ ಸೇವೆ ಮತ್ತು ಸೌಲಭ್ಯಗಳು ಎಮ್.ಸಿ.ಸಿ. ಬ್ಯಾಂಕಿನಲ್ಲೂ ದೊರೆಯುತ್ತವೆ. ಗ್ರಾಹಕರಿಗೆ ಕಡಿಮೆ ಬಾಡಿಗೆಯಲ್ಲಿ ಲಾಕರ್ ಸೌಲಭ್ಯ, ಕಡಿಮೆ ದರದಲ್ಲಿ ದೇಶ ವಿದೇಶ ವಿಧ್ಯಾ ಭವಿಷ್ಯ ಶಿಕ್ಷಣ ಸಾಲ, ಎಮ್.ಎಸ್.ಎಮ್.ಇ ವ್ಯವಹಾರ ಸಾಲ, ವಾಹನ ಸಾಲ, ವಸತಿ ಸಾಲ, ಮನೆ ಖರೀದಿ, ದುರಸ್ತಿ, ಮದುವೆ, ಗ್ರಹ ಉಪಯೋಗಿ ವಸ್ತು ಖರೀದಿ ಸಾಲವನ್ನು ತ್ವರಿತವಾಗಿ ನೀಡುತ್ತಿದೆ. ಸೇವಾ ಶುಲ್ಕವಿಲ್ಲದೆ ಚಿನ್ನಾಭರಣ ಸಾಲವನ್ನು ನೀಡುತ್ತಿದೆ. ಏಟಿಎಮ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೌಲಭ್ಯವನ್ನು ಉಚಿತವಾಗಿ ನೀಡುತ್ತಿದೆ. ಬ್ಯಾಂಕಿನಲ್ಲಿರುವ ಠೇವಣಿಗಳಿಗೆ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳಂತೆಯೇ ಭಾರತೀಯ ರಿಸರ್ವ್ ಬ್ಯಾಂಕಿನ ಡಿಪಾಜಿಟ್ ಇನ್ಸೂರೆನ್ಸ್ ಆ್ಯಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್‌ನಿಂದ (DICGC) ವಿಮಾ ಸೌಲಭ್ಯವಿದೆ.
ಮುಂದಿನ ಕಾರ್ಯಯೋಜನೆಗಳು:
1) ಜುಲೈ ಅಂತ್ಯದೊಳಗೆ ಬೈಂದೂರಿನಲ್ಲಿ 20ನೇ ಶಾಖೆ
2) ಜೂನ್ ಅಂತ್ಯದೊಳಗೆ ಸ್ವಂತ ಕಟ್ಟಡಕ್ಕೆ ಕುಲಶೇಖರ ಶಾಖೆಯ ಸ್ಥಳಾಂತರ
3) ಗೂಗಲ್ ಪೇ, ಫೊನ್ ಪೇ, ಯುಪಿಎ ಸೌಲಭ್ಯಗಳು
4) ಮಾರ್ಚ್ ಅಂತ್ಯದೊಳಗೆ ರೂ. 1500 ಕೋಟಿ ವ್ಯವಹಾರದ ಗುರಿ
ಬ್ಯಾಂಕಿನ ಸದಸ್ಯರು ಬ್ಯಾಂಕಿನ ಪ್ರಸಕ್ತ ಆಡಳಿತ ಮಂಡಳಿಗೆ ನೀಡಿದ ಬೆಂಬಲ, ಗ್ರಾಹಕರ ವಿಶ್ವಾಸ ಮತ್ತು ಅಧಿಕಾರಿವರ್ಗ ಹಾಗೂ ಸಿಬ್ಬಂದಿಯ ಶ್ರಮದಿಂದ ಇದು ಸಾಧ್ಯವಾಗಿದೆ. ಜೊತೆಗೆ ಸಾಕಷ್ಟು ಅನಿವಾಸಿ ಭಾರತೀಯರು ಬ್ಯಾಂಕಿನಲ್ಲಿ ವ್ಯವಹಾರ ಮತ್ತು ಹೂಡಿಕೆಯನ್ನು ಮಾಡಿರುತ್ತಾರೆ.

ಪತ್ರಿಕಾ ಗೋಷ್ಠಿಯಲ್ಲಿ ಅನಿಲ್ ಲೋಬೊ – ಅಧ್ಯಕ್ಷರು, ಜೆರಾಲ್ಡ್ ಜೂಡ್ ಡಿಸಿಲ್ವ – ಉಪಾಧ್ಯಕ್ಷರು, ನಿರ್ದೇಶಕರಾದ – ಆಂಡ್ರ್ಯೂ ಡಿಸೊಜಾ, ಡಾ| ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೊಡ್ರಿಗಸ್, ಡೇವಿಡ್ ಡಿಸೊಜಾ, ಎಲ್ರೊಯ್ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೊಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಡಿಸೊಜಾ, ಆಲ್ವಿನ್ ಪಿ. ಮೊಂತೆರೊ, ಫೆಲಿಕ್ಸ್ ಡಿಕ್ರೂಜ್, ಶರ್ಮಿಳಾ ಮಿನೇಜಸ್ ಹಾಗೂ ಮಹಾ ಪ್ರಬಂದಕರು – ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಒಂದು ಗಂಟೆ SEXಗೆ ಬರೋಬ್ಬರಿ 50 ಸಾವಿರ ರೂ.- ಅಮೆರಿಕದ ಹೈಟೆಕ್‌ ವೇಶ್ಯಾವಾಟಿಕೆ ಅಡ್ಡೆಗೆ ತೆರಳಿದ್ದ ಆರೋಪದಲ್ಲಿ ಭಾರತೀಯ ಮೂಲದ ಉದ್ಯಮಿ ಬಂಧನ

Next Post

ದೂರು ನೀಡಿದ ದ್ವೇಷದಿಂದ ಬೆಂಕಿ ಹಚ್ಚಿದ ದುಷ್ಕರ್ಮಿ; ಚಿಕಿತ್ಸೆ ಫಲಕಾರಿಯಾಗದೆ ಕಾಸರಗೋಡಿನ ಮಹಿಳೆ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವು

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
19
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
23
Next Post
ದೂರು ನೀಡಿದ ದ್ವೇಷದಿಂದ ಬೆಂಕಿ ಹಚ್ಚಿದ ದುಷ್ಕರ್ಮಿ; ಚಿಕಿತ್ಸೆ ಫಲಕಾರಿಯಾಗದೆ ಕಾಸರಗೋಡಿನ ಮಹಿಳೆ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವು

ದೂರು ನೀಡಿದ ದ್ವೇಷದಿಂದ ಬೆಂಕಿ ಹಚ್ಚಿದ ದುಷ್ಕರ್ಮಿ; ಚಿಕಿತ್ಸೆ ಫಲಕಾರಿಯಾಗದೆ ಕಾಸರಗೋಡಿನ ಮಹಿಳೆ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವು

Discussion about this post

Recent News

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
38
ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
19
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d