• About us
  • Contact us
  • Disclaimer
Wednesday, July 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು : ಮೇ 17 ಮತ್ತು 18 ರಂದು ಕದ್ರಿ ಉದ್ಯಾನವನದಲ್ಲಿ ರಾಜ್ಯ ಮಟ್ಟದ ಗೇರು ಮೇಳ.

Coastal Times by Coastal Times
May 15, 2026
in ಕರಾವಳಿ
ಮಂಗಳೂರು : ಮೇ 17 ಮತ್ತು 18 ರಂದು ಕದ್ರಿ ಉದ್ಯಾನವನದಲ್ಲಿ ರಾಜ್ಯ ಮಟ್ಟದ ಗೇರು ಮೇಳ.
29
VIEWS
WhatsappTelegramShare on FacebookShare on Twitter

ಮಂಗಳೂರು : ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಸಹಯೋಗದಲ್ಲಿ ‘ಕರ್ನಾಟಕ ಗೇರು ಮೇಳ ಮತ್ತು ಕಾರ್ಯಾಗಾರ- 2026’ ಮೇ 17 ಮತ್ತು 18ರಂದು ನಗರದ ಕದ್ರಿ ಉದ್ಯಾನವನದಲ್ಲಿ ನಡೆಯಲಿದ್ದು ಮೇಳ ವೀಕ್ಷಣೆಗೆ ಬಂದ ಅಗತ್ಯ ಇರುವ ಸಾರ್ವಜನಿಕರಿಗೆ ಉಚಿತವಾಗಿ ಗೇರು ಗಿಡ ವಿತರಿಸಲಾಗುವುದೆಂದು ನಿಗಮದ ಅಧ್ಯಕ್ಷೆ ಮಮತಾ ಡಿ.ಗಟ್ಟಿ ತಿಳಿಸಿದರು.

ತಮ್ಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 17ರಂದು ಬೆಳಿಗ್ಗೆ 11 ಗಂಟೆಗೆ ಸ್ಪೀಕರ್ ಯು.ಟಿ. ಖಾದರ್ ಅವರು ಗೇರು ಮೇಳವನ್ನು ಉದ್ಘಾಟಿಸಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಬಿ. ಖಂಡ್ರೆ ಸಮಾರಂಭ ಉದ್ಘಾಟಿಸಲಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಮತ್ತು ಗೇರು ಮೇಳದ ನಿಗಮ ಮಂಡಳಿಯ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು .

ಮೇ 17 ಮತ್ತು 18ರಂದು ಗೇರು ಕೃಷಿ ಕುರಿತು ತಾಂತ್ರಿಕ ಕಾರ್ಯಾಗಾರಗಳು ನಡೆಯಲಿವೆ. ಗೇರು ಸಂಶೋಧನಾ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಡಾ. ಜಿ. ದಿನಕರ ಉಳ್ಳಾಳ್ ಹಾಗೂ ಹಿರಿಯ ವಿಜ್ಞಾನಿ ಡಾ. ವೀಣಾ ಜಿ.ಎಲ್. ಆಧುನಿಕ ತಂತ್ರಜ್ಞಾನ, ಗೇರು ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಕುರಿತು ಮಾಹಿತಿ ನೀಡಲಿದ್ದಾರೆ. ಪ್ರಗತಿಪರ ರೈತ ಸುಭಾಷ್ ರೈ ಗೇರು ಕೃಷಿಯ ಅನುಭವ ಹಂಚಿಕೊಳ್ಳಲಿದ್ದಾರೆ.

ಮೇ 18ರಂದು ನಡೆಯುವ ತಾಂತ್ರಿಕ ಅಧಿವೇಶನದಲ್ಲಿ ಕೆಸಿಎಂಡಿ ಮಾಜಿ ಅಧ್ಯಕ್ಷ ಪ್ರಕಾಶ್ ಕಲ್ಬಾವಿ ‘ರಾಜ್ಯ ಮಟ್ಟದ ಗೇರು ಮೇಳ’ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. ಹುಬ್ಬಳ್ಳಿಯ ಗೇರು ಮತ್ತು ಕೋಕೋ ನಿರ್ದೇಶನಾಲಯದ ಮಾಜಿ ನಿರ್ದೇಶಕ ಡಾ. ವೆಂಕಟೇಶ್ ಎನ್.ಹುಬ್ಬಳ್ಳಿ ಹಾಗೂ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಂಯೋಜಕ ಡಾ.ಸಿ.ಸುನಿಲ್ ಯೋಜನೆಗಳು ಹಾಗೂ ನರ್ಸರಿಗಳ ಮಾನ್ಯತೆ ಕುರಿತು ರೈತರಿಗೆ ಮಾಹಿತಿ ನೀಡಲಿದ್ದಾರೆ.

ಗೇರು ಬೆಳೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ಪ್ರಗತಿಪರ ರೈತರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು . ಸಾರ್ವಜನಿಕರು ಹಾಗೂ ರೈತರಿಗೆ ಮೇಳದಲ್ಲಿ ಉಚಿತ ಪ್ರವೇಶವಿದ್ದು, ರೈತರ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ 70ಕ್ಕೂ ಹೆಚ್ಚು ಉಚಿತ ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತಿದೆ. ವಿದ್ಯಾರ್ಥಿಗಳಿಗಾಗಿ ಭಾಷಣ ಹಾಗೂ ಚಿತ್ರಕಲಾ ಸ್ಪರ್ಧೆ, ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮೇಳಕ್ಕೆ ಆಗಮಿಸುವ ಸಾರ್ವಜನಿಕರಿಗೆ ಉಚಿತವಾಗಿ ಗೇರು ಹಣ್ಣಿನ ಜ್ಯೂಸ್ ವಿತರಿಸಲಾಗುವುದು ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ರಸ್ತೆಯುದ್ಧಕ್ಕೂ ಆಯಿಲ್ ಸೋರಿಕೆ, ಜಾರಿ ಬಿದ್ದ ದ್ವಿಚಕ್ರ ವಾಹನ ಸವಾರರು; ಕ್ಯಾಂಟರ್ ತಡೆದು ಸ್ಥಳೀಯರಿಂದ ಪ್ರತಿಭಟನೆ

Next Post

ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಎಸ್ ಶೆಟ್ಟಿ; ರಾಷ್ಟ್ರೀಯ ಜಲಕ್ರೀಡಾಕೂಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆ

Related Posts

ಮಂಗಳೂರು: ಮುಳುಗುತ್ತಿದ್ದ ಮೀನುಗಾರಿಕಾ ಬೋಟಿನಲ್ಲಿದ್ದ ಆರು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್
ಕರಾವಳಿ

ಮಂಗಳೂರು: ಮುಳುಗುತ್ತಿದ್ದ ಮೀನುಗಾರಿಕಾ ಬೋಟಿನಲ್ಲಿದ್ದ ಆರು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್

June 30, 2026
33
ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕ್ನನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್
ಕರಾವಳಿ

ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕ್ನನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್

June 30, 2026
43
Next Post
ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಎಸ್ ಶೆಟ್ಟಿ; ರಾಷ್ಟ್ರೀಯ ಜಲಕ್ರೀಡಾಕೂಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆ

ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಎಸ್ ಶೆಟ್ಟಿ; ರಾಷ್ಟ್ರೀಯ ಜಲಕ್ರೀಡಾಕೂಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆ

Discussion about this post

Recent News

ಮಂಗಳೂರು: ಮುಳುಗುತ್ತಿದ್ದ ಮೀನುಗಾರಿಕಾ ಬೋಟಿನಲ್ಲಿದ್ದ ಆರು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್

ಮಂಗಳೂರು: ಮುಳುಗುತ್ತಿದ್ದ ಮೀನುಗಾರಿಕಾ ಬೋಟಿನಲ್ಲಿದ್ದ ಆರು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್

June 30, 2026
33
ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕ್ನನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್

ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕ್ನನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್

June 30, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಮುಳುಗುತ್ತಿದ್ದ ಮೀನುಗಾರಿಕಾ ಬೋಟಿನಲ್ಲಿದ್ದ ಆರು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್

ಮಂಗಳೂರು: ಮುಳುಗುತ್ತಿದ್ದ ಮೀನುಗಾರಿಕಾ ಬೋಟಿನಲ್ಲಿದ್ದ ಆರು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್

June 30, 2026
ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕ್ನನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್

ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕ್ನನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್

June 30, 2026
ಮುಂಬೈನಿಂದ ಕೇರಳಕ್ಕೆ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಪಣಂಬೂರು ಬಳಿ ಕಾರು ಅಡ್ಡಗಟ್ಟಿ ದರೋಡೆ

ಮುಂಬೈನಿಂದ ಕೇರಳಕ್ಕೆ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಪಣಂಬೂರು ಬಳಿ ಕಾರು ಅಡ್ಡಗಟ್ಟಿ ದರೋಡೆ

June 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d