• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮುಂಬೈ ಉದ್ಯಮಿ ಐಕಳ ಹರೀಶ್ ಶೆಟ್ಟಿ ಮನೆಯಿಂದ 2 ಕೆಜಿ ಆಭರಣ ಕಳವು; ಇಬ್ಬರ ಬಂಧನ

Coastal Times by Coastal Times
June 15, 2023
in ಕ್ರೈಮ್ ನ್ಯೂಸ್
ಮುಂಬೈ ಉದ್ಯಮಿ ಐಕಳ ಹರೀಶ್ ಶೆಟ್ಟಿ ಮನೆಯಿಂದ 2 ಕೆಜಿ ಆಭರಣ ಕಳವು; ಇಬ್ಬರ ಬಂಧನ
156
VIEWS
WhatsappTelegramShare on FacebookShare on Twitter

ಮಂಗಳೂರು: ಮೂಲ್ಕಿಯ ತಾಳಿಪಾಡಿಗುತ್ತು ಗ್ರಾಮದ ಗುತ್ತಕಾಡು ಐಕಳ ಹರೀಶ್ ಶೆಟ್ಟಿ ಅವರ ಮನೆಯಿಂದ 2 ಕೆಜಿ ಚಿನ್ನಾಭರಣ ಕಳವಾದ ಪ್ರಕರಣವನ್ನು ಭೇದಿಸಿರುವ ಸಿಸಿಬಿ ಪೊಲೀಸರು ಒಂದು ಕೆಜಿ 5 ಗ್ರಾಂ ಆಭರಣ ವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ್ದಾರೆ.‌

ಕಳೆದ ಜನವರಿ 15ರಂದು ರಾತ್ರಿ ಹರೀಶ್ ಶೆಟ್ಟಿ ಅವರು ಮನೆಯ ಬಾಗಿಲಿನ ಕೀಲಿ ಮುರಿದು ಚಿ‌ನ್ನ ಮತ್ತು ಬೆಳ್ಳಿಯ ಆಭರಣ ಹಾಗೂ ನಗದು ಕದ್ದಿದ್ದರು. ಸಿಸಿಟಿವಿ ದೃಶ್ಯಾವಳಿ ಅಥವಾ ಇತರ ಸಾಕ್ಷ್ಯಗಳು ಲಭಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. ಎಸಿಪಿ ಪಿ.ಎ ಹೆಗ್ಡೆ ಅವರ ನೇತೃತ್ವದಲ್ಲಿ ತನಿಖೆ ನಡೆಸಿದ ತಂಡದವರು ಕಾರ್ಕಳ ತಾಲ್ಲೂಕಿನ ಬಜಗೋಳಿಯ ಗಣೇಶ್ ನಾಯ್ಕ್ (26) ಮತ್ತು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಹಳೆ ಸಿದ್ದಾಪುರದ ಗುಯ್ಯಾ ಗ್ರಾಮ ನಿವಾಸಿ ರಂಜಿತ್ ಕೆ.ಆರ್‌ (26) ಎಂಬವರನ್ನು ಬಂಧಿಸಿದ್ದಾರೆ’ ಎಂದು ನಗರ ಪೊಲೀಸ್ ಕಮಿಷನರ್‌ ಕುಲದೀಪ್ ಕುಮಾರ್ ಜೈನ್ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅತ್ಯಂತ ಕ್ಲಿಷ್ಟಕರವಾಗಿದ್ದ ಪ್ರಕರಣವನ್ನು ಭೇದಿಸಿದ ಸಿಸಿಬಿ ತಂಡಕ್ಕೆ ರೂ. 10 ಪಾರಿತೋಷಕ ನೀಡಲಾಗುವುದು ಎಂದರು. ಮನೆ ಮಾಲೀಕರ ಹೇಳಿಕೆ ಪ್ರಕಾರ 2 ಕೆಜಿ ಚಿನ್ನ ಕಳವಾಗಿದೆ. ಹೀಗಾಗಿ ಉಳಿದಿರುವ 1 ಕೆಜಿಯಷ್ಟು ಚಿನ್ನವನ್ನು ವಶಪಡಿಸಿಕೊಳ್ಳಬೇಕಾಗಿದೆ. 2 ಮೊಬೈಲ್ ಫೋನ್‌ಗಳು ಮತ್ತು ಕೃತ್ಯಕ್ಕೆ ಬಳಿಸಿದ ಕಬ್ಬಿಣದ ರಾಡ್ ಕೂಡ ಲಭಿಸಿದೆ. ವಶಪಡಿಸಿಕೊಂಡ ಸ್ವತ್ತಿನ ಒಟ್ಟು ಮೌಲ್ಯ ರೂ. 56,50,000 ಆಗಬಹುದು. ಪ್ರಮುಖ ಆರೋಪಿಗಳಿಬ್ಬರು ಕೇರಳ ಭಾಗದಲ್ಲಿ ತಲೆಮರೆಸಿಕೊಂಡಿದ್ದು ಸದ್ಯದಲ್ಲೇ ಬಂಧಿಸುವ ವಿಶ್ವಾಸವಿದೆ ಎಂದು ಅವರು ವಿವರಿಸಿದರು.

ಬಂಧಿತ ಆರೋಪಿ ಗಣೇಶ್ ಮೇಲೆ ಈ ಹಿಂದೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿತ್ತು. ಈತ ಮತ್ತು ಇತರ ಇಬ್ಬರು ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಕೆಳರಾಯಿ ಚರ್ಚ್ ರಸ್ತೆಯ ಮನೆಯೊಂದರ ಬಾಗಿಲಿನ ಬೀಗ ಒಡೆದು ಬೆಲೆಬಾಳುವ ವಸ್ತುಗಳು ಹಾಗೂ ಬ್ರೀಝಾ ಕಾರು ಕದ್ದಿದ್ದು ಈ ಪ್ರಕರಣವೂ ಈಗ ಬೆಳಕಿಗೆ ಬಂದಿದೆ. ಕಾರು ವಶಪಡಿಸಿಕೊಳ್ಳಲಾಗಿದೆ. ತನಿಖೆಯಲ್ಲಿ ಇನ್‌ಸ್ಪೆಕ್ಟರ್ ಶ್ಯಾಮ್ ಸುಂದರ್ ಎಚ್.ಎಂ, ಪಿಎಸ್ಐ ರಾಜೇಂದ್ರ ಬಿ, ಸುದೀಪ್ ಎಂ.ವಿ, ಶರಣಪ್ಪ ಭಂಡಾರಿ, ಎಎಸ್ಐ ಶಶಿಧರ ಶೆಟ್ಟಿ, ಹರೀಶ್, ಮೋಹನ್ ಕೆ.ವಿ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು ಎಂದು ಕುಲದೀಪ್ ಕುಮಾರ್ ಜೈನ್ ತಿಳಿಸಿದರು.

ಉಪ ಪೊಲೀಸ್ ಕಮಿಷನರ್‌ರಾದ ಅನ್ಶು ಕುಮಾರ್, ಬಿ.ಪಿ.ದಿನೇಶ್ ಕುಮಾರ್, ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್‌ ಪಿ.ಎ ಹೆಗ್ಡೆ ಮತ್ತು ಇನ್‌ಸ್ಪೆಕ್ಟರ್ ಶ್ಯಾಮಸುಂದರ್ ಇದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಮೀಟರ್ ರೀಡರ್ ಎಡವಟ್ಟು ; ಮನೆಗೆ 7.71 ಲಕ್ಷ ರೂ. ವಿದ್ಯುತ್ ಬಿಲ್ ನೀಡಿದ್ದ ಸಿಬ್ಬಂದಿ!

Next Post

ಮಂಗಳೂರಿನಲ್ಲಿ ಏಂಟಿ ಕಮ್ಯುನಲ್ ವಿಂಗ್ ಅಸ್ತಿತ್ವಕ್ಕೆ ; ಇನ್ಸ್ ಪೆಕ್ಟರ್ ಶರೀಫ್ ನೇತೃತ್ವ

Related Posts

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
58
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ
ಕ್ರೈಮ್ ನ್ಯೂಸ್

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
Next Post
ಮಂಗಳೂರಿನಲ್ಲಿ ಏಂಟಿ ಕಮ್ಯುನಲ್ ವಿಂಗ್ ಅಸ್ತಿತ್ವಕ್ಕೆ ; ಇನ್ಸ್ ಪೆಕ್ಟರ್ ಶರೀಫ್ ನೇತೃತ್ವ

ಮಂಗಳೂರಿನಲ್ಲಿ ಏಂಟಿ ಕಮ್ಯುನಲ್ ವಿಂಗ್ ಅಸ್ತಿತ್ವಕ್ಕೆ ; ಇನ್ಸ್ ಪೆಕ್ಟರ್ ಶರೀಫ್ ನೇತೃತ್ವ

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
58
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d