ಉಡುಪಿ: ರಾಜ್ಯದ ಪ್ರಸಿದ್ಧ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನಕ್ಕೆ ಪ್ರತಿ ದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ದೇವಿ ದರ್ಶನ ಪಡೆಯುತ್ತಾರೆ. ಇತ್ತೀಚೆಗೆ ತಮಿಳುನಾಡು ಮುಖ್ಯಮಂತ್ರಿ ಜೊಸೆಫ್ ವಿಜಯ್ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು ಮರಳಿದ್ದರು. ಇದರ ಬೆನ್ನಲ್ಲೇ ಇದೀಗ ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರಿ ಅನಂತ್ ಅಂಬಾನಿ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಮೂಕಾಂಬಿಕೆ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಅಂಬಾನಿ ಕುಟುಂಬದ ಗುರೂಜಿ ಜೊತೆ ಅನಂತ್ ಅಂಬಾನಿ ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನಕ್ಕೆ ಆಗಮಿಸಿದ್ದರು. ಈ ವೇಳೆ ವಿಶೇಷ ಪೂಜೆ ಸಮರ್ಪಿಸಿದರು. ಮುಕಾಂಬಿಕಾ ಸನ್ನಿಧಾನದಲ್ಲಿ ಪೂಜೆ ಕೈಗೊಂಡರು. ದೇಗುಲಕ್ಕೆ ಆಗಮಿಸಿದ ಅನಂತ್ ಅಂಬಾನಿಗೆ ದೇವಾಲಯದ ಮಂಡಳಿ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ಜೂನ್ 13ರಂದು ಅನಂತ್ ಅಂಬಾನಿ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ದಿನಾಂಕ ನಿಗದಿಯಾಗಿತ್ತು. ಆದರೆ ಮುಂಬೈನಲ್ಲಿ ಭಾರಿ ಮಳೆ ಕಾರಣದಿಂದ ಪ್ರವಾಸ ಮುಂದೂಡಲಾಗಿತ್ತು. ಇಂದು ಸಂಜೆ ವೇಳೆಗೆ ಕೊಲ್ಲೂರು ಮೂಕಾಂಬಿಕೆ ತಲುಪಿದ ಅನಂತ್ ಅಂಬಾನಿ ದೇವಿ ದರ್ಶನ ಪಡೆದರು. ಜೂನ್ 12ರಂದು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಅವರು, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಭಕ್ತಿಪೂರ್ವಕವಾಗಿ ಬೆಳ್ಳಿಯ ಖಡ್ಗ ಅರ್ಪಿಸಿದ್ದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಎಂ, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪಯಣ ಬೆಳೆಸಿದ್ದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಪದಾಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದ್ದರು.
Discover more from Coastal Times Kannada
Subscribe to get the latest posts sent to your email.







Discussion about this post