• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾರಿನಲ್ಲಿ ಅಸ್ತಿಪಂಜರ ಪತ್ತೆ ಪ್ರಕರಣ: ಕಂಠಪೂರ್ತಿ ಕುಡಿಸಿ, ಸುಟ್ಟು ಹಾಕಿದ ನರಹಂತಕರು !

Coastal Times by Coastal Times
July 15, 2022
in ಕ್ರೈಮ್ ನ್ಯೂಸ್
ಕಾರಿನಲ್ಲಿ ಅಸ್ತಿಪಂಜರ ಪತ್ತೆ ಪ್ರಕರಣ: ಕಂಠಪೂರ್ತಿ ಕುಡಿಸಿ, ಸುಟ್ಟು ಹಾಕಿದ ನರಹಂತಕರು !
219
VIEWS
WhatsappTelegramShare on FacebookShare on Twitter

ಬೈಂದೂರು: ವೈಯಕ್ತಿಕ ಲಾಭದ ಕಾರಣಕ್ಕೆ ಹೊರ ಜಗತ್ತಿಗೆ ತಾನು ಸತ್ತು ಹೋಗಿದ್ದೇನೆ ಎಂದು ನಂಬಿಸಲು ಅಮಾಯಕ ವ್ಯಕ್ತಿಯೊಬ್ಬರನ್ನು ಒತ್ತಿನೆಣೆ ಸಮೀಪದ ಹೇನಬೇರು ಗ್ರಾಮದ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಸುಟ್ಟು ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲ್ಲೂಕಿನ ಮಾಳ ಗ್ರಾಮದ ಸದಾನಂದ ಶೇರೆಗಾರ್ (52) ಬಂಧಿತ ಆರೋಪಿ. ಕಾರ್ಕಳ ಮೂಲದ ಮೇಸ್ತ್ರಿ ಆನಂದ ದೇವಾಡಿಗ (55) ಕೊಲೆಯಾದ ನತದೃಷ್ಟ ವ್ಯಕ್ತಿ. ಕೊಲೆಗೆ ಸಹಕಾರ ನೀಡಿದ ಆರೋಪದ ಮೇಲೆ ಹಿರ್ಗಾನ ಶಿವನಗರದ ಶಿಲ್ಪಾ (30), ನಿತೀಶ್‌ ದೇವಾಡಿಗ (40), ಸತೀಶ್ ದೇವಾಡಿಗ (49) ಎಂಬುವರನ್ನೂ ಪೊಲೀಸರು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು ನಾಲ್ಕು ದಿನಗಳ ಪೊಲೀಸ್ ವಶಕ್ಕೆ ನೀಡಲಾಗಿದೆ.

ಪ್ರಕರಣದ ವಿವರ: ಆರೋಪಿ ಸದಾನಂದ ಶೇರೆಗಾರ್ ಕಾರ್ಕಳದಲ್ಲಿ ಖಾಸಗಿ ಸರ್ವೇಯರ್ ಆಗಿದ್ದು ವೈಯಕ್ತಿಕ ಲಾಭದ ಉದ್ದೇಶದಿಂದ ಹೊರ ಜಗತ್ತಿಗೆ ತಾನು ‌ಸತ್ತು ಹೋಗಿರುವುದಾಗಿ ನಂಬಿಸಲು ಸಂಚನ್ನು ರೂಪಿಸಿದ್ದ. ಅದರಂತೆ ಬೇರೊಬ್ಬ ವ್ಯಕ್ತಿಯನ್ನು ತನ್ನ ಕಾರಿನಲ್ಲಿ ಕೊಲೆ ಮಾಡಿ ಬೆಂಕಿ ಹಚ್ಚುವ ಸಂಚು ಹೆಣೆದಿದ್ದ. ಅದರಂತೆ ಪರಿಚಯಸ್ಥನಾಗಿದ್ದ ಕಾರ್ಕಳದ ಮೇಸ್ತ್ರಿ ಆನಂದ ದೇವಾಡಿಗ ಎಂಬುವರನ್ನು ಕರೆಸಿಕೊಂಡು ಕಂಠಪೂರ್ತಿ ಕುಡಿಸಿ, ನಿದ್ರೆ ಮಾತ್ರೆ ನುಂಗಿಸಿ ಬೈಂದೂರಿನ ಒತ್ತಿನೆಣೆಯ ಹೇನಬೇರು ಗ್ರಾಮದ ನಿರ್ಜನ ಪ್ರದೇಶಕ್ಕೆ ಕಾರು ತಂದು ಬೆಂಕಿ ಹಚ್ಚಲಾಗಿತ್ತು. ಕಾರಿನ ಹಿಂಬದಿಯಲ್ಲಿದ್ದ ಆನಂದ ದೇವಾಡಿಗ ದೇಹ ಸುಟ್ಟುಹೋಗಿ ಅಸ್ತಿಪಂಜರ ಪತ್ತೆಯಾಗಿತ್ತು. ಈ ಕೃತ್ಯಕ್ಕೆ ಶಿಲ್ಪಾ ಎಂಬುವರ ನೆರವನ್ನೂ ಪಡೆದಿದ್ದ ಎಂದು ಪೊಲೀಸರು ಪ್ರಕರಣದ ವಿವರ ನೀಡಿದರು.

ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ: ಕೃತ್ಯದ ಬಳಿಕ ಆರೋಪಿಗಳಾದ ಸದಾನಂದ ಹಾಗೂ ಶಿಲ್ಪಾ ತಲೆ ಮರೆಸಿಕೊಳ್ಳಲು ಬೆಂಗಳೂರಿಗೆ ಹೊರಟ್ಟಿದ್ದರು. ಬಸ್ ಮಾರ್ಗ ಮಧ್ಯೆ ಕೆಟ್ಟಿದ್ದರಿಂದ ಮೂಡುಬಿದ್ರಿಗೆ ವಾಪಾಸಾಗಿದ್ದರು. ಗುರುವಾರ ಮೂಡಬಿದ್ರೆಯಿಂದ ಕಾರ್ಕಳಕ್ಕೆ ಬರುವಾಗ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಕೃತ್ಯ ನಡೆದ ಒಂದೇ ದಿನದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಎಸ್‌ಪಿ ವಿಷ್ಣುವರ್ದನ್ ಮಾರ್ಗದರ್ಶನದಲ್ಲಿ, ಎಎಸ್‌ಪಿ ಸಿದ್ಧಲಿಂಗಯ್ಯ ಹಾಗೂ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ನಿರ್ದೇಶನದಲ್ಲಿ ಬೈಂದೂರು ಇನ್‌ಸ್ಪೆಕ್ಟರ್ ಸಂತೋಷ್ ಆನಂದ ಕಾಯ್ಕಿಣಿ ನೇತೃತ್ವದಲ್ಲಿ ಬೈಂದೂರು ಠಾಣಾಧಿಕಾರಿ ಪವನ್ ನಾಯಕ್, ಗಂಗೊಳ್ಳಿ ಠಾಣಾಧಿಕಾರಿ ವಿನಯ್ ಕೊರ್ಲಹಳ್ಳಿ, ಸಿಬ್ಬಂದಿ ಶ್ರೀನಿವಾಸ್, ಸುಜೀತ್, ಶಾಂತರಾಮ ಶೆಟ್ಟಿ, ನಾಗೇಂದ್ರ, ಮೋಹನ್, ಕೃಷ್ಣ, ಶ್ರೀಧರ್, ಚಂದ್ರ ಗಂಗೊಳ್ಳಿ, ಪ್ರಿನ್ಸ್ ಶಿರೂರು, ಚಾಲಕ ಚಂದ್ರಶೇಖರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಐವರು ಪಾರು

Next Post

‘ಮದುವೆಯಾಗಿಲ್ಲ , ಷರತ್ತುರಹಿತವಾದ ಪ್ರೇಮದಿಂದ ಆವರಿಸಲ್ಪಟ್ಟಿದ್ದೇನೆ’ : ಸುಶ್ಮಿತಾ ಸೇನ್.

Related Posts

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
33
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು
ಕ್ರೈಮ್ ನ್ಯೂಸ್

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
76
Next Post
‘ಮದುವೆಯಾಗಿಲ್ಲ , ಷರತ್ತುರಹಿತವಾದ ಪ್ರೇಮದಿಂದ ಆವರಿಸಲ್ಪಟ್ಟಿದ್ದೇನೆ’ : ಸುಶ್ಮಿತಾ ಸೇನ್.

‘ಮದುವೆಯಾಗಿಲ್ಲ , ಷರತ್ತುರಹಿತವಾದ ಪ್ರೇಮದಿಂದ ಆವರಿಸಲ್ಪಟ್ಟಿದ್ದೇನೆ’ : ಸುಶ್ಮಿತಾ ಸೇನ್.

Discussion about this post

Recent News

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
42
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
33
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d