ವಿಟ್ಲ: ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದು, ಮನೆಯೊಡತಿ ಮನೆಯೊಳಗೆ ಸಿಲುಕಿ ಹಾಕಿಕೊಂಡ ಘಟನೆ ಪರಿಯಲ್ತಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಕೂರೇಲು ಮದ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಬಿದ್ದು ಚಾವಣಿಗೆ ಸಂಪೂರ್ಣ ಹಾನಿಯಾಗಿದೆ. ಮನೆಯ ಒಳಗೆ ಮಹಿಳೆ ಮಲಗಿದ್ದ ಸಂದರ್ಭ ಘಟನೆ ನಡೆದಿದೆ. ವಾಹನವನ್ನು ತೆರವು ಮಾಡದೇ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯಿತು.
Discussion about this post