ಮಂಗಳೂರು, ಜುಲೈ 15 : ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳನ್ನು ಹಳೆಯ ಪರಿಚಯದಲ್ಲಿ ಸಲುಗೆ ಬೆಳೆಸಿ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯೋಲಜಿ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.
ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನೋಟ್ಸ್ ನೀಡುವ ನೆಪದಲ್ಲಿ ಕೃತ್ಯ : ಫಿಸಿಕ್ಸ್ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಹತ್ತಿರವಾಗಿದ್ದ. ಬಳಿಕ ಹಂತ ಹಂತವಾಗಿ ಚಾಟ್ ಮಾಡುವುದು, ನೋಟ್ಸ್ ನೀಡುವುದು ಮಾಡಿದ್ದ. ಹಾಗೆಯೇ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ ಉಪನ್ಯಾಸಕ, ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಅಷ್ಟೇ ಅಲ್ಲದೆ, ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ.
ಬ್ಲ್ಯಾಕ್ಮೇಲ್, ಮತ್ತೆ ರೇಪ್ : ಉಪನ್ಯಾಸಕ ನರೇಂದ್ರ ದುಷ್ಕೃತ್ಯ ಎಸಗಿದ ಬಳಿಕ ಬಯಾಲಜಿ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆ ಸಂದರ್ಭದಲ್ಲಿ ಆಕೆ ವಿರೋಧ ವ್ಯಕ್ತಪಡಿಸಿದ್ದಳು. ಆಗ, ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ತನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ’ ಎಂದು ಬ್ಲ್ಯಾಕ್ಮೇಲ್ ಮಾಡಿದ್ದ ಸಂದೀಪ್, ಅತ್ಯಾಚಾರ ಎಸಗಿದ್ದ.
ಸಂದೀಪ್ ಅತ್ಯಾಚಾರ ಕೃತ್ಯಕ್ಕೆ ಅನೂಪ್ ಎಂಬಾತನ ರೂಮ್ ಬಳಸಿದ್ದ. ಇದರ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ನೀನು ನನ್ನ ರೂಮ್ಗೆ ಬಂದಿರುವುದು ಕೊಠಡಿಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್ನಲ್ಲಿ ಸಿಸಿಟಿವಿ ಇದೆ ಎಂದು ಹೇಳಿ ತನಗೂ ಒಂದು ಅವಕಾಶ ಕೊಡುವಂತೆ ಬ್ಲಾಕ್ಮೇಲ್ ಮಾಡಿದ್ದ.
ಉಪನ್ಯಾಸಕರನ್ನು ಎದುರಿಸಲು ಸಾಧ್ಯವಾಗದೆ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ, ನಂತರ ಸಮಸ್ಯೆ ಹೆಚ್ಚಾಗಲು ಆರಂಭವಾದಾಗ ಕೃತ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೋಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆಗೆ ಕೌನ್ಸೆಲಿಂಗ್ ಮಾಡಿ ಪೊಲೀಸರಿಗೆ ದೂರು ಕೊಡಿಸಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿರುವ ಮಾರತಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಉಪನ್ಯಾಸಕರು ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿರುವ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಯತ್ತಿದೆ.
Discover more from Coastal Times Kannada
Subscribe to get the latest posts sent to your email.
Discussion about this post