ಭಾರತ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿ ತೇಲಾಡುತ್ತಿದೆ. ‘ಪ್ರತಿ ಮನೆಗೂ ತ್ರಿವರ್ಣ ಧ್ವಜ’ ಅಭಿಯಾನದಿಂದಾಗಿ, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ದೇಶದೆಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಕೆಂಪು ಕೋಟೆ ಮೇಲೆ ಸತತ 9ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ್ದಾರೆ. ದೇಶದ ಅಭಿವೃದ್ಧಿಗಾಗಿ ಯುವಕರು ತಮ್ಮ ಜೀವನದ ಮುಂದಿನ 25 ವರ್ಷಗಳನ್ನು ಮುಡಿಪಾಗಿಡಬೇಕು ಎಂದು ನಾನು ಒತ್ತಾಯಿಸುತ್ತೇನೆ. – ಮೋದಿ


ನಾವು ಸ್ವಾತಂತ್ರ್ಯವನ್ನು ಪಡೆದಾಗ ನಮ್ಮ ಅಭಿವೃದ್ಧಿಯ ಬಗ್ಗೆ ಹಲವರು ಅನುಮಾನಿಸಿದ್ದರು. ಆದರೆ, ಈ ನಾಡಿನ ಜನರಲ್ಲಿ ವಿಶೇಷತೆ ಇದೆ ಎಂದು ಅವರಿಗೆ ತಿಳಿದಿರಲಿಲ್ಲ. ಈ ಮಣ್ಣಿನ ವಿಶೇಷ ಏನೆಂಬುದು ಅವರಿಗೆ ಗೊತ್ತಿರಲಿಲ್ಲ ಭಾರತವು ಮಹತ್ವಾಕಾಂಕ್ಷೆಯ ರಾಷ್ಟ್ರ. ಒಗ್ಗಟ್ಟಿನ ಮನೋಭಾವದೊಂದಿಗೆ ಬದಲಾವಣೆಗಳನ್ನು ತರಲಾಗುತ್ತಿದೆ. ಭಾರತದ ನಾಗರಿಕರು ಸಕಾರಾತ್ಮಕ ಬದಲಾವಣೆಗಳನ್ನು ಬಯಸುತ್ತಾರೆ ಮತ್ತು ಅದಕ್ಕೆ ಕೊಡುಗೆ ನೀಡಲು ಬಯಸುತ್ತಾರೆ.
ಬುಡಕಟ್ಟು ಸಮುದಾಯದ ನಾಯಕರ ಹೋರಾಟದ ಉಲ್ಲೇಖ ನಾವು ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವಾಗ, ಬುಡಕಟ್ಟು ಸಮುದಾಯವನ್ನು ಮರೆಯಲು ಸಾಧ್ಯವಿಲ್ಲ. ಭಗವಾನ್ ಬಿರ್ಸಾ ಮುಂಡಾ, ಸಿಧು-ಕನ್ಹು, ಅಲ್ಲೂರಿ ಸೀತಾರಾಮ ರಾಜು, ಗೋವಿಂದ್ ಗುರು ಮುಂತಾದವರು ಸ್ವಾತಂತ್ರ್ಯ ಹೋರಾಟದ ಧ್ವನಿಯಾಗಿದ್ದರು. ಮಾತೃಭೂಮಿಯ ರಕ್ಷಣೆಗಾಗಿ ಈ ನಾಯಕರು ಬುಡಕಟ್ಟು ಸಮುದಾಯದಲ್ಲಿ ಹೋರಾಟದ ಕಿಚ್ಚು ಹಚ್ಚಿದ್ದರು ಎಂದು ಪ್ರಧಾನಿ ಹೇಳಿದರು.
ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಾಗಲಿ, ದೇಶವನ್ನು ಕಟ್ಟಿದವರಾಗಲಿ ಅವರಿಗೆ ಶಿರಬಾಗಿ ನಮಿಸುವ ದಿನವಿದು ಎಂದು ಹೇಳಿದ ನರೇಂದ್ರ ಮೋದಿ ಅವರು, ಡಾ.ರಾಜೇಂದ್ರ ಪ್ರಸಾದ್, ನೆಹರೂ, ಸರ್ದಾರ್ ಪಟೇಲ್, ಎಸ್‌ಪಿ ಮುಖರ್ಜಿ, ಲಾಲ್ ಬಹದ್ದೂರ್ ಶಾಸ್ತ್ರಿ, ದೀನದಯಾಳ್ ಉಪಾಧ್ಯಾಯ, ಜೆಪಿ ನಾರಾಯಣ್, ಲೋಹಿಯಾ, ವಿನೋಬಾ ಭಾವೆ, ನಾನಾಜಿ ದೇಶಮುಖ್, ಸುಬ್ರಮಣ್ಯ ಭಾರತಿ ಮುಂತಾದವರನ್ನು ಸ್ಮರಿಸಿದರು.
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಾವು ನಮ್ಮ ಅನೇಕ ರಾಷ್ಟ್ರನಾಯಕರನ್ನು ಸ್ಮರಿಸಿದ್ದೇವೆ. ಆಗಸ್ಟ್ 14 ರಂದು, ನಾವು ವಿಭಜನೆಯ ಭೀಕರತೆಯನ್ನು ನೆನಪಿಸಿಕೊಂಡಿದ್ದೇವೆ. ಕಳೆದ 75 ವರ್ಷಗಳಲ್ಲಿ ನಮ್ಮ ದೇಶವನ್ನು ಮುನ್ನಡೆಸಲು ಕೊಡುಗೆ ನೀಡಿದ ದೇಶದ ಎಲ್ಲಾ ನಾಗರಿಕರನ್ನು ಇಂದು ನೆನಪಿಸಿಕೊಳ್ಳುವ ದಿನವಾಗಿದೆ ಎಂದು ಮೋದಿ ಹೇಳಿದರು. ಈ ಸ್ವಾತಂತ್ರ್ಯ ದಿನದಂದು ನಾನು ಎಲ್ಲಾ ಭಾರತೀಯರು ಮತ್ತು ಭಾರತವನ್ನು ಪ್ರೀತಿಸುವವರನ್ನು ಅಭಿನಂದಿಸುತ್ತೇನೆ. ಹೊಸ ಸಂಕಲ್ಪದೊಂದಿಗೆ, ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ದಿನವಿದು
Discover more from Coastal Times Kannada
Subscribe to get the latest posts sent to your email.







Discussion about this post