• About us
  • Contact us
  • Disclaimer
Thursday, July 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

75ನೇ ಸ್ವಾತಂತ್ರ್ಯ ಸಂಭ್ರಮ, ಭಾರತ ಪ್ರಜಾಪ್ರಭುತ್ವದ ತಾಯಿ, ವಿವಿಧತೆಯಲ್ಲಿ ಏಕತೆಯೇ ಭಾರತದ ಶಕ್ತಿ ಎಂದ ಪ್ರಧಾನಿ ಮೋದಿ

Coastal Times by Coastal Times
August 15, 2022
in ರಾಷ್ಟ್ರೀಯ ಸುದ್ದಿ
75ನೇ ಸ್ವಾತಂತ್ರ್ಯ ಸಂಭ್ರಮ, ಭಾರತ ಪ್ರಜಾಪ್ರಭುತ್ವದ ತಾಯಿ, ವಿವಿಧತೆಯಲ್ಲಿ ಏಕತೆಯೇ ಭಾರತದ ಶಕ್ತಿ ಎಂದ ಪ್ರಧಾನಿ ಮೋದಿ
17
VIEWS
WhatsappTelegramShare on FacebookShare on Twitter

ಭಾರತ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿ ತೇಲಾಡುತ್ತಿದೆ. ‘ಪ್ರತಿ ಮನೆಗೂ ತ್ರಿವರ್ಣ ಧ್ವಜ’ ಅಭಿಯಾನದಿಂದಾಗಿ, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ದೇಶದೆಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಕೆಂಪು ಕೋಟೆ ಮೇಲೆ ಸತತ 9ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ್ದಾರೆ. ದೇಶದ ಅಭಿವೃದ್ಧಿಗಾಗಿ ಯುವಕರು ತಮ್ಮ ಜೀವನದ ಮುಂದಿನ 25 ವರ್ಷಗಳನ್ನು ಮುಡಿಪಾಗಿಡಬೇಕು ಎಂದು ನಾನು  ಒತ್ತಾಯಿಸುತ್ತೇನೆ. – ಮೋದಿ

ನಾವು ಸ್ವಾತಂತ್ರ್ಯವನ್ನು ಪಡೆದಾಗ ನಮ್ಮ ಅಭಿವೃದ್ಧಿಯ ಬಗ್ಗೆ ಹಲವರು ಅನುಮಾನಿಸಿದ್ದರು. ಆದರೆ, ಈ ನಾಡಿನ ಜನರಲ್ಲಿ ವಿಶೇಷತೆ ಇದೆ ಎಂದು ಅವರಿಗೆ ತಿಳಿದಿರಲಿಲ್ಲ. ಈ ಮಣ್ಣಿನ ವಿಶೇಷ ಏನೆಂಬುದು ಅವರಿಗೆ ಗೊತ್ತಿರಲಿಲ್ಲ ಭಾರತವು ಮಹತ್ವಾಕಾಂಕ್ಷೆಯ ರಾಷ್ಟ್ರ. ಒಗ್ಗಟ್ಟಿನ ಮನೋಭಾವದೊಂದಿಗೆ ಬದಲಾವಣೆಗಳನ್ನು ತರಲಾಗುತ್ತಿದೆ. ಭಾರತದ ನಾಗರಿಕರು ಸಕಾರಾತ್ಮಕ ಬದಲಾವಣೆಗಳನ್ನು ಬಯಸುತ್ತಾರೆ ಮತ್ತು ಅದಕ್ಕೆ ಕೊಡುಗೆ ನೀಡಲು ಬಯಸುತ್ತಾರೆ.

ಬುಡಕಟ್ಟು ಸಮುದಾಯದ ನಾಯಕರ ಹೋರಾಟದ ಉಲ್ಲೇಖ  ನಾವು ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವಾಗ, ಬುಡಕಟ್ಟು ಸಮುದಾಯವನ್ನು ಮರೆಯಲು ಸಾಧ್ಯವಿಲ್ಲ. ಭಗವಾನ್ ಬಿರ್ಸಾ ಮುಂಡಾ, ಸಿಧು-ಕನ್ಹು, ಅಲ್ಲೂರಿ ಸೀತಾರಾಮ ರಾಜು, ಗೋವಿಂದ್ ಗುರು ಮುಂತಾದವರು ಸ್ವಾತಂತ್ರ್ಯ ಹೋರಾಟದ ಧ್ವನಿಯಾಗಿದ್ದರು. ಮಾತೃಭೂಮಿಯ ರಕ್ಷಣೆಗಾಗಿ ಈ ನಾಯಕರು ಬುಡಕಟ್ಟು ಸಮುದಾಯದಲ್ಲಿ ಹೋರಾಟದ  ಕಿಚ್ಚು ಹಚ್ಚಿದ್ದರು ಎಂದು ಪ್ರಧಾನಿ ಹೇಳಿದರು.

ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಾಗಲಿ, ದೇಶವನ್ನು ಕಟ್ಟಿದವರಾಗಲಿ ಅವರಿಗೆ ಶಿರಬಾಗಿ ನಮಿಸುವ ದಿನವಿದು ಎಂದು ಹೇಳಿದ ನರೇಂದ್ರ ಮೋದಿ ಅವರು,  ಡಾ.ರಾಜೇಂದ್ರ ಪ್ರಸಾದ್, ನೆಹರೂ, ಸರ್ದಾರ್ ಪಟೇಲ್, ಎಸ್‌ಪಿ ಮುಖರ್ಜಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ, ದೀನದಯಾಳ್ ಉಪಾಧ್ಯಾಯ, ಜೆಪಿ ನಾರಾಯಣ್, ಲೋಹಿಯಾ, ವಿನೋಬಾ ಭಾವೆ, ನಾನಾಜಿ ದೇಶಮುಖ್, ಸುಬ್ರಮಣ್ಯ ಭಾರತಿ ಮುಂತಾದವರನ್ನು ಸ್ಮರಿಸಿದರು.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಾವು ನಮ್ಮ ಅನೇಕ ರಾಷ್ಟ್ರನಾಯಕರನ್ನು ಸ್ಮರಿಸಿದ್ದೇವೆ. ಆಗಸ್ಟ್ 14 ರಂದು, ನಾವು ವಿಭಜನೆಯ ಭೀಕರತೆಯನ್ನು ನೆನಪಿಸಿಕೊಂಡಿದ್ದೇವೆ. ಕಳೆದ 75 ವರ್ಷಗಳಲ್ಲಿ ನಮ್ಮ ದೇಶವನ್ನು ಮುನ್ನಡೆಸಲು ಕೊಡುಗೆ ನೀಡಿದ ದೇಶದ ಎಲ್ಲಾ ನಾಗರಿಕರನ್ನು ಇಂದು ನೆನಪಿಸಿಕೊಳ್ಳುವ ದಿನವಾಗಿದೆ ಎಂದು ಮೋದಿ ಹೇಳಿದರು. ಈ ಸ್ವಾತಂತ್ರ್ಯ ದಿನದಂದು ನಾನು ಎಲ್ಲಾ ಭಾರತೀಯರು ಮತ್ತು ಭಾರತವನ್ನು ಪ್ರೀತಿಸುವವರನ್ನು ಅಭಿನಂದಿಸುತ್ತೇನೆ. ಹೊಸ ಸಂಕಲ್ಪದೊಂದಿಗೆ, ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ದಿನವಿದು

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 900 ಕೆ.ಜಿ ಧವಸ ಧಾನ್ಯದಿಂದ ತಿರಂಗಾ ಕಲಾಕೃತಿ ರಚನೆ

Next Post

ಮಂಗಳೂರು ಬಿಕರ್ನಕಟ್ಟೆ 1837 ರಲ್ಲಿ ಭೀಕರ ರಣಕಟ್ಟೆಯಲ್ಲಿ ಬಲಿದಾನದ ಮೆಲುಕು

Related Posts

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು
ರಾಷ್ಟ್ರೀಯ ಸುದ್ದಿ

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
53
ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು
ರಾಷ್ಟ್ರೀಯ ಸುದ್ದಿ

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

July 7, 2026
60
Next Post
ಮಂಗಳೂರು ಬಿಕರ್ನಕಟ್ಟೆ 1837 ರಲ್ಲಿ ಭೀಕರ ರಣಕಟ್ಟೆಯಲ್ಲಿ ಬಲಿದಾನದ ಮೆಲುಕು

ಮಂಗಳೂರು ಬಿಕರ್ನಕಟ್ಟೆ 1837 ರಲ್ಲಿ ಭೀಕರ ರಣಕಟ್ಟೆಯಲ್ಲಿ ಬಲಿದಾನದ ಮೆಲುಕು

Discussion about this post

Recent News

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d