ಮಂಗಳೂರು: ಸ್ವಾತಂತ್ರ್ಯ ದಿನದ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.
77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಗೌರವ ವಂದನೆ ಸ್ವೀಕರಿಸಿ, ಸ್ವಾತಂತ್ರೋತ್ಸವದ ಸಂದೇಶ ನೀಡಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಸೌಹಾರ್ದ ಕೆಡಿಸುವ ವಿಚ್ಚಿದ್ರಕಾರಿ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುತ್ತಿದೆ. ಮತೀಯ ಗೂಂಡಾಗಿರಿ ನಡೆಯುವ ದಬ್ಬಾಳಿಕೆ, ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಕಡಿವಾಣ ಹಾಕುವ ಮೂಲಕ ಸಮಾಜದಲ್ಲಿ ಸಾಮರಸ್ಯದ ವಾತಾವರಣ ನಿರ್ಮಿಸಲಾಗುತ್ತಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
‘ರಾಷ್ಟ್ರೀಯ ವಿಪತ್ತು ಉಪಶಮನ ನಿಧಿಯಿಂದ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಐದು ಜಿಲ್ಲೆಗಳಲ್ಲಿ ರೂ.721 ಕೋಟಿ ಮೊತ್ತದಲ್ಲಿ ಭೂಕುಸಿತ ಹಾಗೂ ನೆರ ಅಪಾಯ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು’ ಎಂದರು.
‘ಸಸಿಹಿತ್ಲು ಕಿನಾರೆಯನ್ನು ಅಂತರರಾಷ್ಟ್ರೀಯ ಸರ್ಫಿಂಗ್ ತಾಣವನ್ನಾಗಿಸುವುದಕ್ಕಾಗಿ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ರೂಪಿಸಲಾಗುತ್ತಿದೆ ಕರಾವಳಿಯ ಕಿನಾರೆ ಪ್ರವಾಸೋದ್ಯಮ ಅಭಿವೃದ್ಧಿಗೆ ಕಾರ್ಯಪಡೆ ರಚಿಸಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಬಾಕಿ ಕಾಮಗಾರಿಗಳನ್ನು ಈ ವರ್ಷವೇ ಪೂರ್ಣಗೊಳಿಸಿ, ಎಲ್ಲಾ ಸರ್ಕಾರಿ ಸೇವೆಗಳನ್ನು ಒಂದೇ ಸೂರಿನಲ್ಲಿ ಒದಗಿಸಲಾಗುವುದು’ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಅಧಿಕಾರಿಗಳು ಹಾಗೂ ಇತರ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post