ಉಳ್ಳಾಲ, ಸೆ.15 : ಉಳ್ಳಾಲ ನಗರಸಭೆ ಸದಸ್ಯ ರವಿಚಂದ್ರ ಯಾನೆ ಪಾನಕ ರವಿ ನಗರಾಡಳಿತದ ವಿರುದ್ಧವೇ ಅರೆನಗ್ನವಾಗಿ ಪ್ರತಿಭಟಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಒಂದು ವೀಡಿಯೋ ತುಣುಕಲ್ಲಿ ನಗರಸಭೆಯ ಭ್ರಷ್ಟಾಚಾರದ ಬಗ್ಗೆ ರವಿ ಮಾತನಾಡಿದ್ದು ಕಟ್ಟಡಗಳಿಗೆ ಡೋರ್ ನಂಬರ್ ನೀಡಲು ನಗರಸಭೆಯ ಅಧ್ಯಕ್ಷರಾದ ಚಿತ್ರಕಲಾ, ಉಪಾಧ್ಯಕ್ಷ ಆಯೂಬ್ ಮಂಚಿಲರವರು ನಲ್ವತ್ತರಿಂದ ಐವತ್ತು ಸಾವಿರ ರೂಪಾಯಿಗಳನ್ನ ಪಡೆಯುತ್ತಾರೆಂದು ಆರೋಪಿಸಿದ್ದಾರೆ.
ತನ್ನ ಕ್ಷೇತ್ರಕ್ಕೆ ಅನುದಾನ ಮಂಜೂರಾದರೂ ಕಾಮಗಾರಿ ವಿಳಂಬಿಸಿದ ನಗರಾಡಳಿತದ ವಿರುದ್ಧ ಆಡಳಿತ ಕಾಂಗ್ರೆಸ್ ಪಕ್ಷದ ಸದಸ್ಯರಾದ ರವಿಚಂದ್ರ ಗಟ್ಟಿ ಅರೆ ನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ನಗರದಾದ್ಯಂತ ಸಂಗ್ರಹಿಸಿದ ತೆರಿಗೆ ಹಣವನ್ನೂ ನಗರಸಭೆಗೆ ಕಟ್ಟದೆ ಜನರಿಗೆ ಸೈಬರ್ ನಲ್ಲಿ ಮುದ್ರಿತ ನಕಲಿ ರಶೀದಿ ನೀಡಿ ವಂಚಿಸುತ್ತಿದ್ದು ಇದರಲ್ಲಿ ತುಳಸಿ, ಚಂದ್ರ ಮತ್ತು ಆರೋಗ್ಯ ಅಧಿಕಾರಿಗಳು ಶಾಮೀಲಾಗಿರುವುದಾಗಿ ಆರೋಪಿಸಿದ್ದಾರೆ. ಇದೀಗ ನೂತನವಾಗಿ ಬಂದಿರುವ ಪೌರಾಯುಕ್ತರು ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕ ಬೇಕೆಂದು ಒತ್ತಾಯಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post