ಮಂಗಳೂರು,ಸೆ 15 : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, “ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಮಂಗಳೂರು ದಕ್ಷಿಣವಲಯ ಹಾಗೂ ಬಿ. ಎಂ. ಪ್ರೌಢಶಾಲೆ, ಉಳ್ಳಾಲ ಇದರ ಸಂಯುಕ್ತಾಶ್ರಯದಲ್ಲಿ ದಿನಾಂಕ: 15 ಮತ್ತು 16 ಸೆಪ್ಟೆಂಬರ್ 2023 ಎರಡು ದಿನ ನಡೆಯಲಿರುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಫುಟ್ಬಾಲ್ ಪಂದ್ಯಾಟದ ಶುಕ್ರವಾರ ಮಂಗಳೂರಿನ ನೆಹರೂ ಮೈದಾನದಲ್ಲಿ ಉದ್ಘಾಟನೆ ಗೊಂಡಿತು .
ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿ.ಎಂ. ಶಾಲೆಯ ಸಂಚಾಲಕ ಎಸ್.ಎಸ್.ಸಾಲಿನ್ ಪಂದ್ಯದಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ, ಕ್ರೀಡಾಕೂಟ ಹಬ್ಬದ ವಾತಾವರಣದಲ್ಲಿ ನಡೆಯುತ್ತಿದ್ದು ಸಂಸ್ಥೆ ಅಚ್ಚುಕಟ್ಟಾಗಿ ನಿರ್ವಹಿಸಿದೆ ಎಂದು ಅಭಿಪ್ರಾಯಪಟ್ಟರು.
ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಫುಟ್ಬಾಲ್ ಪಂದ್ಯಾಟಕ್ಕೆ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಚಾಲನೆ ನೀಡಿ ಜೀವನದಲ್ಲಿ ಏನೇ ಪಡೆಯಬೇಕಾದರೂ ಸತತ ಪ್ರಯತ್ನ ಅಗತ್ಯ, ಪ್ರಸ್ತುತ ದಿನಗಳಲ್ಲಿ ಕ್ರಿಕೆಟ್, ಫುಟ್ಬಾಲ್ ಸಹಿತ ಇತರ ಆಟಗಳು ಮೊಬೈಲ್ ಗೆ ಸೀಮಿತಗೊಳಿಸದೆ ಮೈದಾನದಲ್ಲಿ ಆಡಿ ಸ್ನಾಯುಗಳನ್ನು ಗಟ್ಟಿಗೊಳಿಸಬೇಕು, ಜೊತೆಗೆ ದೈಹಿಕ ಆರೋಗ್ಯ ಕಾಪಾಡಬಹುದು ಎಂದು ತಿಳಿಸಿದರು.
ಈ ಸಂದರ್ಭ ಕ್ರೀಡಾ ಸಾಧಕರಾದ ಬಿ.ಎಂ.ಅಸ್ಲಂ, ಅಝಾದ್, ಡಾ.ಪ್ರಕಾಶ್ ಡಿಸೋಜ ಇವರನ್ನು ಸನ್ಮಾನಿಸಲಾಯಿತು.
ದಕ್ಷಿಣ ವಲಯ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಡಾ.ಪ್ರಶಾಂತ್ ಕುಮಾರ್ ಕೆ.ಎಸ್., ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಕಾರ್ಯದರ್ಶಿ ಮೋಹನ್ ಶಿರ್ಲಾಲ್, ಲಿಲ್ಲಿ ಪಾಯ್ಸ್ ಜಿಲ್ಲಾಧ್ಯಕ್ಷೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘ , ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆಎಂಕೆ ಮಂಜನಾಡಿ, ನೋಡೆಲ್ ಅಧಿಕಾರಿ ಪ್ರಮೋದ್, ಉಮೇಶ್ ಉಚ್ಚಿಲ್, ಬಿ.ಎಂ.ಅಸ್ಲಂ, ದೈಹಿಕ ಶಿಕ್ಷಣ ಶಿಕ್ಷಕಿ ಜಾನೆಟ್ ಮಾಬೆನ್, ಫುಟ್ಬಾಲ್ ತರಬೇತುದಾರ ಸಾಜಿದ್ ಮೊದಲಾದವರು ಉಪಸ್ಥಿತರಿದ್ದರು.
ಬಿ.ಎಂ.ಶಾಲೆಯ ಮುಖ್ಯಶಿಕ್ಷಕಿ ಜಯವಂತಿ ಸೋನ್ಸ್ ಸ್ವಾಗತಿಸಿದರು, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು., ಶಿಕ್ಷಕ ಯೋಗೀಶ್ ಪಿ. ವಂದಿಸಿದರು. ಶಿಕ್ಷಕಿ ಉಷಾ ಎಂ.ಕಾರ್ಯಕ್ರಮ ನಿರೂಪಿಸಿದರು,
Discover more from Coastal Times Kannada
Subscribe to get the latest posts sent to your email.
Discussion about this post