• About us
  • Contact us
  • Disclaimer
Tuesday, September 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

Coastal Times by Coastal Times
September 15, 2026
in ಕರಾವಳಿ
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ
9
VIEWS
WhatsappTelegramShare on FacebookShare on Twitter

ಮಂಗಳೂರು: ಬಂಟ ಸಮುದಾಯದವರು ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ಅನನ್ಯ ಸಾಧನೆ ಮಾಡಿದ್ದು, ಚಲನಚಿತ್ರ ರಂಗದಲ್ಲಂತೂ ಇವರು ಅಪೂರ್ವ ಕೊಡುಗೆ ನೀಡಿದ್ದಾರೆ. ಬಂಟರು ನಾಯಕತ್ವ ಗುಣ ಉಳ್ಳವರು, ಎದೆಗಾರಿಕೆ ಉಳ್ಳವರು, ನಾಯಕತ್ವದಲ್ಲಿ ಗೆದ್ದವರು, ಬಂಟರು ಇತರ ಸಮಾಜದವರನ್ನು ಪ್ರೀತಿ ಮಾಡಿದವರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಹೇಳಿದರು.

ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನಲ್ಲಿ ನಡೆಯುತ್ತಿರುವ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಥಮ ದಿನದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಉದ್ಯಮಿ ಬರೋಡ ಶಶಿಧರ ಶೆಟ್ಟಿ ಅವರು ಮಾತನಾಡಿ ಗಣೇಶೋತ್ಸವದ ಮೂಲ ಉದ್ದೇಶ ಸಂಘಟನೆ, ಐಕ್ಯತೆಯನ್ನು ಸಾರುವುದು, ಗಣಪನಿಗೆ ಮೊದಲ ಪೂಜೆ, ಬಂಟ್ಸ್ ಹಾಸ್ಟೇಲ್ ನ ಸಿದ್ದಿವಿನಾಯಕ ಪ್ರತಿಷ್ಠಾನದಲ್ಲಿ ನಡೆಯುವ ಗಣೇಶೋತ್ಸವ ಶಿಸ್ತು ಬದ್ದತೆಯಿಂದ ಕೂಡಿದೆ ಎಂದರು. ಉದ್ಯಮಿ ರಂಜಿತ್ ರೈ ಅವರು ಮಾತನಾಡಿ, ಇಲ್ಲಿ ನಡೆಯುವ ಗಣೇಶೋತ್ಸವ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಮೂಡದ ನೂತನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಪರಿಸರ ಹಾಗೂ ಪವಾಸೋದ್ಯಮ ನಿಗಮದ ಅಧ್ಯಕ್ಷೆ ಶಾರ್ಲೆಟ್ ಪಿಂಟೋ ಅವರನ್ನು ಅಭಿನಂದಿಸಲಾಯಿತು. ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಖ್ಯಾತ ವೈದ್ಯ ಡಾ.ಡಿ.ಸುರೇಶ್ ರಾವ್, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಬೇಲಾಡಿ ವಿಠಲ ಶೆಟ್ಟಿ, ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ಜಗದೀಶ್ ಶೆಟ್ಟಿ ಮಿಂಜಾ, ಖ್ಯಾತ ಕುಸ್ತಿ ಪಟು ಶೌರ್ಯ ಶೆಟ್ಟಿ ರೂಪದರ್ಶಿ ಬ್ರಿನಾಳ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಯು ಟಿ ಖಾದರ್ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಬಂಟರ ಮಾತೃ ಸಂಘದ ಕಾರ್ಯದರ್ಶಿಎಂ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ, ಟ್ರಸ್ಟಿ ರವಿರಾಜ ಶೆಟ್ಟಿ ನಿಟ್ಟೆಗುತ್ತು, ಕೃಷ್ಣಪ್ರಸಾದ್ ರೈ, ಡಾ ಆಶಾಜ್ಯೋತಿ ರೈ ವಿವಿಧ ಬಂಟರ ಸಂಘಗಳ ಅಧ್ಯಕ್ಷರಾದ ರವೀಂದ್ರ ರೈ ಕಲ್ಲಿಮಾರು, ತಿಮ್ಮಯ್ಯ ಶೆಟ್ಟಿ, ವಸಂತ ಶೆಟ್ಟಿ, ಆನಂದ ಶೆಟ್ಟಿ, ರಾಮಚಂದ್ರ ಕಾವ, ಮಿಥುನ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಪ್ರಸ್ತಾವಿಸಿ, ಸ್ವಾಗತಿಸಿದರು. ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲಬೈಲ್ ಹಾಗೂ ಡಾ.ಕವಿತಾ ಪಕ್ಕಳ ಕಾರ್ಯಕ್ರಮ ನಿರೂಪಿಸಿದರು

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

Related Posts

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ
ಕರಾವಳಿ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
16
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ
ಕರಾವಳಿ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
20

Discussion about this post

Recent News

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
9
ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d