ಮಂಗಳೂರು, ಅ 15 : ಕೊರೊನಾ ಸೋಂಕಿನಿಂದ ಮೃತಪಟ್ಟ ಪತ್ರಕರ್ತ ಯಶವಂತ ಐಕಳ ಅವರ ಕುಟುಂಬಕ್ಕೆ ಆರ್ಥಿಕ ನೆರವು ಹಾಗೂ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್,ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕ ಸುಖ್ ಪಾಲ್ ಪೊಳಲಿ ಉಪಸ್ಥಿತರಿದ್ದರು.