• About us
  • Contact us
  • Disclaimer
Thursday, March 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಟಿ-20 ಮಾರ್ಷ್-ವಾರ್ನರ್ ಅಬ್ಬರ; ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

Coastal Times by Coastal Times
November 15, 2021
in ಕ್ರೀಡಾ ಸುದ್ದಿ
ಟಿ-20 ಮಾರ್ಷ್-ವಾರ್ನರ್ ಅಬ್ಬರ; ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ
12
VIEWS
WhatsappTelegramShare on FacebookShare on Twitter

ದುಬೈ: ತೀವ್ರ ಕುತೂಹಲ ಕೆರಳಿಸಿದ್ದ ಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಆಸ್ಟ್ರೇಲಿಯಾ, ಚೊಚ್ಚಲ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ಇಲ್ಲಿನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಾಯಕ ಕೇನ್ ವಿಲಿಯಮ್ಸ್ ನ್ ಅವರ ಅರ್ಧಶತಕದ ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ ಸವಾಲಿನ 172 ರನ್ ಗಳಿಸಿತು.

ನ್ಯೂಜಿಲೆಂಡ್ ನೀಡಿದ ಸವಾಲಿನ 173 ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ಆಸ್ಟ್ರೇಲಿಯಾ ತಂಡ ಡೇವಿಡ್ ವಾರ್ನರ್ ಅವರ 53 ಮತ್ತು ಮಿಚೆಲ್ ಮಾರ್ಷ್ ಅವರ ಆಕರ್ಷಕ 77 ರನ್ ಗಳ ನೆರವಿನಿಂದ ಇನ್ನೂ ಏಳು ಎಸೆತ ಬಾಕಿ ಇರುವಾಗಲೇ 8 ವಿಕೆಟ್ ಗಳಿಂದ 173 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.

ಮಾರ್ಷ್-ವಾರ್ನರ್ ಸ್ಫೋಟಕ ಅರ್ಧಶತಕ, ಆಸ್ಟ್ರೇಲಿಯಾ ವಿಶ್ವ ಚಾಂಪಿಯನ್.

ಸವಾಲಿನ ಗುರಿ ಬೆನ್ನತ್ತಿದ ಆಸೀಸ್ ಆರಂಭ ಉತ್ತಮವಾಗಿರಲಿಲ್ಲ. 5 ರನ್ ಗಳಿಸಿದ ನಾಯಕ ಆ್ಯರನ್ ಫಿಂಚ್ ಎಡಗೈ ವೇಗಿ ಟ್ರೆಂಟ್ ಬೌಲ್ಟ್ ದಾಳಿಯಲ್ಲಿ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದರು.

ಈ ಹಂತದಲ್ಲಿ ಜೊತೆಗೂಡಿದ ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಮಾರ್ಷ್ ಸಮರ್ಥವಾಗಿ ಕಿವೀಸ್ ಬೌಲರ್‌ಗಳನ್ನು ಎದುರಿಸಿದರು. ವಾರ್ನರ್ ರಕ್ಷಣಾತ್ಮಕ ಆಟಕ್ಕೆ ಒತ್ತು ಕೊಟ್ಟರೆ ಮಾರ್ಷ್ ಆಕ್ರಮಣಕಾರಿಯಾಗಿ ಆಡುವ ಮೂಲಕ ಗಮನ ಸೆಳೆದರು.

ಅಲ್ಲದೆ ಆಕರ್ಷಕ ಅರ್ಧಶತಕದ ಜೊತೆಯಾಟದಲ್ಲಿ ಭಾಗಿಯಾದರು. 10 ಓವರ್ ಅಂತ್ಯಕ್ಕೆ ಆಸೀಸ್ ಒಂದು ವಿಕೆಟ್ ನಷ್ಟಕ್ಕೆ 82 ರನ್ ಗಳಿಸಿತ್ತು. ಅಂತಿಮ 60 ಎಸೆತಗಳಲ್ಲಿ ಗೆಲುವಿಗೆ 91 ರನ್ ಅಗತ್ಯವಿತ್ತು.

ಬಳಿಕ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ವಾರ್ನರ್ 34 ಎಸೆತಗಳಲ್ಲಿ ಅರ್ಧಶತಕ ಸಾಧನೆ ಮಾಡಿದರು. ಅಲ್ಲದೆ ಮಾರ್ಷ್ ಜೊತೆಗೂಡಿ ಎರಡನೇ ವಿಕೆಟ್‌ಗೆ 92 ರನ್‌ಗಳ ಅಮೂಲ್ಯ ಜೊತೆಯಾಟ ಕಟ್ಟಿದರು.

ಅತ್ತ ಆಸೀಸ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಮಾರ್ಷ್ ಕೇವಲ 31 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಅವರಿಗೆ ಗ್ಲೆನ್ ಮ್ಯಾಕ್ಸ್‌ವೆಲ್ ಅವರಿಂದಲೂ ಉತ್ತಮ ಬೆಂಬಲ ದೊರಕಿತು. ಇದರಿಂದಾಗಿ ನಾಯಕ ಕೇನ್ ವಿಲಿಯಮ್ಸನ್ ಮಾಡಿದ ಯಾವ ರಣನೀತಿಯೂ ಫಲಿಸಲಿಲ್ಲ.

ಮಾರ್ಷ್ ಹಾಗೂ ಮ್ಯಾಕ್ಸ್‌ವೆಲ್ ಮುರಿಯದ ಮೂರನೇ ವಿಕೆಟ್‌ಗೆ 66 ರನ್‌ಗಳ ಜೊತೆಯಾಟದ ನೆರವಿನಿಂದ ಆಸೀಸ್, 18.5 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ ಜಯಭೇರಿ ಮೊಳಗಿಸಿತು. 50 ಎಸೆತಗಳನ್ನು ಎದುರಿಸಿದ ಮಾರ್ಷ್ ಆರು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ನೆರವಿನಿಂದ 77 ರನ್ ಗಳಿಸಿ ಔಟಾಗದೆ ಉಳಿದರು. ಅವರಿಗೆ ತಕ್ಕ ಸಾಥ್ ನೀಡಿದ ಮ್ಯಾಕ್ಸ್‌ವೆಲ್ 28 ರನ್ (18 ಎಸೆತ, 4 ಬೌಂಡರಿ, 1 ಸಿಕ್ಸರ್) ಗಳಿಸಿ ಅಜೇಯರಾಗುಳಿದರು.

ಈ ಮೂಲಕ ಚೊಚ್ಚಲ ಬಾರಿಗೆ ಟಿ-20 ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.ನ್ಯೂಜಿಲೆಂಡ್ ವಿಶ್ವಕಪ್ ಕನಸು ಮತ್ತೊಮ್ಮೆ ಭಗ್ನಗೊಂಡಿತು

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಆಡಳಿತ ಮಂಡಳಿಯಿಂದ ದೇವಳದ ಆಸ್ತಿ ಕಬಳಿಕೆ , ಭಕ್ತಾದಿಗಳಿಂದ ಪ್ರತಿಭಟನೆ

Next Post

ಮುಸ್ಲಿಮರ ದುಡ್ಡು ಆಗುತ್ತದೆ, ಕೋಮು ಪ್ರಚೋದನೆ ಮಾಡುತ್ತೀರಿ ; ಶರಣ್ ಪಂಪ್ವೆಲ್ ವಿರುದ್ಧ ಬಿರುವೆರ್ ಕುಡ್ಲ ಆಕ್ರೋಶ

Related Posts

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!
ಕ್ರೀಡಾ ಸುದ್ದಿ

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
24
ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ
ಕ್ರೀಡಾ ಸುದ್ದಿ

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

March 6, 2026
17
Next Post
ಮುಸ್ಲಿಮರ ದುಡ್ಡು ಆಗುತ್ತದೆ, ಕೋಮು ಪ್ರಚೋದನೆ ಮಾಡುತ್ತೀರಿ ; ಶರಣ್ ಪಂಪ್ವೆಲ್ ವಿರುದ್ಧ ಬಿರುವೆರ್ ಕುಡ್ಲ ಆಕ್ರೋಶ

ಮುಸ್ಲಿಮರ ದುಡ್ಡು ಆಗುತ್ತದೆ, ಕೋಮು ಪ್ರಚೋದನೆ ಮಾಡುತ್ತೀರಿ ; ಶರಣ್ ಪಂಪ್ವೆಲ್ ವಿರುದ್ಧ ಬಿರುವೆರ್ ಕುಡ್ಲ ಆಕ್ರೋಶ

Discussion about this post

Recent News

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
48
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
142
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d