ಉಡುಪಿ, ನ 15: ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಕೊಲೆಯನ್ನು ಒಪ್ಪಿಕೊಂಡಿರುವ ಬಗ್ಗೆ ಎಂದು ಉಡುಪಿ ಎಸ್‌ಪಿ ಡಾ. ಅರುಣ್.ಕೆ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಉಡುಪಿ ಎಸ್.ಪಿ, ಕೊಲೆಗೆ ಕಾರಣ ವಿಚಾರಣೆಯಲ್ಲಿ ಪಡೆದುಕೊಳ್ಳುತ್ತೇವೆ. ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆ ಇದೆ. ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ. ಆರೋಪಿ ತಪ್ಪೊಪ್ಪಿಗೆ ಹೇಳಿಕೆ ಕೊಟ್ಟಿದ್ದಾನೆ ಎಂದರು.
ಅವನ ಉದ್ದೇಶ ಅಯ್ನಾಜ್ ಕೊಲೆ ಮಾಡುವುದಾಗಿತ್ತು. ಆರೋಪಿ ತಪ್ಪಿಸಿಕೊಳ್ಳಲು ಮತ್ತು ಸಾಕ್ಷಿ ನಾಶ ಮಾಡಲು ಕೊಲೆ ಮಾಡಿರುವ ಬಗ್ಗೆ ತಪ್ಪೊಪ್ಪಿಗೆ ನೀಡಿದ್ದಾನೆ. ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ ಮದುವೆಯಾಗಿತ್ತು. ತಾಂತ್ರಿಕ ಸಾಕ್ಷಿಗಳ ಸಂಗ್ರಹ ಮಾಡಿ ಬಂಧಿಸಿದ್ದೇವೆ. ಕೋರ್ಟ್‌ಗೆ ಇವತ್ತೇ ಹಾಜರು ಮಾಡುತ್ತೇವೆ ಎಂದರು. ಮೃತರ ಕುಟುಂಬ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ಕೊಲೆಗೆ ಕಾರಣ ಏನು ಎನ್ನುವುದು ಪ್ರಮುಖ. ಅಯ್ನಾಜ್ ಮತ್ತು ಪ್ರವೀಣ್ ಚೌಗುಲೆ ನಡುವಿನ ಸಂಬಂಧಗಳ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ಎಸ್‌ಪಿ ಡಾ. ಅರುಣ್.ಕೆ ಹೇಳಿದರು.
ಉಡುಪಿ ಜಿಲ್ಲೆಯ ನೇಜಾರಿನಲ್ಲಿ ದೀಪಾವಳಿ ಹಬ್ಬದ ದಿನ ಉಡುಪಿ ಜಿಲ್ಲೆಯ ನೇಜಾರಿನ ಮನೆಗೆ ನುಗ್ಗಿದ ಹಂತಕ ತಾಯಿ ಹಸೀನಾ (46) ಆಕೆಯ ಮಕ್ಕಳಾದ ಅಫ್ನಾನ್ (23), ಅಯ್ನಾಜ್ (21), ಮತ್ತು ಅಸೀಮ್ (14) ದುಷ್ಕರ್ಮಿಯ ಇರಿದು ಸ್ಥಳದಿಂದ ಪರಾರಿಯಾಗಿದ್ದ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರೆ. ಹಾಜಿರಾ (70) ಗಂಭೀರ ಗಾಯಗೊಂಡಿದ್ದರು.
ಕೊಲೆ ಮಾಡಿ ಆರೋಪಿ ಉಡುಪಿಯಿಂದ ಪರಾರಿಯಾಗಿದ್ದ ಆರೋಪಿ ಬೆಳಗಾವಿಯ ಕುಡಚಿಯ ಸಂಬಂಧಿ ಮನೆಯಲ್ಲಿ ಆಶ್ರಯ ಪಡೆದಿದ್ದ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆರೋಪಿಯನ್ನು ಬಂಧಿಸಿದ್ದರು. ಮಹಾರಾಷ್ಟ್ರ ಸಾಂಗ್ಲಿ ಮೂಲದವನಾದ ಆರೋಪಿ ಪ್ರವೀಣ್ ಅರುಣ್ ಚೌಗಲೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಕ್ರೂ ಆಗಿದ್ದ. ಮೃತ ಅಯ್ನಾಜ್ ಕೂಡ ಕ್ರೂ ಆಗಿದ್ದು, ಆರೋಪಿ ಪ್ರವೀಣ್ ಪರಿಚಯವಾಗಿದ್ದ ಇಬ್ಬರು ಪರಸ್ಪರ ಆತ್ಮೀಯವಾಗಿದ್ದರು ಎನ್ನಲಾಗಿದೆ.
ಮೃತ ಅಯ್ನಾಸ್ ಜೊತೆ ಜಗಳವಾಡಿದ್ದ ಆರೋಪಿ ಪ್ರವೀಣ್ ನ ಪತ್ನಿ : ಹೌದು, ಪೊಲೀಸರ ವಿಚಾರಣೆ ವೇಳೆ ಆರೋಪಿ ಪ್ರವೀಣ್ ಅರುಣ್ ಚೌಗಲೆ ಸತ್ಯಾಂಶ ಬಿಚ್ಚಿಟ್ಟಿದ್ದು, ‘ಸ್ನೇಹ, ಸಲುಗೆ, ಪ್ರೇಮ ಮತ್ತು ಹಣದ ವಿಚಾರದಿಂದ ಕೊಲೆ ಮಾಡಿದ್ದಾಗಿ ಹೇಳಿದ್ದಾರೆ. ಮದುವೆಯಾಗಿ ಮಕ್ಕಳಾಗಿದ್ರು ಅಯ್ನಾಸ್ ಮೇಲೆ ಆರೋಪಿಗೆ ಲವ್ ಆಗಿತ್ತು. ಆಯ್ನಾಸ್ ಕೂಡ ಪ್ರವೀಣ್ ಜೊತೆ ಸಲುಗೆಯಿಂದ ಇದ್ದಳು. ಈ ವಿಚಾರವನ್ನು ಅಯ್ನಾಸ್ ಲೈಟ್ ಆಗಿ ಸ್ವೀಕರಿಸದ್ದರೆ, ಆರೋಪಿ ಪ್ರವೀಣ್ ಮಾತ್ರ ತನ್ನ ಪ್ರೀತಿಯನ್ನು ಗಂಭೀರವಾಗಿ ಪರಿಣಗಣಿಸಿದ್ದ. ಈ ಮಧ್ಯೆ ಇಬ್ಬರ ನಡುವೆ ಹಣದ ವ್ಯವಹಾರ ಕೂಡ ನಡೆದಿದ್ದು, ಈ ವಿಚಾರ ಎರಡು ಕುಟುಂಬಕ್ಕೂ ಗೊತ್ತಾಗಿ ಗಲಾಟೆ ಕೂಡ ಆಗಿತ್ತು. ಇನ್ನು ಮನೆಯವರ ಗಲಾಟೆಯ ನಡುವೇಯೇ ಆರೋಪಿ ಪ್ರವೀಣ್ ಪತ್ನಿ, ಮೃತ ಅಯ್ನಾಸ್ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಅಯ್ನಾಸ್ ಪ್ರವೀಣ್ನನ್ನು ರಿಜೆಕ್ಟ್ ಮಾಡಿದ್ದಳು. ಈ ಹಿನ್ನಲೆ ಆಕೆಯನ್ನು ಕೊಲ್ಲುವ ನಿರ್ಧಾರ ಮಾಡಿದ್ದಾನೆ. ಅದರಂತೆ ನ.12 ರಂದು ಮನೆಗೆ ನುಗ್ಗಿ ಆಕೆಯನ್ನು ಹತ್ಯೆ ಮಾಡಲು ಮುಂದಾಗಿದ್ದ, ಈ ವೇಳೆ ಅಕೆಯ ಕೊಲೆಗೆ ಅಡ್ಡಪಡಿಸಿದವರನ್ನೆಲ್ಲರನ್ನು ಕೂಡ ಕೊಂದಿದ್ದಾಗಿ ಆರೋಪಿ ಪ್ರವೀಣ್ ಹೇಳಿದ್ದಾನೆ.
ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ ಈ ಹಿಂದೆ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಪೊಲೀಸ್ ಆಗಿದ್ದ ಪ್ರವೀಣ್ ಕೆಲಸಕ್ಕೆ ಸೇರಿದ ಮೂರು ತಿಂಗಳಲ್ಲಿ ರಾಜೀನಾಮೆ ನೀಡಿ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ ಎನ್ನಲಾಗಿದೆ. ಕಳೆದ 10 ವರ್ಷದಿಂದ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.
Discussion about this post