• About us
  • Contact us
  • Disclaimer
Sunday, February 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಂಕಪಟ್ಟಿ ಸಮಸ್ಯೆ,‌ ಪರೀಕ್ಷಾ ಶುಲ್ಕ ಹೆಚ್ಚಳ ವಿರುದ್ಧ ಎಬಿವಿಪಿಯಿಂದ ಮಂಗಳೂರು ವಿವಿ ಆಡಳಿತ ಸೌಧಕ್ಕೆ ಮುತ್ತಿಗೆ ಗಾಜಿನ ಬಾಗಿಲು ಪುಡಿ

Coastal Times by Coastal Times
November 15, 2024
in ಕರಾವಳಿ
ಅಂಕಪಟ್ಟಿ ಸಮಸ್ಯೆ,‌ ಪರೀಕ್ಷಾ ಶುಲ್ಕ ಹೆಚ್ಚಳ ವಿರುದ್ಧ ಎಬಿವಿಪಿಯಿಂದ ಮಂಗಳೂರು ವಿವಿ ಆಡಳಿತ ಸೌಧಕ್ಕೆ ಮುತ್ತಿಗೆ ಗಾಜಿನ ಬಾಗಿಲು ಪುಡಿ
38
VIEWS
WhatsappTelegramShare on FacebookShare on Twitter

ಮಂಗಳೂರು, ನ.15: ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆ ಮತ್ತು ಪ್ರವೇಶ ಶುಲ್ಕವನ್ನು ಏಕಾಏಕಿ 60-80 ಪರ್ಸೆಂಟ್ ಏರಿಸಿದ್ದನ್ನು ವಿರೋಧಿಸಿ ಎಬಿವಿಪಿ ವಿದ್ಯಾರ್ಥಿಗಳು ಕೊಣಾಜೆ ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿದ್ದಾರೆ. ಈ ವೇಳೆ, ವಿದ್ಯಾರ್ಥಿಗಳು ಆಡಳಿತ ಸೌಧ ಕಟ್ಟಡದ ಮುಂಭಾಗದ ಗಾಜನ್ನು ಪುಡಿಗೈದು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ ಒಬ್ಬ ವಿದ್ಯಾರ್ಥಿಯ ಕೈಗೆ ಗಾಜು ತಾಗಿ ಗಾಯಗೊಂಡ ಘಟನೆಯೂ ನಡೆಯಿತು.

ಶುಕ್ರವಾರದಂದು ಬೆಳಿಗ್ಗೆಯೇ ವಿವಿಯ ಕ್ಯಾಂಪಸ್ ನಲ್ಲಿ ಸೇರಿದ್ದ ಎಬಿವಿಪಿ ನೇತೃತ್ವದಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳು ಬಳಿಕ ವಿಶ್ವವಿದ್ಯಾಲಯದ ಆಡಳಿತ ಸೌಧದ ಕಡೆಗೆ ಸಾಗಿ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾ ಕಾರರನ್ನು ತಡೆಯಲು ಬ್ಯಾರಿಕೇಡ್ ಹಾಕಿದ್ದು, ಇದನ್ನು ಕೆಳಹಾಕಿ ಮುನ್ನುಗಿದ್ದರು. ಬಳಿಕ ಪೊಲೀಸರು ಆಡಳಿತ ಸೌಧದ ಗಾಜಿನ ಬಾಗಿಲನ್ನು ಹಾಕಿದ್ದು ವಿದ್ಯಾರ್ಥಿಗಳು ತಳ್ಳಾಟ ನಡೆಸಿದಾಗ ಗಾಜು ಪುಡಿಪುಡಿಯಾಗಿ ಓರ್ವ ಪೋಲೀಸ್ ಹಾಗೂ ವಿದ್ಯಾರ್ಥಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಪೊಲೀಸರ ಬ್ಯಾರಿಕೇಡ್ ನಡುವೆಯೂ ವಿದ್ಯಾರ್ಥಿಗಳು ಘೋಷಣೆ ಕೂಗುತ್ತಾ ನುಗ್ಗಿ ಬಂದಿದ್ದು ಆಡಳಿತ ಸೌಧಕ್ಕೆ ಒಳನುಗ್ಗಲು ಯತ್ನಿಸಿದ್ದಾರೆ. ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಕುಲಪತಿ ಪ್ರೊ.ಪಿ.ಎಲ್ ಧರ್ಮ, ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸಲು ಯತ್ನಿಸಿದರು. ಪ್ರತಿಭಟನೆ ಮಾಡೋದು ವಿದ್ಯಾರ್ಥಿಗಳ ಹಕ್ಕು. ಹಾಗೆಂದು ಸಾರ್ವಜನಿಕ ಆಸ್ತಿಗೆ ಹಾನಿ ಮಾಡೋದು, ಗಾಜು ಪುಡಿ ಮಾಡೋದು ಒಳ್ಳೆಯದಲ್ಲ ಎಂದು ಬೇಸರ ವ್ಯಕ್ತಪಡಿಸಿದರು.‌

ಬಳಿಕ ಮಂಗಳೂರು ವಿವಿ ಕುಲಪತಿ ಸ್ಥಳಕ್ಕೆ ಆಗಮಿಸಿ ವಿಶ್ವವಿದ್ಯಾಲಯದ ಆರ್ಥಿಕ ಸಂಕಷ್ಟದ ಬಗ್ಗೆ ವಿವರಿಸಿದ್ದಾರೆ. ಆರ್ಥಿಕ ಸಂಕಷ್ಟದ ಹೊರೆಯನ್ನು ವಿದ್ಯಾರ್ಥಿಗಳ ಮೇಲೆ ಹೊರಿಸುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಇಡೀ ದಿನ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. ಬಳಿಕ ಸಿಂಡಿಕೇಟ್ ಸದಸ್ಯರೊಂದಿಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಕುಲಪತಿಯವರು ನಾಳೆಯೇ ಈ ಬಗ್ಗೆ ಪರೀಶೀಲನೆ ನಡೆಸಲು ಕುಲಸಚಿವರನ್ನು ಕಳುಹಿಸಿಕೊಡುತ್ತಿದ್ದು ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ ಹಾಗೂ ಸಮಸ್ಯೆ ಪರಿಹಾರವಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕಾರ್ಕಳ: ಎರಡು ಮನೆಗೆ ದಾಳಿ 15 ಲಕ್ಷ ರೂ. ಮೌಲ್ಯದ ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಗೋವಾ ಮದ್ಯ ವಶ

Next Post

ಮಂಗಳೂರು: ಕದ್ರಿ ಪೊಲೀಸ್ ಠಾಣೆ ಮುಂದೆ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Related Posts

ಕುಂದಾಪುರ: ಕೋಡಿ ಸೀವಾಕ್ ಸಮೀಪ “ಸೀವಾಕ್ ರೆಸ್ಟೋ ಕೆಫೆ” ಬಳಿ ಮಹಿಳೆ ಹಾಗೂ ಮೂರು ಮಕ್ಕಳ ರಕ್ಷಣೆ
ಕರಾವಳಿ

ಕುಂದಾಪುರ: ಕೋಡಿ ಸೀವಾಕ್ ಸಮೀಪ “ಸೀವಾಕ್ ರೆಸ್ಟೋ ಕೆಫೆ” ಬಳಿ ಮಹಿಳೆ ಹಾಗೂ ಮೂರು ಮಕ್ಕಳ ರಕ್ಷಣೆ

February 13, 2026
46
ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು
ಕರಾವಳಿ

ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು

February 12, 2026
27
Next Post
ಮಂಗಳೂರು: ಕದ್ರಿ ಪೊಲೀಸ್ ಠಾಣೆ ಮುಂದೆ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

ಮಂಗಳೂರು: ಕದ್ರಿ ಪೊಲೀಸ್ ಠಾಣೆ ಮುಂದೆ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Discussion about this post

Recent News

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

February 14, 2026
51
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

February 14, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

February 14, 2026
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

February 14, 2026
ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d