ಬೆಂಗಳೂರು: ಪದವೀಧರರಿಗೆ 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 1500 ಭತ್ಯೆ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆ ಹೊಸ ವರ್ಷದಿಂದಲೇ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಿಸಿದ್ದಾರೆ.
ಈ ಮುಂಚೆ ಡಿಸೆಂಬರ್ 26 ರಿಂದ ‘ಯುವ ನಿಧಿ’ ನೋಂದಣಿ ಪ್ರಾರಂಭವಾಗಲಿದೆ ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಹೇಳಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಯೋಜನೆಯು ಜನವರಿ 1, 2024 ರಿಂದ ಜಾರಿಗೆ ಬರಲಿದೆ ಮತ್ತು ಅರ್ಜಿದಾರರು ‘ಸೇವಾ ಸಿಂಧು’ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಮುಖ್ಯಮಂತ್ರಿಗಳು ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ. ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ನೀಡಲಾಗುತ್ತದೆ. ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.
ಈ ವರ್ಷದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು ಮತ್ತು ಅದರಲ್ಲಿ ‘ಯುವ ನಿಧಿ’ ಕೂಡ ಒಂದಾಗಿದೆ.
2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು. ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೊಮಾ ತೇರ್ಗಡೆ ಆದವರಿಗೆ ಈ ಯೋಜನೆ ಅನ್ವಯಿಸಲಿದೆ. ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ., ಡಿಪ್ಲೊಮಾ… pic.twitter.com/0CW7OgkiMa
— CM of Karnataka (@CMofKarnataka) December 14, 2023
Discover more from Coastal Times Kannada
Subscribe to get the latest posts sent to your email.
Discussion about this post