• About us
  • Contact us
  • Disclaimer
Wednesday, February 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಯೋಧ್ಯೆ ರಾಮಮಂದಿರ ; ಕನ್ನಡಿಗ ಅರುಣ್ ಯೋಗಿರಾಜ್ ಕೆತ್ತಿದ ಮೂರ್ತಿ ಪ್ರತಿಷ್ಠಾಪನೆ

Coastal Times by Coastal Times
January 16, 2024
in ರಾಷ್ಟ್ರೀಯ ಸುದ್ದಿ
ಅಯೋಧ್ಯೆ ರಾಮಮಂದಿರ ; ಕನ್ನಡಿಗ ಅರುಣ್ ಯೋಗಿರಾಜ್ ಕೆತ್ತಿದ ಮೂರ್ತಿ ಪ್ರತಿಷ್ಠಾಪನೆ
24
VIEWS
WhatsappTelegramShare on FacebookShare on Twitter

ಮೈಸೂರು, ಜ16: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಮೂರ್ತಿ ಪ್ರತಿಷ್ಠಾಪನೆ ಜನವರಿ 22ರಂದು ನಡೆಯಲಿದೆ. ಕರ್ನಾಟಕದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಶ್ರೀ ರಾಮನ ಪ್ರತಿಮೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ. ಸಂಕ್ರಾಂತಿ ದಿನವಾದ ಸೋಮವಾರ ಈ ಕುರಿತು ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಮಾಹಿತಿ ನೀಡಿದೆ. ಅರುಣ್ ಯೋಗಿರಾಜ್ ಕೆತ್ತನೆಯ ರಾಮ ಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದೆ.

ಅಯೋಧ್ಯೆಯ ಶ್ರೀ ರಾಮ ಮಂದಿರದ ಮೂರ್ತಿ ಪ್ರತಿಷ್ಠಾಪನೆ ಮಧ್ಯಾಹ್ನ 12.20ಕ್ಕೆ ಪ್ರಾಣ ಪ್ರತಿಷ್ಠಾ ಮಹೋತ್ಸವ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಆಯ್ಕೆಯಾಗಿರುವುದು ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ರಾಮ ಲಲ್ಲಾ ಮೂರ್ತಿಗೆ ಬಳಸಲಾದ ಕಲ್ಲು ಸಹ ನಮ್ಮ ಕರ್ನಾಟಕದ ಎಚ್. ಡಿ. ಕೋಟೆಯದ್ದು ಎಂಬುದು ಕರ್ನಾಟಕಕ್ಕೆ ಮತ್ತೊಂದು ಗರಿಯಾಗಿದೆ. ಶ್ರೀ ರಾಮನ ಮೂರ್ತಿ ಕೆತ್ತುವ ಐತಿಹಾಸಿಕ ಮತ್ತು ಪುಣ್ಯ ಕಾರ್ಯದಲ್ಲಿ ಭಾಗಿಯಾದ ಕರುನಾಡಿನ ಹೆಮ್ಮೆಯ ಶಿಲ್ಪಿಗೆ ವಿವಿಧ ರಾಜಕೀಯ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.

ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಮೂವರು ಶಿಲ್ಪಿಗಳು ಕೆತ್ತನೆ ಮಾಡಿರುವ ವಿಗ್ರಹಗಳನ್ನು ಕಳೆದ ವಾರ ಆಯ್ಕೆ ಮಾಡಲಾಗಿತ್ತು. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತನೆ ಸಹ ಆಯ್ಕೆಯಾಗಿತ್ತು. ಆದರೆ ಈ ಕುರಿತು ಅಧಿಕೃತ ಘೋಷಣೆಯಾಗಿರಲಿಲ್ಲ.

ಪ್ರಾಣ ಮೂರ್ತಿ ಪ್ರತಿಷ್ಠಾಪನೆ ಪೂರ್ವಭಾವಿ ವಿಧಿಗಳು ಜನವರಿ 16ರಂದು ಆರಂಭವಾಗಲಿದೆ. ಜನವರಿ 21ರ ತನಕ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಪ್ರತಿಷ್ಠಾಪನೆಯ ಅಗತ್ಯವಿರುವ ಕೆಲವು ವಿಧಿಗಳು ಮಾತ್ರ ಜನವರಿ 22ರಂದು ನಡೆಯಲಿದೆ. ಪ್ರಾಣ ಪ್ರತಿಷ್ಠಾಪನೆಗೆ ಆಯ್ಕೆಯಾಗಿರುವ ವಿಗ್ರಹ 150 ರಿಂದ 200 ಕೆಜಿ ತೂಕವಿದೆ. ರಾಮನನ್ನು ಐದು ವರ್ಷದ ಬಾಲಕನ ಪ್ರತಿರೂಪದಂತೆ ಕೆತ್ತನೆ ಮಾಡಲಾಗಿದೆ. ಕಳೆದ 70 ವರ್ಷಗಳಿಂದ ಪೂಜಿಸಲಾಗುತ್ತಿರುವ ರಾಮ ಲಲ್ಲಾನ ವಿಗ್ರಹವನ್ನು ಸಹ ನೂತನ ದೇವಾಲಯದ ಗರ್ಭಗುಡಿಯಲ್ಲಿ ಇಟ್ಟು ಪೂಜಿಸಲಾಗುತ್ತದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಕುಲಶೇಖರ : ಪತ್ನಿಯಿಂದ ಪತಿಗೆ ಹಲ್ಲೆ , ಪ್ರಕರಣ ದಾಖಲು

Next Post

ಉಳ್ಳಾಲ ಪೊಲೀಸ್‌ ಠಾಣೆಗೆ ಡಿವೈಎಫ್‌ಐನಿಂದ ಮುತ್ತಿಗೆ ಯತ್ನ

Related Posts

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !
ರಾಷ್ಟ್ರೀಯ ಸುದ್ದಿ

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

February 14, 2026
65
ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ರಾಷ್ಟ್ರೀಯ ಸುದ್ದಿ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
12
Next Post
ಉಳ್ಳಾಲ ಪೊಲೀಸ್‌ ಠಾಣೆಗೆ ಡಿವೈಎಫ್‌ಐನಿಂದ ಮುತ್ತಿಗೆ ಯತ್ನ

ಉಳ್ಳಾಲ ಪೊಲೀಸ್‌ ಠಾಣೆಗೆ ಡಿವೈಎಫ್‌ಐನಿಂದ ಮುತ್ತಿಗೆ ಯತ್ನ

Discussion about this post

Recent News

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
18
ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

February 24, 2026
36
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

February 24, 2026
ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

February 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d