ಮಂಗಳೂರು, ಜ.15 : ಜನರಿಗೆ ಮನೆ, ಕಾರು, ಚಿನ್ನದ ಆಮಿಷ ಒಡ್ಡಿ ಜನರಿಂದ ಸಾವಿರಾರು ಮಂದಿಗೆ ಪಂಗನಾಮ ಹಾಕುತ್ತಿರುವ ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಒತ್ತಾಯಿಸಿದರು. ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಂಪೆನಿಯಿಂದ ವಂಚನೆಗೆ ಒಳಗಾದ ಸಂತ್ರಸ್ತರ ಪ್ರತಿಭಟನೆಯಲ್ಲಿ ಮಾತನಾಡಿದರು.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾರ್ಗಸೂಚಿಗಳನ್ನು ಧಿಕ್ಕರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲಾಗಿದೆ. ಮಂಗಳೂರಿನಲ್ಲಿ ಸುಮಾರು 100ಕ್ಕೂ ಹೆಚ್ಚು ಬ್ಲೇಡ್ ಕಂಪೆನಿಗಳು ಸಾವಿರಾರು ಕೋಟಿ ಜನರಿಂದ ಸಂಗ್ರಹಿಸಿದೆ, ದಕ್ಷಿಣ ಕನ್ನಡ ಜಿಲ್ಲೆಯಿಂದ ಬೇರೆ ಜಿಲ್ಲೆಗಳಿಗೆ ಇವರ ವಂಚನಾ ಜಾಲ ವಿಸ್ತರಣೆ ಆಗಿದೆ. ಜಿಲ್ಲೆಯಲಿರುವ ಎಲ್ಲಾ ಲಕ್ಕಿ ಸ್ಕೀಮ್ ಗಳು ಕಾನೂನು ಬಾಹಿರವಾಗಿ ಕಾರ್ಯಾಚರಿಸುತ್ತಿದೆ, ಇವರ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕೆಂದು ಒತ್ತಾಯಿಸಿದರು.


ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ ಬಡವರ ಪ್ರಾಮಾಣಿಕತೆಯನ್ನು ಹೈಜಾಕ್ ಮಾಡಲಾಗಿದೆ, ಮಕ್ಕಳ ವಿದ್ಯಾಭ್ಯಾಸ, ಹೆಣ್ಣು ಮಕ್ಕಳ ಮದುವೆಗೆ ಸಹಾಯ ಆಗಲೆಂದು ಹೂಡಿಕೆ ಮಾಡಿದ್ದ ಬಡಪಾಯಿಗಳಿಗೆ ಅನ್ಯಾಯ ಆಗಿದೆ. ನ್ಯೂ ಇಂಡಿಯಾ ಕಂಪೆನಿ ಮಾಲೀಕನಿಂದ 50 ಕೋಟಿಯ ವಂಚನೆ ಆಗಿದೆ. ಪ್ರಭಾವಿ ರಾಜಕಾರಣಿಗಳ ಸಹಕಾರದಿಂದಾಗಿ ಈ ರೀತಿಯ ವಂಚನೆ ಮಾಡಲು ಸಾಧ್ಯವಾಗಿದೆ. ಪೊಲೀಸರು ಮತ್ತು ಲೀಡ್ ಬ್ಯಾಂಕ್ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಂಡಿದ್ದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ವಂಚನೆ ಆಗುತ್ತಿರಲಿಲ್ಲ ಎಂದು ಅವರು ಹೇಳಿದರು.
ಸಿಐಟಿಯು ಮುಖಂಡರಾದ ಯೋಗೀಶ್ ಜಪ್ಪಿನಮೊಗರು, ಡಿವೈಎಫ್ಐ ಮುಖಂಡ ತಯ್ಯುಬ್ ಬೆಂಗ್ರೆ, ಸಂತ್ರಸ್ತರ ವೇದಿಕೆಯ ಸಹ ಸಂಚಾಲಕ ಸಮದ್ ಕಾಟಿಪಳ್ಳ ಮಾತನಾಡಿದರು. ಪ್ರತಿಭಟನೆಯ ನೇತೃತ್ವವನ್ನು ಸಂತ್ರಸ್ತರ ವೇದಿಕೆಯ ಪ್ರಮುಖರಾದ ಪರ್ವೀಜ್ ಬಂದರ್, ಖಲೀಲ್ ಬೆಂಗ್ರೆ, ನಟೇಶ್, ರಾಮ್ ಸುರತ್ಕಲ್, ಮನ್ಸೂರ್ ಅಡ್ಡೂರು, ಫಾರೂಕ್ ಕುಕ್ಕಾಜೆ, ಅಬ್ದುಲ್ ಅಜೀಜ್ ಕೃಷ್ಣಾಪುರ, ಖಾಸಿಂ ಕಾಟಿಪಳ್ಳ, ಸನಾ ಮಣಿಪಾಲ, ಜಯಲಕ್ಷ್ಮಿ ಉಳ್ಳಾಲ, ಖೈರುನ್ನೀಸ ಉಚ್ಚಿಲ, ಸುಜಾತ ಮಧ್ಯಪದವು, ಸುಹಾನಾ ಬೆಂಗಳೂರು, ಫೈಝಲ್ ಚಿಕ್ಕಮಗಳೂರು, ಮೊಹಮ್ಮದ್ ಪಾಷ ಶಿವಮೊಗ್ಗ ವಹಿಸಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post