ಪುತ್ತೂರು, ಫೆ 16: ತಡರಾತ್ರಿವರೆಗೂ ಓದುತ್ತಿದ್ದ ವಿದ್ಯಾರ್ಥಿನಿ ಮಲಗಿದ ಹಾಸಿಗೆಯಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಪಟ್ಟಣ ಬಳಿಯ ನೆಕ್ಕಿಲಾಡಿ ಕುರ್ವೇಲುನ ಗ್ರಾಮದಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹಫೀಜಾ (17) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿ ನಿವಾಸಿ, ಉದ್ಯಮಿ ದಾವೂದ್ ಎಂಬವರ ಪುತ್ರಿ ಮೃತ ಹಫೀಜಾ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ಕಲಿಯುತ್ತಿದ್ದಳು. ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ(ಫೆಬ್ರವರಿ15)ರ ತಡರಾತ್ರಿಯವರೆಗೆ ಓದಿ ಮಲಗಿದ್ದಾಳೆ. ದುರಾದೃಷ್ಟವಶಾತ್ ಹಫೀಜಾ ಬೆಳ್ಳಗೆ ಏಳಲೇ ಇಲ್ಲ. ಬೆಳಿಗ್ಗೆ ಹಾಸಿಗೆಯಲ್ಲಿ ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿದ್ದಾಳೆ.
ಹಫೀಜಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರವಾದ ಕಾರಣ ತಿಳಿದು ಬರಬೇಕಿದೆ. ಉಪ್ಪಿನಂಗಡಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಓದಿ ಉನ್ನತ ಹುದ್ದೆಗೆ ಹೋಗಿ ಬದುಕಿ ಬಾಳಬೇಕಿದ್ದ ಮಗಳು ಹೃದಯಾಘಾತದಿಂದ ಸಾವನ್ನಪ್ಪಿರುವುದನ್ನು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Discover more from Coastal Times Kannada
Subscribe to get the latest posts sent to your email.
Discussion about this post