• About us
  • Contact us
  • Disclaimer
Wednesday, July 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಫೆ.17ರಂದು ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವಿಸ್ತರಿತ ಸೌಲಭ್ಯಕ್ಕೆ ಅಧಿಕೃತ ಚಾಲನೆ

Coastal Times by Coastal Times
February 16, 2026
in ಕರಾವಳಿ
ಫೆ.17ರಂದು ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವಿಸ್ತರಿತ ಸೌಲಭ್ಯಕ್ಕೆ ಅಧಿಕೃತ ಚಾಲನೆ
17
VIEWS
WhatsappTelegramShare on FacebookShare on Twitter

ಮಂಗಳೂರು, ಫೆ.16: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್) ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸಕ್ತ ಅವಶ್ಯಕತೆಗೆ ಅನುಗುಣವಾಗಿ ಡಿಜಿಟಲ್ ಬ್ಯಾಂಕಿಂಗ್ ಅನ್ನು ಕೂಡಾ ಅಳವಡಿಸಿಕೊಂಡಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ನಮ್ಮ ಬ್ಯಾಂಕಿನ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳಾದ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯಗಳಿಗೆ ಅಧಿಕೃತ ಚಾಲನೆ ಕಾರ್ಯಕ್ರಮ ಫೆ.17ರಂದು ಮಧ್ಯಾಹ್ನ 12ಕ್ಕೆ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ ಎಂದವರು ತಿಳಿಸಿದ್ದಾರೆ.

ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ನಮ್ಮ ಬ್ಯಾಂಕ್ 2025ರ ಸೆ.16ರಿಂದ ಐಎಂಪಿಎಸ್ (IMPS – Immediate Payment Service) ಸೇವೆಯನ್ನು ಆರಂಭಿಸಿದೆ. ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ಸೇವೆಯೊಂದಿಗೆ ಆರ್ ಟಿಜಿಎಸ್ / ನೆಫ್ಟ್, ಸಿಟಿಎಸ್, ಎಸ್ಎಂಎಸ್, ಎಟಿಎಂ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್ (POS) ಸೌಲಭ್ಯ ಸೇರಿದಂತೆ ಹಲವಾರು ಡಿಜಿಟಲ್ ಸೇವೆಗಳನ್ನು ಯಶಸ್ವಿಯಾಗಿ ನೀಡುತ್ತಿದೆ. ಬ್ಯಾಂಕಿಂಗ್ ಕ್ಷೇತ್ರ ಇತ್ತೀಚಿನ ವರ್ಷಗಳಲ್ಲಿ ಪ್ರಮುಖ ಪರಿವರ್ತನೆಗೆ ಒಳಗಾಗಿದೆ, ಡಿಜಿಟಲ್ ಸೇವೆಗಳು ಸಾಂಪ್ರದಾಯಿಕ ಮಾದರಿಯನ್ನು ಬದಲಾಯಿಸಿವೆ. ಇಂದು, ಹೆಚ್ಚಿನ ಗ್ರಾಹಕರು ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಅಪ್ಲಿಕೇಶನ್ಗಳು ಮತ್ತು ತ್ವರಿತ ಪಾವತಿ ವ್ಯವಸ್ಥೆಗಳ ಮೂಲಕ ತಮ್ಮ ಖಾತೆಗಳಿಗೆ ಸುಗಮ ಪ್ರವೇಶವನ್ನು ನಿರೀಕ್ಷಿಸುತ್ತಾರೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸ್ತುತ ಅವಶ್ಯಕತೆಗೆ ಅನುಗುಣವಾಗಿ ಡಿಜಿಟಲ್ ಬ್ಯಾಂಕಿಂಗ್ ಅನ್ನು ಕೂಡಾ ಅಳವಡಿಸಿ ಕೊಂಡಿದೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ನಮ್ಮ ಬ್ಯಾಂಕ್ 16 ಸೆಪ್ಟೆಂಬರ್ 2025 ರಿಂದ ಐಎಂಪಿಎಸ್ (IMPS – Immediate Payment Service) ಸೇವೆಯನ್ನು ಆರಂಭಿಸಿದೆ. ಈ ಸೇವೆಯ ಮೂಲಕ ನಮ್ಮ ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಬಳಸಿ ಗ್ರಾಹಕರು ಕ್ಷಣಾರ್ಧದಲ್ಲಿ ಹಣ ವರ್ಗಾವಣೆ ಮಾಡುವ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಐಎಂಪಿಎಸ್ ಎಂಬುದು ನ್ಯಾಶನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಅಭಿವೃದ್ಧಿ ಪಡಿಸಿದ ತ್ವರಿತ ಹಣ ವರ್ಗಾವಣೆ ವ್ಯವಸ್ಥೆಯಾಗಿದ್ದು, ಇದು 24×7, ವಾರಾಂತ್ಯ ಮತ್ತು ಸಾರ್ವಜನಿಕ ರಜೆದಿನಗಳಲ್ಲಿಯೂ ಕಾರ್ಯನಿರ್ವಹಿಸುತ್ತದೆ. ಪರ್ಸ್ ನ್ ಟು ಅಕೌಂಟ್ (person to Account) ಮೂಲಕ ಖಾತೆ ಸಂಖ್ಯೆ ಮತ್ತು ( IFSC )ಐಎಫ್ ಎಸ್ ಸಿ ಬಳಸಿ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು ಎಂದವರು ತಿಳಿಸಿದರು.

ಈಗ ಡಿಜಿಟಲ್ ಭಾರತ ಪರಿಕಲ್ಪನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಮ್ಮ ಬ್ಯಾಂಕ್ ಅತ್ಯಂತ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು, ಯುಪಿಐ (UPI Unified Payment Interface) ಸೇವೆಯನ್ನು ಪ್ರಸಕ್ತ ಜನವರಿ 21ರಂದು ಪ್ರಾರಂಭಿಸಿದೆ. ಯುಪಿಐ ಸೇವೆಯ ಮೂಲಕ ನಮ್ಮ ಗ್ರಾಹಕರು ಸುಲಭವಾಗಿ ಹಾಗೂ ಸುರಕ್ಷಿತ ವಾಗಿ ಹಣ ವರ್ಗಾವಣೆ ಮಾಡಬಹುದು. ಗ್ರಾಹಕರು ಗೂಗಲ್ ಪೇ (Googl Pay), ಫೋನ್ ಪೇ (Phone Pay). ಭೀಮ್ (BHIM), ವಾಟ್ಸ್ಆಪ್ ಪೇ (WhatsApp Pay), ಪೇಟಿಎಂ (Paytm), ಫ್ರೀಚಾರ್ಜ್ (Freecharge) (Super Money) ಸುಲಭವಾಗಿ ವ್ಯವಹಾರಗಳನ್ನು ನಡೆಸಬಹುದು.ಈ ಸೇವೆಯ ಮೂಲಕ ಗ್ರಾಹಕರು ಬ್ಯಾಂಕ್ಗೆ ಭೇಟಿ ನೀಡುವ ಅವಶ್ಯಕತೆ ಇಲ್ಲದೆ. ಮನೆಯಲ್ಲೇ ಅಥವಾ ಎಲ್ಲಿಂದ ಬೇಕಾದರೂ 24×7 ಸಮಯದಲ್ಲಿ ಹಣ ವರ್ಗಾವಣೆ ಮಾಡಬಹುದು. ಇದು ವೇಗವಾದ, ಸುರಕ್ಷಿತ ಹಾಗೂ ಸುಲಭವಾದ ಡಿಜಿಟಲ್ ಪಾವತಿ ವಿಧಾನವಾಗಿದೆ.

ಯುಪಿಐ ಮೂಲಕ ಗ್ರಾಹಕರು ತಕ್ಷಣ ಹಣ ಕಳುಹಿಸಬಹುದು ಹಾಗೂ ಸ್ವೀಕರಿಸಬಹುದು; ಹಣ ಸ್ವೀಕರಿಸುವವರ ಯುಪಿಐ ಐಡಿಗೆ ನೇರವಾಗಿ ಹಣ ಕಳುಹಿಸಬಹುದು. * ಕ್ಯೂಆರ್ (QR) ಕೋಡ್ ಸ್ಕ್ಯಾನ್ ಮಾಡಿ ಪಾವತಿ ಮಾಡಬಹುದು. * ಆನ್ಲೈನ್ ಖರೀದಿ ಹಾಗೂ ಬಿಲ್ ಪಾವತಿ ಮಾಡಬಹುದು.ದೇಶದ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು ಈ ಎಲ್ಲಾ, ವ್ಯವಹಾರಗಳು ಯುಪಿಐ ಪಿನ್ ಮತ್ತು ಎರಡು ಹಂತದ ಭದ್ರತಾ ವ್ಯವಸ್ಥೆಯಿಂದ ಸುರಕ್ಷಿತವಾಗಿರುತ್ತವೆ ಎಂದವರು ತಿಳಿಸಿದರು.

ಯುಪಿಐ ಸೇವೆಯಿಂದ ಸಣ್ಣ ವ್ಯಾಪಾರಿಗಳು, ರೈತರು, ಅಂಗಡಿ ಮಾಲಕರು, ವಿದ್ಯಾರ್ಥಿಗಳು, ಉದ್ಯೋಗಿಗಳು ಎಲ್ಲರೂ ಪ್ರಯೋಜನ ಪಡೆಯಬಹುದು.ಒಬ್ಬ ಚಿಲ್ಲರೆ ವ್ಯಾಪಾರಿಯೂ ಈಗ QR ಕೋಡ್ ಮೂಲಕ ಡಿಜಿಟಲ್ ಪಾವತಿ ಸ್ವೀಕರಿಸಬಹುದು. ಇದು ನಮ್ಮ ಬ್ಯಾಂಕಿನ ಆರ್ಥಿಕತೆಯನ್ನು ಇನ್ನಷ್ಟು ಬಲಪಡಿಸುತ್ತದೆ. ಇದು ದಿನನಿತ್ಯದ ಸಣ್ಣ ಮೊತ್ತದ ಪಾವತಿಗಳಿಗೆ, ಇ-ಕಾಮರ್ಸ್ ವ್ಯವಹಾರಗಳಿಗೆ ಹಾಗೂ ವ್ಯಕ್ತಿಯಿಂದ ವ್ಯಕ್ತಿಗೆ ಹಣ ವರ್ಗಾವಣೆ ಮಾಡಲು ಅತ್ಯಂತ ಅನುಕೂಲಕರವಾಗಿದೆ.

ನಮ್ಮ ಬ್ಯಾಂಕ್ ಸದಾ ಗ್ರಾಹಕರಿಗೆ ಅತ್ಯುತ್ತಮ ಹಾಗೂ ಆಧುನಿಕ ಸೇವೆಗಳನ್ನು ಒದಗಿಸಲು ಬದ್ಧವಾಗಿದೆ. ಯುಪಿಐ ಸೇವೆಯಿಂದ ನಮ್ಮ ಗ್ರಾಹಕರಿಗೆ ಮತಷ್ಟು ಸುಲಭ ಮತ್ತು ವೇಗವಾದ ಬ್ಯಾಂಕಿಂಗ್ ಅನುಭವ ಸಿಗಲಿದೆ ಎಂಬ ವಿಶ್ವಾಸ ನಮಗಿದೆ ಎಂದು ಡಾ.ಎಂ. ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ್ ರೈ, ಸದಾಶಿವ ಉಳ್ಳಾಲ್, ಜೈರಾಜ್ ಬಿ. ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್., ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ

Next Post

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

Related Posts

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ
ಕರಾವಳಿ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

July 13, 2026
30
“Mangalore IAS – A School for Civil Services” ಸಂಸ್ಥೆ ಉದ್ಘಾಟನೆ
ಕರಾವಳಿ

“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

July 12, 2026
47
Next Post
ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

Discussion about this post

Recent News

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
30
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

July 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d