ಮಂಗಳೂರು, ಮಾ.16: ನಗರದ ಕಾಲೇಜೊಂದರ ವಿದ್ಯಾರ್ಥಿ, ಬೆಂಗಳೂರು ಕುಮಾರಸ್ವಾಮಿ ಬಡಾವಣೆಯ ನಿವಾಸಿ ಭರತ್ (20) ಎಂಬಾತ ಮಂಗಳವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ಭರತ್ ಭಾಸ್ಕರ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಂಗಳೂರಿನ ಕೊಟ್ಟಾರ ಬಳಿಯ ಪಿಜಿಯಲ್ಲಿ ವಿದ್ಯಾರ್ಥಿ ನೇಣು ಹಾಕಿಕೊಂಡಿದ್ದ.
ನನ್ನ ಸಾವಿಗೆ ಈ ಕಾಲೇಜೇ ಕಾರಣ. ಇಲ್ಲಿಗೆ ಸೇರಿ ನನ್ನ ಒಂದೂವರೆ ವರ್ಷ ವ್ಯರ್ಥವಾಗಿದೆ. ಇಲ್ಲಿ ಕಾಲೇಜು ಸರಿ ಇಲ್ಲ, ಸರಿಯಾದ ಸ್ಟಾಫ್ ಇಲ್ಲ, ಕ್ಲಾಸೂ ಇಲ್ಲ. ನಮ್ಮಿಂದ ಹಣ ತೆಗೆದುಕೊಂಡು ಮೋಸ ಮಾಡಿದ್ದಾರೆ. ನನ್ನ ಸಾವಿಗೆ ಕಾಲೇಜೇ ಕಾರಣ, ನನ್ನಂತೆ ಬೇರೆ ವಿದ್ಯಾರ್ಥಿಗಳಿಗೆ ಮೋಸ ಆಗದಿರಲಿ ಎಂದು ಬಯಸುತ್ತೇನೆ ಎಂಬುದಾಗಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಮಾಲೀಕ ಹಾಗೂ ಪ್ರಾಧ್ಯಾಪಕರ ವಿರುದ್ಧ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಯ ತಂದೆ ದೂರು ದಾಖಲಿಸಿದ್ದಾರೆ.