• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅತ್ತಾವರ ಮನೆ ಕಳ್ಳತನ ಪ್ರಕರಣ- ದೆಹಲಿ ಮೂಲದ ನಾಲ್ವರು ಆರೋಪಿಗಳ ಬಂಧನ

Coastal Times by Coastal Times
June 16, 2023
in ಕ್ರೈಮ್ ನ್ಯೂಸ್
ಅತ್ತಾವರ ಮನೆ ಕಳ್ಳತನ ಪ್ರಕರಣ- ದೆಹಲಿ ಮೂಲದ ನಾಲ್ವರು ಆರೋಪಿಗಳ ಬಂಧನ
44
VIEWS
WhatsappTelegramShare on FacebookShare on Twitter

ಮಂಗಳೂರು, ಜೂ 16 : ನಗರದ ಅತ್ತಾವರ ಕೆಎಂಸಿ ಆಸ್ಪತ್ರೆ ಸಮೀಪದ ಎರಡು ಮನೆಗಳಲ್ಲಿ ಕಳ್ಳತನ ನಡೆಸಿ ಪರಾರಿಯಾಗಲು ಯತ್ನಿಸಿದ ಹೊರ ರಾಜ್ಯದ ನಾಲ್ಕು ಮಂದಿಯನ್ನು ಪಾಂಡೇಶ್ವರ ಪೊಲೀಸರು ಕೃತ್ಯ ನಡೆದ ಐದು ಗಂಟೆಯೊಳಗೆ ಬಂಧಿಸಿದ ಘಟನೆ ಗುರುವಾರ ನಡೆದಿದೆ. ಬಂಧಿತ ಆರೋಪಿಗಳನ್ನು ದೆಹಲಿಯ ಮೊಹಮ್ಮದ್ ಆಶಿಫ್ ಅಲಿಯಾಸ್ ಆಶಿಫ್ (23) ಮತ್ತು ಶೇಖ್ ಮೈದುಲ್ (25) ಹಾಗೂ ಪಶ್ಚಿಮ ಬಂಗಾಳದ ರಫೀಕ್ ಖಾನ್ (24) ಮತ್ತು ದೆಹಲಿಯ ವಕೀಲ ಅಹಮದ್ (34) ಎಂದು ಗುರುತಿಸಲಾಗಿದೆ.

ಇವರಿಂದ ಕಳ್ಳತನ ನಡೆಸಿದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ವಶಪಡಿಸಲಾಗಿದೆ. ನಗರದ ಅತ್ತಾವರದ ಬ್ರಿಜೇಶ್ ಅಪಾರ್ಟ್‌ಮೆಂಟ್‌ನ ಎರಡು ಮನೆಯ ಬಾಗಿಲನ್ನು ಗುರುವಾರ ಮಧ್ಯಾಹ್ನ 1ರಿಂದ 3ರ ಮಧ್ಯೆ ಮುರಿದ ಆರೋಪಿಗಳು ಕಪಾಟಿನಲ್ಲಿಟ್ಟಿದ್ದ ವಿವಿಧ ವಿನ್ಯಾಸದ ಚಿನ್ನಾಭರಣ, ನಗದು ಸಹಿತ ಸುಮಾರು 4.45 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ವಿಜಯಪುರ ಮೂಲದ ಪೂಜಾ ಎಂಬಾಕೆ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಪಣಂಬೂರು ಬೀಚ್ ಬಳಿ ರಾತ್ರಿ ಸುಮಾರು 8ಕ್ಕೆ ಸಂಶಯಾಸ್ಪದ ರೀತಿಯಲ್ಲಿದ್ದ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ವಿಚಾರಿಸಿದರು.

ಕಳ್ಳತನ ಮಾಡಿದ ಚಿನ್ನಾಭರಣ ಮತ್ತು ನಗದು, ಕಟ್ಟರ್‌ಗಳು, ಸ್ಕ್ರೂಡ್ರೈವರ್‌ಗಳು ಮತ್ತು ಚೂಪಾದ ಕಬ್ಬಿಣದ ರಾಡ್ ಸೇರಿದಂತೆ ಕೃತ್ಯಕ್ಕೆ ಬಳಸಲಾದ ಉಪಕರಣಗಳು, ಏಳು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇಲ್ಲದ, ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಆರೋಪಿ ದೋಷಮುಕ್ತ: ಸಿಬಿಐ ನ್ಯಾಯಾಲಯ ತೀರ್ಪು

Next Post

ಫಾಝಿಲ್‌, ಮಸೂದ್‌, ಜಲೀಲ್‌, ದೀಪಕ್‌ ರಾವ್‌ ಕುಟುಂಬಗಳಿಗೆ ಸರಕಾರದಿಂದ ತಲಾ 25 ಲಕ್ಷ ರೂ. ಪರಿಹಾರ

Related Posts

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,
ಕ್ರೈಮ್ ನ್ಯೂಸ್

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
57
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
39
Next Post
ಫಾಝಿಲ್‌, ಮಸೂದ್‌, ಜಲೀಲ್‌, ದೀಪಕ್‌ ರಾವ್‌ ಕುಟುಂಬಗಳಿಗೆ ಸರಕಾರದಿಂದ ತಲಾ 25 ಲಕ್ಷ ರೂ. ಪರಿಹಾರ

ಫಾಝಿಲ್‌, ಮಸೂದ್‌, ಜಲೀಲ್‌, ದೀಪಕ್‌ ರಾವ್‌ ಕುಟುಂಬಗಳಿಗೆ ಸರಕಾರದಿಂದ ತಲಾ 25 ಲಕ್ಷ ರೂ. ಪರಿಹಾರ

Discussion about this post

Recent News

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d