• About us
  • Contact us
  • Disclaimer
Saturday, June 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹೈಕೋರ್ಟ್ ನ್ಯಾಯಮೂರ್ತಿಗೆ ವರ್ಗಾವಣೆ ಬೆದರಿಕೆ ಪ್ರಕರಣ: ಎಸ್​​ಐಟಿ ತನಿಖೆ ಕೋರಿ ಪಿಐಎಲ್ ಸಲ್ಲಿಕೆ

Coastal Times by Coastal Times
July 16, 2022
in ರಾಜ್ಯ
ಹೈಕೋರ್ಟ್ ನ್ಯಾಯಮೂರ್ತಿಗೆ ವರ್ಗಾವಣೆ ಬೆದರಿಕೆ ಪ್ರಕರಣ: ಎಸ್​​ಐಟಿ ತನಿಖೆ ಕೋರಿ ಪಿಐಎಲ್ ಸಲ್ಲಿಕೆ
28
VIEWS
WhatsappTelegramShare on FacebookShare on Twitter

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ ಮುಖ್ಯಸ್ಥರ ವಿರುದ್ಧ ಮಾಡಲಾದ ಕಟುವಾದ ಟೀಕೆ – ಟಿಪ್ಪಣಿಗಳ ಹಿನ್ನೆಲೆ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಅವರಿಗೆ ತೃತೀಯ ವ್ಯಕ್ತಿಯೊಬ್ಬರ ಮೂಲಕ ವರ್ಗಾವಣೆ ಬೆದರಿಕೆ ಹಾಕಿರುವ ಪ್ರಕರಣದ ಬಗ್ಗೆ ಎಸ್​​ಐಟಿ ತನಿಖೆ ನಡೆಸಲು ಆದೇಶಿಸಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್​ಗೆ ಸಲ್ಲಿಸಲಾಗಿದೆ. ತುಮಕೂರಿನ ನ್ಯಾಯವಾದಿ ರಮೇಶ್.ಎಲ್ ನಾಯಕ್ ಶುಕ್ರವಾರ ಈ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ಇದು ಪಟ್ಟಿಯಾಗಿ ವಿಚಾರಣೆಗೆ ಬರಬೆಕಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ನ್ಯಾಯಮೂರ್ತಿಗಳಿಗೆ ವರ್ಗಾವಣೆ ಬೆದರಿಕೆಯೊಡ್ಡಿದ ಪ್ರಕರಣವನ್ನು ವಿಶೇಷ ತನಿಖಾ ತಂಡದ ತನಿಖೆಗೆ ವಹಿಸುವುದರ ಜೊತೆಗೆ ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಅವರಿಗೆ ಸೂಕ್ತ ಭದ್ರತೆ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿದಾರರ ಮನವಿ ಏನು?: ನ್ಯಾಯಮೂರ್ತಿ ಹೆಚ್​​.ಪಿ ಸಂದೇಶ್ ಅವರಿಗೆ ವೈ, ವೈ ಪ್ಲಸ್‌, ಜಡ್, ಜಡ್ ಪ್ಲಸ್‌ ಅಥವಾ ಸೂಕ್ತ ಭದ್ರತೆ ಒದಗಿಸಲು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ರೀತಿಯ ವರ್ಗಾವಣೆ ಬೆದರಿಕೆಗಳು ಬಂದಾಗ ನ್ಯಾಯಮೂರ್ತಿಗಳು ತಮ್ಮ ಸಾಂವಿಧಾನಿಕ ಕರ್ತವ್ಯಗಳನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲು ಅಡ್ಡಿಯಾಗುತ್ತವೆ. ಇದರಿಂದ, ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಿಸುವ ಹಾಗೂ ನ್ಯಾಯಾಂಗದ ಮೇಲಿನ ಜನರ ವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಭ್ರಷ್ಟಾಚಾರ ಪ್ರಕರಣವೊಂದರ ಆರೋಪಿಯ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಅವರು ಪ್ರಕರಣದಲ್ಲಿ ಎಸಿಬಿಯು ಸಮರ್ಪಕವಾಗಿ ತನಿಖೆ ನಡೆಸಿಲ್ಲ ಎಂದು ಭ್ರಷ್ಟಾಚಾರ ನಿಗ್ರಹದಳ ಮತ್ತು ಎಸಿಬಿಯ ಮುಖ್ಯಸ್ಥರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಇದೇ ಕಾರಣಕ್ಕೆ ತಮಗೆ ಮೂರನೇ ವ್ಯಕ್ತಿ ಮೂಲಕ ವರ್ಗಾವಣೆಯ ಬೆದರಿಕೆ ಒಡ್ಡಲಾಗಿದೆ ಎನ್ನುವ ಸ್ಫೋಟಕ ಮಾಹಿತಿಯನ್ನ ನ್ಯಾಯಮೂರ್ತಿಗಳು ಹೈಕೋರ್ಟ್ ಕಾರ್ಯಕಲಾಪದಲ್ಲಿಯೇ ಬಹಿರಂಗಪಡಿಸಿದ್ದರು. ನಂತರ ವರ್ಗಾವಣೆ ಬೆದರಿಕೆಯ ಬಗ್ಗೆ ಇತ್ತೀಚೆಗೆ ಲಿಖಿತ ಆದೇಶದಲ್ಲಿ ದಾಖಲು ಮಾಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

‘ಮದುವೆಯಾಗಿಲ್ಲ , ಷರತ್ತುರಹಿತವಾದ ಪ್ರೇಮದಿಂದ ಆವರಿಸಲ್ಪಟ್ಟಿದ್ದೇನೆ’ : ಸುಶ್ಮಿತಾ ಸೇನ್.

Next Post

ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಚಿತ್ರೀಕರಣ ನಿಷೇಧ ಆದೇಶ ವಾಪಸ್

Related Posts

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
22
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್
ಆರೋಗ್ಯ

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
52
Next Post
ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಚಿತ್ರೀಕರಣ ನಿಷೇಧ ಆದೇಶ ವಾಪಸ್

ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಚಿತ್ರೀಕರಣ ನಿಷೇಧ ಆದೇಶ ವಾಪಸ್

Discussion about this post

Recent News

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

June 13, 2026
15
ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

June 13, 2026
13
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

June 13, 2026
ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

June 13, 2026
ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

June 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d