ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.
ಗ್ರಾಮ ಪಂಚಾಯಿತಿ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ವಿನಯ್ ಕುಮಾರ್ ಕಲ್ಲೇಗ ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್.ಡಿ.ಪಿ.ಐ. ಕಾರ್ಯಕರ್ತರು ದಿಕ್ಕಾರ ಕೂಗಿ ಸ್ವಾತಂತ್ರ್ಯ ರಥಕ್ಕೆ ತಡೆಒಡ್ಡಿದರು. ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಗ್ರಾ.ಪಂ ಅಧ್ಯಕ್ಷರು ಹಾಗೂ ಪಿಡಿಒ ರವರು ಸಮಾದಾನ ಮಾಡಿದರು ಕೇಳಿಸಿಕೊಳ್ಳದ ತಂಡ ದೇಶಭಕ್ತ ವೀರ ಸಾವರ್ಕರ್ ಫೋಟೊ ತೆಗೆದು ಹಿಂದೂ ವಿರೋಧಿ ಟಿಪ್ಪು ಸುಲ್ತಾನ್ ಫೋಟೊ ಅಳವಡಿಸುವಂತೆ ಪಟ್ಟು ಹಿಡಿಯಿತು. ಮಾತ್ರವಾಲ್ಲದೆ ಪಾಕಿಸ್ಥಾನ್ ಜಿಂದಾಬಾದ್ ಎಂಬ ಘೋಷಣೆಯನ್ನು ಕೆಲವರು ಕೂಗಿದರು ಎನ್ನಲಾಗಿದೆ.
ಈ ಬಗ್ಗೆ ಮಾಹಿತಿ ಅರಿತ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ ನಾಯ್ಕ್ ರವರ ನೆತೃತ್ವದ ಪೊಲೀಸರ ತಂಡ ಆಗಮಿಸಿ ಪ್ರತಿಭಟನಾಕಾರರನ್ನು ಚದುರಿಸಿದರು.