• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹೊಟ್ಟೆನೋವೆಂದು ಬಂದಿದ್ದ ಬಾಲಕನಿಗೆ ಶಸ್ತ್ರಚಿಕಿತ್ಸೆ ; ವೈದ್ಯರ ಎಡವಟ್ಟಿನಿಂದ ಬಾಲಕ ಸಾವು,ಆಸ್ಪತ್ರೆ ಮುಂದೆ ಶವ ಇಟ್ಟು ಪ್ರತಿಭಟನೆ, ನ್ಯಾಯಕ್ಕಾಗಿ ಆಗ್ರಹ

Coastal Times by Coastal Times
August 16, 2023
in ಕರಾವಳಿ
ಹೊಟ್ಟೆನೋವೆಂದು ಬಂದಿದ್ದ ಬಾಲಕನಿಗೆ ಶಸ್ತ್ರಚಿಕಿತ್ಸೆ ; ವೈದ್ಯರ ಎಡವಟ್ಟಿನಿಂದ ಬಾಲಕ ಸಾವು,ಆಸ್ಪತ್ರೆ ಮುಂದೆ ಶವ ಇಟ್ಟು ಪ್ರತಿಭಟನೆ, ನ್ಯಾಯಕ್ಕಾಗಿ ಆಗ್ರಹ
140
VIEWS
WhatsappTelegramShare on FacebookShare on Twitter

ಪುತ್ತೂರು, ಆಗಸ್ಟ್ 15: ಹೊಟ್ಟೆನೋವಿನಿಂದ ಚಿಕಿತ್ಸೆಗಾಗಿ ಪುತ್ತೂರಿನ ಚೇತನಾ ಆಸ್ಪತ್ರೆಗೆ ದಾಖಲಾದ 17ರ ಹರೆಯದ ಬಾಲಕ ಶ್ರೀಜಿತ್ ಮೃತಪಟ್ಟ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದಾಗಿ ಸಾವು ಸಂಭವಿಸಿದೆ ಎಂದು ಆರೋಪಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ದಲಿತ್ ಸೇವಾ ಸಮಿತಿ ನೇತೃತ್ವದಲ್ಲಿ ವಿವಿಧ ದಲಿತ ಸಂಘಟನೆಗಳು, ಬಾಲಕನ ಸಂಬಂಧಿಕರು ಮೃತದೇಹ ಇದ್ದ ಆಂಬುಲೆನ್ಸ್‌ ಅನ್ನು ಆಸ್ಪತ್ರೆಯ ಮುಂಭಾಗ ನಿಲ್ಲಿಸಿ ಮಂಗಳವಾರ ಪ್ರತಿಭಟಿಸಿದರು.

ಸುಳ್ಯ ತಾಲೂಕಿನ ಶಾಂತಿನಗರ ನಿವಾಸಿ ಶ್ರೀಜಿತ್(17) ಮೃತ ಬಾಲಕ ಒಂದು ವಾರದಿಂದ ಹೊಟ್ಟೆನೋವು ಸಮಸ್ಯೆ ಇತ್ತು. ಎರಡು ದಿನಗಳಿಂದ ತೀವ್ರ ಸ್ವರೂಪಕ್ಕೆ ಬದಲಾಗಿ ವಾಂತಿ ಸಮಸ್ಯೆ ಎದುರಾಗಿತ್ತು. ಆತ ಸುಳ್ಯದ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ. ಅಲ್ಲಿನ ವೈದ್ಯರು ಶಸ್ತ್ರಚಿಕಿತ್ಸೆ ಆಗಬೇಕು ಎಂದು ಸೂಚಿಸಿದ ಕಾರಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಬಂದು, ಬಳಿಕ ಅಲ್ಲಿಂದ ಶನಿವಾರ ಮಧ್ಯರಾತ್ರಿ 1 ಗಂಟೆಯ ವೇಳೆಗೆ ಇಲ್ಲಿಗೆ ಬಂದು ದಾಖಲಾಗಿದ್ದ. ಆತನಿಗೆ ದೊಡ್ಡಕರುಳು ಸುತ್ತಿಕೊಂಡು ಕೊಳೆಯುವ (ಸಿದ್ಮಾಯ್ಡ್‌ ವಾಲ್ಯೂಲಸ್-ಗ್ಯಾಂಗ್ರೀನ್ ) ಸಮಸ್ಯೆ ಇದ್ದುದರಿಂದ ಭಾನುವಾರ ಸಂಜೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಶಸ್ತ್ರಚಿಕಿತ್ಸೆ ಬಳಿಕ 10 ಗಂಟೆಗಳ ತನಕ ಯಾವುದೇ ಸಮಸ್ಯೆ ಇರಲಿಲ್ಲ. ಬಳಿಕ ವಿಪರೀತ ಜ್ವರ ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಇಲ್ಲಿ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಮಂಗಳೂರಿಗೆ ಕರೆದೊಯ್ಯಲು ಸೂಚಿಸಲಾಗಿತ್ತು. ಶಸ್ತ್ರಚಿಕಿತ್ಸೆಯ ಬಳಿಕ ಬ್ಯಾಕ್ಟಿರಿಯಾ ರಕ್ತಕ್ಕೆ ಸೇರಿಕೊಂಡ ಕಾರಣ ಸಾವು ಸಂಭವಿಸಿದೆ ಎಂದು ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ ಪ್ರಕಾಶ್ ಮತ್ತು ಚೇತನಾ ಆಸ್ಪತ್ರೆಯ ವೈದ್ಯ ಜೆ.ಸಿ.ಅಡಿಗ ತಿಳಿಸಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು, 5 ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಮಲಗಿದ ಸ್ಥಿತಿಯಲ್ಲಿರುವ ತಂದೆ ಮತ್ತು ತಾಯಿಯನ್ನು ಸಲಹಬೇಕಾಗಿದ್ದ ಬಾಲಕ ಇಲ್ಲಿನ ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದಾನೆ. ಈ ಹಿಂದೆಯೂ ಇಲ್ಲಿನ ವೈದ್ಯರ ನಿರ್ಲಕ್ಷ್ಯಕ್ಕೆ ಮಗುವೊಂದು ಬಲಿಯಾಗಿತ್ತು. ಮಹಿಳೆಯೊಬ್ಬರನ್ನು ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ಪೀಡಿಸಿದ ಘಟನೆಯೂ ಈ ಹಿಂದೆ ನಡೆದಿದೆ. ಇದು ನಿಲ್ಲಬೇಕು ಎಂದು ಆಗ್ರಹಿಸಿದರು.

ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣ ದಾಖಲಿಸಿದರೆ ಸಾಲದು. ಪೊಲೀಸರು ತಪ್ಪಿತಸ್ಥ ವೈದ್ಯರನ್ನು ಬಂಧಿಸಬೇಕು. ಉಪವಿಭಾಗಾಧಿಕಾರಿ, ತಹಶೀಲ್ದಾರ್ ಅಥವಾ ಶಾಸಕರು ಬಂದು ನಮ್ಮ ಮನವಿ ಸ್ವೀಕರಿಸುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದರು.

ಪುತ್ತೂರು ನಗರಠಾಣೆ ಇನ್‌ಸ್ಪೆಕ್ಟರ್‌ ಸುನೀಲ್ ಕುಮಾರ್ ಮಾತನಾಡಿ, ಘಟನೆ ಸಂಬಂಧ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಪ್ರತಿಭಟನೆ ವಾಪಸ್‌ ತೆಗೆದುಕೊಳ್ಳುವಂತೆ ಮನವಿ ಮಾಡಿದರು. ಸ್ಪಂದಿಸದ ಪ್ರತಿಭಟನಕಾರರು, ವೈದ್ಯರನ್ನು ಬಂಧಿಸಿದ ಮೇಲೆ ಪ್ರತಿಭಟನೆ ಹಿಂತೆಗೆದುಕೊಳ್ಳುತ್ತೇವೆ. ವೆಂಟಿಲೇಟರ್ ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲಿ ಯಾಕೆ ದಾಖಲಿಸಿಕೊಂಡಿರುವುದು ಏಕೆ ಎಂದು ಪ್ರಶ್ನಿಸಿದರು.

ಪ್ರಕರಣ ದಾಖಲು: ಸುಳ್ಯ ತಾಲ್ಲೂಕಿನ ಪೈಚಾರು ಗ್ರಾಮದ ಶಾಂತಿನಗರ ನಿವಾಸಿ ಸಂಜೀವ-ಪ್ರೇಮ ದಂಪತಿಯ ಪುತ್ರ ಶ್ರೀಜಿತ್‌ನನ್ನು ಆ.12ರ ಮಧ್ಯರಾತ್ರಿ ಪುತ್ತೂರಿನ ಚೇತನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನನ್ನು ಪರೀಕ್ಷಿಸಿದ್ದ ವೈದ್ಯರು ಆ.13ರಂದು ಬೆಳಿಗ್ಗೆ ಶಸ್ತ್ರಚಿಕಿತ್ಸೆ ಮಾಡುವುದಾಗಿ ತಿಳಿಸಿ, ಸಂಜೆ 6 ಗಂಟೆಗೆ ಶಸ್ತ್ರಚಿಕಿತ್ಸೆ ಮುಗಿಸಿ ಐಸಿಯು ವಾರ್ಡ್‌ಗೆ ದಾಖಲಿಸಿದ್ದರು. ಆ.14ರಂದು ಬೆಳಿಗ್ಗೆ 9 ಗಂಟೆಗೆ ಬಂದು ಬಾಲಕನನ್ನು ನೋಡಿಕೊಳ್ಳಲು ನಮ್ಮಲ್ಲಿ ಸಮರ್ಪಕ ಉಪಕರಣಗಳಿಲ್ಲ. ಮಂಗಳೂರಿಗೆ ಕರೆದೊಯ್ಯುವಂತೆ ತಿಳಿಸಿದ್ದರು. ಅದರಂತೆ ಮಂಗಳೂರಿನ ಜ್ಯೋತಿ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿಗೆ ತಲುಪುವಾಗ ಮಧ್ಯಾಹ್ನ 12 ಗಂಟೆ ಆಗಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿ ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದರು. ಪುತ್ತೂರಿನ ಚೇತನಾ ಆಸ್ಪತ್ರೆಯ ವೈದ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಬಾಲಕನ ದೊಡ್ಡಪ್ಪ ಕೃಷ್ಣ ಜಿ.ಅವರು ಪುತ್ತೂರು ನಗರಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು | ವಾಯ್ಸ್ ಆಫ್ ಬ್ಲಡ್ ಡೋನರ್ಸ್‍ಗೆ ಉಚಿತ ಆಂಬುಲೆನ್ಸ್ ಹಸ್ತಾಂತರ

Next Post

ಮಂಗಳೂರು | ಸೌಜನ್ಯಗೆ ನ್ಯಾಯ ಕೊಡಿ, ಮಹಿಳೆಯರಿಗೆ ರಕ್ಷಣೆ ನೀಡಿ, ದಕ್ಷಿಣ ಕನ್ನಡ ಜಿಲ್ಲಾ KRS ಪಕ್ಷ ಆಗ್ರಹ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
28
Next Post
ಮಂಗಳೂರು | ಸೌಜನ್ಯಗೆ ನ್ಯಾಯ ಕೊಡಿ, ಮಹಿಳೆಯರಿಗೆ ರಕ್ಷಣೆ ನೀಡಿ, ದಕ್ಷಿಣ ಕನ್ನಡ ಜಿಲ್ಲಾ KRS ಪಕ್ಷ ಆಗ್ರಹ

ಮಂಗಳೂರು | ಸೌಜನ್ಯಗೆ ನ್ಯಾಯ ಕೊಡಿ, ಮಹಿಳೆಯರಿಗೆ ರಕ್ಷಣೆ ನೀಡಿ, ದಕ್ಷಿಣ ಕನ್ನಡ ಜಿಲ್ಲಾ KRS ಪಕ್ಷ ಆಗ್ರಹ

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
57
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d