• About us
  • Contact us
  • Disclaimer
Thursday, February 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು | ಸೌಜನ್ಯಗೆ ನ್ಯಾಯ ಕೊಡಿ, ಮಹಿಳೆಯರಿಗೆ ರಕ್ಷಣೆ ನೀಡಿ, ದಕ್ಷಿಣ ಕನ್ನಡ ಜಿಲ್ಲಾ KRS ಪಕ್ಷ ಆಗ್ರಹ

Coastal Times by Coastal Times
August 16, 2023
in ಕರಾವಳಿ
ಮಂಗಳೂರು | ಸೌಜನ್ಯಗೆ ನ್ಯಾಯ ಕೊಡಿ, ಮಹಿಳೆಯರಿಗೆ ರಕ್ಷಣೆ ನೀಡಿ, ದಕ್ಷಿಣ ಕನ್ನಡ ಜಿಲ್ಲಾ KRS ಪಕ್ಷ ಆಗ್ರಹ
799
VIEWS
WhatsappTelegramShare on FacebookShare on Twitter

ಮಂಗಳೂರು ಆ.15: ಸೌಜನ್ಯ ಅತ್ಯಾಚಾರ ಮತ್ತು ಹತ್ಯ, ಮುರುಘಾ ಮಠದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಕುಸ್ತಿ ಫೆಡರೇಶನ್ ನಲ್ಲಿ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ, ಮಣಿಪುರದ ಮಹಿಳೆಯರ ನಗ್ನ ಮೆರವಣಿಗೆ ಇತ್ಯಾದಿ ಅಹಿತಕರ ಘಟನೆಗಳು ನಡೆಯುತ್ತಿರುವುದನ್ನು ನೋಡಿದಾಗ ಇಡೀ ದೇಶದಲ್ಲೇ ಮಹಿಳೆಯರಿಗೆ ಕೆಲಸ ಮಾಡಲು ಮುಕ್ತವಾದ ಸ್ವತಂತ್ರ ವಾತಾವರಣ ಇಲ್ಲದೇ ಇರುವುದು ಮತ್ತು ದೇಶವೇ ಮಹಿಳೆಯರಿಗೆ ಅಸುರಕ್ತವಾಗಿರುವುದು ಕಂಡುಬರುತ್ತದೆ ಮತ್ತು ನಮಗೆ ಒಂದು ಎಚ್ಚರಿಕೆಯ ಘಂಟೆಯಾಗಿ ಕಾಣಿಸುತ್ತಿದೆ.

ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರಿಗೆ ಬಸ್‌ ಟಿಕೆಟ್‌ ಉಚಿತ, ಗೃಹಲಕ್ಷ್ಮೀ ಯೋಜನೆಯ ಮೂಲಕ 2000 ರೂ ಗಳ ಪ್ರತೀ ತಿಂಗಳು ಸಹಾಯಧನ ಇತ್ಯಾದಿಗಳನ್ನು ಜಾರಿಗೊಳಿಸುತ್ತಿರುವ ಹಾಗು ಒಕ್ಕೂಟ ಸರ್ಕಾರವು ಭೇಟಿ ಪಡಾವೂ, ಭೇಟಿ ಬಚಾವೂ (ಮಗಳನ್ನು ಓದಿಸಿ, ಮಗಳನ್ನು ರಕ್ಷಿಸಿ) ಎಂದು ಹೇಳುತ್ತಿರುವ ಸಂದರ್ಭದಲ್ಲಿ ಮಹಿಳೆಯರು ಸ್ವತಂತ್ರವಾಗಿ ಮತ್ತು ಮುಕ್ತವಾಗಿ ಕೆಲಸ ಮಾಡಲು ಮತ್ತು ಜೀವನ ನಡೆಸಲು ಅವರಿಗೆ ಪ್ರಮುಖವಾಗಿ ಬೇಕಾದಂತಹ ರಕ್ಷಣೆ ಮತ್ತು ಭದ್ರತೆಯನ್ನು ನೀಡಿ ಸುರಕ್ಷತೆಯ ಭಾವವನ್ನು ತರಲು ವಿಫಲವಾಗಿರುವುದು ಒಂದು ದುರದೃಷ್ಟಕರ ಸಂಗತಿ.

ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಸೌಜನ್ಯ ಎಂಬ 17 ವರ್ಷದ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಯಾವ ರೀತಿ ಭ್ರಷ್ಟ ಪಕ್ಷಗಳ ರಾಜಕೀಯ ಆಟದಿಂದ ನಿಜವಾದ ಅಪರಾಧಿಗಳು ತಪ್ಪಿಸಿಕೊಂಡು, ಒಬ್ಬ ನಿರಪರಾಧಿ ವಿನಾಕಾರಣ 11 ವರ್ಷಗಳು ದೈಹಿಕ, ಮಾನಸಿಕ ಹಿಂಸೆ ಅನುಭವಿಸುವಂತೆ ಆಗಿದೆ. ಅಲ್ಲದೇ ಸೌಜನ್ಯಳ ಕುಟುಂಬ ನ್ಯಾಯ ಸಿಗದೇ ಪ್ರತೀ ದಿನ ದು:ಖದಿಂದ, ನೋವಿನಿಂದ ನರಳುವಂತಾಗಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ನಿರಪರಾಧಿ ಎಂದು ಘೋಷಣೆ ಆದ ಮೇಲೆ ಮರು ತನಿಖೆ ನಡೆಸಲು ಸರ್ಕಾರ ಯಾಕ ಮೀನ ಮೇಷ ಎಣಿಸುತ್ತಿದೆ? ಸರ್ಕಾರಕ್ಕೆ ಹೆಣ್ಣು ಮಕ್ಕಳ ಸುರಕ್ಷತೆ ಮತ್ತು ಅವರಿಗೆ ನ್ಯಾಯಕೊಡಿಸುವ ಯಾವುದೇ ಉದ್ದೇಶ ಇಲ್ಲವೇ? ಅಥವಾ ಯಾವುದಾದರೂ ಪ್ರಭಾವಿ ವ್ಯಕ್ತಿಗಳ ಒತ್ತಡಕ್ಕೆ ಸರ್ಕಾರ ಶರಣಾಗಿದೆಯೇ? ಈ ಎಲ್ಲಾ ಪ್ರಶ್ನೆಗಳಿಗೆ ಸರ್ಕಾರ ಉತ್ತರಿಸಬೇಕು.

ಸರ್ಕಾರಕ್ಕೆ ನಿಜವಾಗಲೂ ಮಹಿಳೆಯರ ಬಗ್ಗೆ ಕಾಳಜಿ ಇದ್ದಲ್ಲಿ ಈ ಕೂಡಲೇ ಸೌಜನ್ಯಳ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರುತನಿಖೆಗೆ ಆದೇಶ ನೀಡಬೇಕು, ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಮತ್ತು ತನಿಖೆಯ ದಾರಿ ತಪ್ಪಿಸಿ, ಸಾಕ್ಷಿನಾಶ ಮಾಡಿ ನಿಜವಾದ ಅಪರಾಧಿಗಳು ತಪ್ಪಿಸಿಕೊಳ್ಳುವ ಹಾಗೆ ಮಾಡಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಈ ಕೂಡಲೇ ವಜಾ ಮಾಡಿ ಅವರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ KRS ಪಕ್ಷ ಅಗ್ರಹಿಸುತ್ತದೆ.

ಈ ಒಂದು ರಾಜಕೀಯ ಪ್ರೇರಿತ ಹಾಗೂ ಪ್ರಭಾವಿಗಳ ಹಿಡಿತದಲ್ಲಿರುವ ಸರ್ಕಾರಿ ವ್ಯವಸ್ಥೆಯಿಂದ ಮುಂದಿನ ದಿನಗಳಲ್ಲಿ ಕೂಡಾ ಇದೇ ರೀತಿಯ ಘಟನೆಗಳು ಮರುಕಳಿಸುವುದಂತೂ ಗ್ಯಾರಂಟಿ, ಅದ್ದರಿಂದ ಮಹಿಳೆಯರಿಗೆ ಶಕ್ತಿ ಭಾಗ್ಯ, ಗೃಹಲಕ್ಷ್ಮೀ ಭಾಗ್ಯಗಳನ್ನು ನೀಡುತ್ತಿರುವ ಈಗಿನ ಸರ್ಕಾರ, ವ್ಯವಸ್ಥೆಯಲ್ಲಿ ಇರುವ ಲೋಪ ದೋಷಗಳನ್ನು ಕೂಡಲೇ ಸರಿಪಡಿಸಿ, ಸೂಕ್ತವಾದ ಬದಲಾವಣೆಗಳನ್ನು ತಂದು ಪ್ರಾಮುಖ್ಯತ ಮೇಲೆ ಮಹಿಳೆಯರ ರಕ್ಷಣೆಗೆ ಇರುವ ಕಾನೂನುಗಳ ಅಡಿಯಲ್ಲಿ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಮುಂದಿನ ಒಂದು ವರ್ಷದಲ್ಲಿ ಮುಗಿಸಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವ ವ್ಯವಸ್ಥೆಯನ್ನು ಮಾಡಬೇಕು ಎಂದು ಈ ಮೂಲಕ KRS ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಅಗ್ರಹಿಸುತ್ತಿದ್ದೇವೆ.

ನಮ್ಮ ಸರ್ಕಾರಗಳು, ಕಲುಷಿತಗೊಂಡು, ದುರಾಚಾರ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿರುವುದ ಇಂತಹ ಪರಿಸ್ಥಿತಿಗೆ ಕಾರಣ. ಉತ್ತಮ ಪೊಲೀಸ್ ವ್ಯವಸ್ಥೆಯ ಮೂಲಕ, ಮಹಿಳೆಯರ ರಕ್ಷಣೆ ಮತ್ತು ಸುರಕ್ಷತೆಯನ್ನು ಮಾಡಬೇಕಾಗಿದೆ, ಅದರ ನಮ್ಮ ಸರ್ಕಾರಗಳು ಆ ಬಗ್ಗೆ ಗಮನ ನೀಡದೆ, ವರ್ಗಾವಣೆ, ಕಮೀಷನ್ ದಂಧ, ಹೀಗೆ ಸಾಲು ಸಾಲು ಅಕ್ರಮಗಳಲ್ಲಿ ಮುಳುಗಿರುವುದರಿದ ಇಂತಹ ಪರಿಸ್ಥಿತಿ ಇದೆ.

ಇಂದಿನ ಕಾಗ್ರೆಸ್ ಸರ್ಕಾರವು, ವಿವೇಚನೆಯಿಲ್ಲದೆ ನಡೆದುಕೊಳ್ಳುತ್ತಿದ್ದು, ಭ್ರಷ್ಟಾಚಾರಕ್ಕೆ ನಿಯಂತ್ರಣ ಹೇರಿ, ಸಂಪನ್ಮೂಲ ಕ್ರೋಢೀಕರಿಸಿದರೆ, ಗ್ಯಾರಂಟಿ ಯೋಜನಗಳ ಜೊತೆಗೆ, ಇತರ ಕಲ್ಯಾಣ ಕಾರ್ಯಕ್ರಮ ಹಾಗು ಅಭಿವೃದ್ಧಿ ಯೋಜನೆಗಳಿಗೆ ಸಂಪನ್ಮೂಲ ಒದಗಿಸಬಹುದಾಗಿದೆ. ಆದರೆ, ಇದಾವುದಕ್ಕೂ ಗಮನ ನೀಡುತ್ತಿಲ, ಕನಿಷ್ಠ ಪಕ್ಷ ದಕ್ಷ ಅಡಳಿತ ನೀಡುವ ಬಗ್ಗೆಯೂ ಯೋಚಿಸುತ್ತಿಲ್ಲ. ಇದೇ ರೀತಿ ಮುಂದುವರೆದರೆ, ಈ ಕಾಂಗ್ರೆಸ್ ಸರ್ಕಾರಕ್ಕೆ ಯಾವ ಗ್ಯಾರಂಟಿಯೂ ಉಪಯೋಗಕ್ಕೆ ಬರುವುದಿಲ್ಲ. ಮಹಿಳೆಯರಿಗೆ ಭದ್ರತೆ ಮತ್ತು ಸುರಕ್ಷತೆ ಇಲ್ಲದಿದ್ದರೆ ಶಕ್ತಿ ಮತ್ತು ಗೃಹಲಕ್ಷ್ಮಿಯಂತಹ ಯೋಜನೆಗಳು ಕೇವಲ ತಾತ್ಕಾಲಿಕ ನರವನ್ನು ಮಾತ್ರ ಒದಗಿಸಬಲ್ಲದು.

ಈ ಎಲ್ಲಾ ಕಾರಣಗಳಿಂದ ಇವತ್ತು ಸ್ವಾತಂತ್ರ್ಯ ದಿನಾಚರಣೆಯ ದಿನ ನಮ್ಮ ದಕ್ಷಿಣ ಕನ್ನಡ ಜಿಲ್ಲಾ KRS ಪಕ್ಷದ ವತಿಯಿಂದ “ಮಹಿಳೆಯರಿಗೆ ಸ್ವಾತಂತ್ರ್ಯ ಮತ್ತು ಭದ್ರತೆ’ ಬೇಕು ಅನ್ನುವ ಅರಿವು ಮೂಡಿಸುವ ಒಂದು ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಈ ನಡಿಗೆ ಕಾರ್ಯಕ್ರಮ ಮಂಗಳೂರಿನ ಟೌನ್ ಹಾಲ್ ನ ಸುತ್ತ ಸಂಚರಿಸಿ, ಗಾಂಧಿ ಪ್ರತಿಮೆ ಬಳಿ ಮುಕ್ತಾಯಗೊಂಡಿತು. ಮುಖ್ಯವಾಗಿ ಮಹಿಳೆಯರಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಮತ್ತು ಜೀವನ ನಡೆಸಲು ಅಗತ್ಯವಾಗಿ ಬೇಕಾದಂತಹ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಈ ನಡಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ನಡಿಗೆಯಲ್ಲಿ ರಾಜ್ಯ ಜಂಟಿ ಕಾರ್ಯದರ್ಶಿ ಶ್ರೀ ರಘುಪತಿ ಭಟ್‌, ರಾಜ್ಯ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಬಶೀರ್, ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ಪ್ರವೀಣ್ ಜಾರ್ಜ್ ಪೇರರ, ಉಪಾಧ್ಯಕ್ಷರಾದ ಶ್ರೀ ಜೆರಾರ್ಡ್ ಟವರ್ಸ್, ಉಪಾಧ್ಯಕ್ಷರಾದ ಶ್ರೀಮತಿ ಎನ್ನಿ ಪಿಂಟೋ, ಪ್ರಧಾನ ಕಾರ್ಯದರ್ಶಿ ಶ್ರೀ ಪ್ರೇಮ್ ಜೇಮ್ಸ್ ಲೋಬೋ, ಕಾರ್ಯದರ್ಶಿಗಳಾದ ಶ್ರೀಮತಿ ಯಶೋದ, ಶ್ರೀ ದಯಾನಂದ ಶ್ರೀ ಮೊಹಮ್ಮದ ಸಾಲಿ, ಶ್ರೀ ಪ್ರಕಾಶ್, ಶ್ರೀಮತಿ ಸುನೀತ ರೂಝಾರಿಯೋ ಹಾಜರಿದ್ದರು. KRS ಪಕ್ಷದ ಉಡುಪಿ ಜಿಲ್ಲೆಯ ಪದಾಧಿಕಾರಿಗಳು ಮತ್ತು ಸೈನಿಕರು ಕೂಡಾ ಭಾವಹಿಸಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಹೊಟ್ಟೆನೋವೆಂದು ಬಂದಿದ್ದ ಬಾಲಕನಿಗೆ ಶಸ್ತ್ರಚಿಕಿತ್ಸೆ ; ವೈದ್ಯರ ಎಡವಟ್ಟಿನಿಂದ ಬಾಲಕ ಸಾವು,ಆಸ್ಪತ್ರೆ ಮುಂದೆ ಶವ ಇಟ್ಟು ಪ್ರತಿಭಟನೆ, ನ್ಯಾಯಕ್ಕಾಗಿ ಆಗ್ರಹ

Next Post

ಆ. 25ರಂದು ರಾಜ್‌ ಬಿ. ಶೆಟ್ಟಿ ಅವರ ನೇತೃತ್ವದ “ಟೋಬಿ’ ಕನ್ನಡ ಸಿನೆಮಾ ತೆರೆಗೆ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
27
Next Post
ಆ. 25ರಂದು ರಾಜ್‌ ಬಿ. ಶೆಟ್ಟಿ ಅವರ ನೇತೃತ್ವದ “ಟೋಬಿ’ ಕನ್ನಡ ಸಿನೆಮಾ ತೆರೆಗೆ

ಆ. 25ರಂದು ರಾಜ್‌ ಬಿ. ಶೆಟ್ಟಿ ಅವರ ನೇತೃತ್ವದ “ಟೋಬಿ’ ಕನ್ನಡ ಸಿನೆಮಾ ತೆರೆಗೆ

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
57
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d