• About us
  • Contact us
  • Disclaimer
Wednesday, September 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

Coastal Times by Coastal Times
September 16, 2026
in ಕ್ರೈಮ್ ನ್ಯೂಸ್
ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು
14
VIEWS
WhatsappTelegramShare on FacebookShare on Twitter

ಬೆಳ್ತಂಗಡಿ: ಮನೆಯ ಕಪಾಟಿನಲ್ಲಿ ಇಟ್ಟಿದ್ದ 15.82 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವು ಮಾಡಿರುವ ಘಟನೆ ಕುವೆಟ್ಟು ಗ್ರಾಮದ ಆಲಂದಿಲದಲ್ಲಿ ಸಂಭವಿಸಿದೆ. ಆಲಂದಿಲ ನಿವಾಸಿ ನೌಫಾಲ್ ಬಿ.ಎಂ. ಅವರು ಸೆ.13ರಂದು ಮಧ್ಯಾಹ್ನ ಪತ್ನಿ, ಮಕ್ಕಳು ಹಾಗೂ ತಾಯಿಯನ್ನು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಗುರುವಾಯನಕೆರೆಯಲ್ಲಿ ಬಿಟ್ಟು ಕೆಲಸಕ್ಕಾಗಿ ಬೆಳ್ತಂಗಡಿಗೆ ತೆರಳಿದ್ದರು.

ಸೆ. 14ರಂದು ವಯರಿಂಗ್ ಕೆಲಸಕ್ಕಾಗಿ ಕಾರ್ಮಿಕರನ್ನು ಮನೆಗೆ ಕರೆಸಲಾಗಿತ್ತು. ಮದ್ದಡ್ಕದ ಫಾರೂಕ್ ಎಂಬವರು ಕುದ್ರಡ್ಕದ ಅಶ್ರಫ್ ಹಾಗೂ ಶಿರ್ಲಾಲಿನ ಸುಲೈಮಾನ್ ಅವರನ್ನು ಕರೆದುಕೊಂಡು ಬಂದು ಮನೆಯಲ್ಲಿ ಕೆಲಸ ಮಾಡಿದ್ದರು. ಈ ವೇಳೆ ನೌಫಾಲ್ ಅವರ ತಮ್ಮ ಮಹಮ್ಮದ್ ನೌಷಾದ್ ಮನೆಯಲ್ಲಿದ್ದನೆಂದು ದೂರಿನಲ್ಲಿ ತಿಳಿಸಲಾಗಿದೆ.

ಅದೇ ದಿನ ರಾತ್ರಿ ಸುಮಾರು 8.30ಕ್ಕೆ ನೌಫಾಲ್ ಕುಟುಂಬದೊಂದಿಗೆ ಮನೆಗೆ ವಾಪಸ್ ಬಂದಾಗ, ಬೆಡ್‌ರೂಂನ ಗಾದ್ರೇಜ್‌ನಲ್ಲಿ ಇಟ್ಟಿದ್ದ ಚಿನ್ನದ ಬಾಕ್ಸ್ ಕಾಣಿಸದಿರುವುದು ಗಮನಕ್ಕೆ ಬಂದಿದೆ. ಪರಿಶೀಲನೆ ನಡೆಸಿದಾಗ 32 ಗ್ರಾಂ ಮತ್ತು 26 ಗ್ರಾಂ ತೂಕದ ಎರಡು ಚಿನ್ನದ ಸರಗಳು, ಮಗುವಿನ ಚಿನ್ನದ ಸರ, ಕಾಲುಚೈನು, ಬ್ರಾಸ್‌ಲೈಟ್ ಸೇರಿದಂತೆ 15 ಲಕ್ಷದ 82 ಸಾವಿರ ರೂಪಾಯಿ ಮೌಲ್ಯದ ಒಟ್ಟು 113 ಗ್ರಾಂ ತೂಕದ ಚಿನ್ನಾಭರಣ ಹಾಗೂ 1.80 ಲಕ್ಷ ರೂಪಾಯಿ ನಗದು ಕಳವಾಗಿರುವುದು ಬೆಳಕಿಗೆ ಬಂದಿದೆ.

ಇದಲ್ಲದೆ ನೌಫಾಲ್ ಅವರ ತಾಯಿಯ ಗಾದ್ರೇಜ್‌ನಲ್ಲಿದ್ದ ಒಟ್ಟು 7 ಗ್ರಾಂ ತೂಕದ ಮೂರು ಉಂಗುರಗಳೂ ಕಾಣೆಯಾಗಿರುವುದು ಪತ್ತೆಯಾಗಿದೆ. ಮನೆಯ ಗಾದ್ರೇಜ್‌ನ ಕೀ ಗಾದ್ರೇಜ್‌ನಲ್ಲಿಯೇ ಇದ್ದು, ಮನೆಯವರು ಹೊರಗಿದ್ದ ಅವಧಿಯಲ್ಲಿ ಯಾರೋ ಮನೆಗೆ ಪ್ರವೇಶಿಸಿ ಗಾದ್ರೇಜ್ ತೆರೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಬಗ್ಗೆ ದೂರು‌ ನೀಡಲಾಗಿದೆ.

ವಯರಿಂಗ್ ಕೆಲಸಕ್ಕೆ ಬಂದಿದ್ದ ಅಶ್ರಫ್, ಫಾರೂಕ್ ಹಾಗೂ ಸುಲೈಮಾನ್ ಅವರ ಮೇಲೆ ಅನುಮಾನವಿರುವುದಾಗಿ ನೌಫಾಲ್ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.15 ರಂದು ಕಲಂ 331(3), 331(4), 305 BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

Related Posts

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
50
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
67

Discussion about this post

Recent News

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
14
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d