ಮಂಗಳೂರು: ವಿಶ್ವ ವಿಖ್ಯಾತ ಪ್ರಸಿದ್ದಿಯನ್ನು ಪಡೆದಿರುವ ಮಂಗಳೂರು ದಸರಾಕ್ಕೆ ಇಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಚಾಲನೆಯನ್ನು ನೀಡಲಾಯಿತು. ಶ್ರೀ ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಪುರಸ್ಕಾರಗಳನ್ನು ನೆರವೇರಿಸಲಾಯಿತು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ವತಿಯಿಂದ ನಡೆಯುವ ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಾಗಣಪತಿ ,ಶ್ರೀ ಶಾರದಾ ದೇವಿ, ಹಾಗೂ ನವದುರ್ಗೆ ಯರ ವಿಗ್ರಹಗಳ ಪ್ರತಿಷ್ಠಾಪನೆಯೊಂದಿಗೆ ಉತ್ಸವದ ಉದ್ಘಾಟನೆಯನ್ನು ಕುದ್ರೊಳಿ ಕ್ಷೇತ್ರದ ಆಧುನೀಕರಣದ ರೂವಾರಿ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಉಪಸ್ಥಿತಿಯಲ್ಲಿ ಕರ್ಣಾಟಕ ಬ್ಯಾಂಕ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಪಂಜ ನೆರವೇರಿಸಿದರು.
ಶ್ರೀ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆಮಹಾಗಣಪತಿಯೊಂದಿಗೆ ನವ ದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಿ, ಕೂಷ್ಮಾಂಡಿನಿ, ಸ್ಕಂದ ಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿಯರ ಪ್ರತಿಷ್ಠಾಪನೆ ನೆರವೇರಿತು. ಕುದ್ರೊಳಿ ಕ್ಷೇತ್ರದ ಆಧುನೀಕರಣದ ರೂವಾರಿ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ದಂಪತಿ, ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆಯ ಸದಸ್ಯರುಗಳು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಇಂದಿನಿಂದ ದೇವಸ್ಥಾನದಲ್ಲಿ 9 ದಿನಗಳ ಕಾಲ ವಿವಿಧ ರೀತಿಯ ಪೂಜಾ ಕಾರ್ಯಕ್ರಮಗಳು, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು, ಅನ್ನದಾನ ದೇವಳದಲ್ಲಿ ನಡೆಯಲ್ಲಿದ್ದು ದೇವಾಲಯ ಹಾಗೂ ಹೋಗುವ ದಾರಿಯುದ್ದಕ್ಕೂ ವಿದ್ಯುತ್ ದೀಪಗಳಿಂದ ಅಲಂಕೃತವಾಗಿದ್ದು ನೋಡುಗರ ಗಮನ ಸೆಳೆಯುವಂತಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post