ಮಂಗಳೂರು, ಅ.15: ಸ್ಟೇಟ್ಬ್ಯಾಂಕ್ ಬಳಿ ಇರುವ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಖಾಸಗಿ ಬಸ್ ನಿರ್ವಾಹಕರೊಬ್ಬರ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್ನಲ್ಲಿ ನಿರ್ವಾಹಕರಾಗಿದ್ದ ಬಜ್ಪೆ ನಿವಾಸಿ ರಾಜೇಶ್ (31) ಮೃತಪಟ್ಟವರು.
ಈತ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್ ತೊಳೆಯುವುದು, ಕೆಲವೊಮ್ಮೆ ಕಂಡಕ್ಟರ್ ಆಗಿಯೂ ಕೆಲಸ ಮಾಡುತ್ತಿದ್ದ. ಬಸ್ ನಿಲ್ದಾಣದಲ್ಲಿಯೇ ಉಳಿದುಕೊಳ್ಳುತ್ತಿದ್ದ. ಸೋಮವಾರ ರಾತ್ರಿ 8.30ರ ಸುಮಾರಿಗೆ ಬಸ್ ನಿಲ್ದಾಣದ ಬಳಿ ರಸ್ತೆ ಬದಿ ಶವವಾಗಿ ಪತ್ತೆಯಾಗಿದ್ದಾನೆ. ಕಿವಿಯಲ್ಲಿ ರಕ್ತ ಬರುತ್ತಿದ್ದು, ತಲೆಯ ಭಾಗಕ್ಕೆ ಹೊಡೆದಿರುವಂತೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿಯ ಸೋದರಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದ್ದು, ಪೋಸ್ಟ್ ಮಾರ್ಟಂ ನಡೆಸಲಾಗಿದೆ. ವರದಿ ಆಧಾರದಲ್ಲಿ ತನಿಖೆ ಮಾಡುತ್ತೇವೆ. ಸಾವಿನ ಬಗ್ಗೆ ದೂರಿನಲ್ಲಿ ಸಂಶಯ ವ್ಯಕ್ತಪಡಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post