ಕಾಪು, ಡಿ16 : ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು ಬಳಿಕ ಹೊಡೆದಾಟದ ಮಟ್ಟಕ್ಕೆ ತಲುಪಿದ ಘಟನೆ ಡಿ. 16 ರ ಮಧ್ಯಾಹ್ನ ನಡೆದಿದೆ.
ವಿದ್ಯಾರ್ಥಿನಿಯೊಂದಿಗೆ ಅನ್ಯಕೋಮಿನ ಯುವಕ ಮಾತನಾಡಿದ ಎನ್ನುವ ಕ್ಲುಲಕ ವಿಚಾರ ಈ ಘಟನೆಗೆ ಕಾರಣವಾಗಿದ್ದು, ಬಳಿಕ ಮಾತಿಗೆ ಮಾತು ಬೆಳೆದು ಹೊಡೆದಾಟ ಹಂತ ತಲುಪುತ್ತಿದ್ದಂತೆ ಪ್ರಾಶುಂಪಾಲರು ಕಾಪು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕಾಪು ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮಧ್ಯಾಹ್ನದ ವೇಳೆಗೆ ವಿದ್ಯಾರ್ಥಿನಿಯೋರ್ವಳ ಜೊತೆ ಅನ್ಯಕೋಮಿನ ವಿದ್ಯಾರ್ಥಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ಕೆಲಹೊತ್ತು ವಾಗ್ವಾದ ನಡೆದಿದ್ದು , ಬಳಿಕ ಹೊಡೆದಾಟ ನಡೆದಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಆಗಮಿಸಿದ ಕಾಪು ಎಸ್ ಐ ರಾಘವೇಂದ್ರ ಸಿ, ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ , ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದು, ವಿದ್ಯಾರ್ಥಿಗಳಿಗೆ ಬುದ್ದಿಮಾತು ಹೇಳಿ ಎಚ್ಚರಿಕೆ ನೀಡಿದ್ದಾರೆ.