ಪುತ್ತೂರು, ಜ.17: ಯುವತಿಯೊಬ್ಬಳನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ತಾಲೂಕಿನ ಮುಂಡೂರು ಗ್ರಾಮದ ಕಂಪ ಸಮೀಪ ನಡೆದಿರುವುದು ವರದಿಯಾಗಿದೆ. ಮೃತಳನ್ನು ಇಲ್ಲಿನ ನಿವಾಸಿ ಗಿರಿಜಾ ಎಂಬವರ ಪುತ್ರಿ ಜಯಶ್ರೀ(23) ಎಂದು ಗುರುತಿಸಲಾಗಿದೆ. ಜಯಶ್ರೀ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಮಗಳ ಬೊಬ್ಬೆ ಕೇಳಿ ತೋಟದಲ್ಲಿದ್ದ ಗಿರಿಜಾ ಓಡಿ ಬಂದು ನೋಡಿದಾಗ ಜಯಶ್ರೀ ರಕ್ತದ ಮಡುವಲ್ಲಿ ಬಿದ್ದಿದ್ದಳೆನ್ನಲಾಗಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಜಯಶ್ರೀ ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.
ವ್ಯಕ್ತಿ ಯಾಕಾಗಿ ಕೃತ್ಯ ಎಸಗಿದ್ದಾನೆಂದು ತಿಳಿದುಬಂದಿಲ್ಲ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.








Discussion about this post