• About us
  • Contact us
  • Disclaimer
Tuesday, June 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ ಕೆಸಿ ರೋಡ್ ಶಾಖೆಯ ಕೋಟೆಕಾರು ಸಹಕಾರಿ ಬ್ಯಾಂಕಿಗೆ ಐದು ಮಂದಿ ಗನ್​ ತೋರಿಸಿ ಸಿನಿಮೀಯ ಶೈಲಿಯಲ್ಲಿ ದರೋಡೆ 10 ರಿಂದ 12 ಕೋಟಿ ರೂ ಹಣ ಲೂಟಿ ಮಾಡಿ ಪರಾರಿ!

Coastal Times by Coastal Times
January 17, 2025
in ಕ್ರೈಮ್ ನ್ಯೂಸ್
ಉಳ್ಳಾಲ ಕೆಸಿ ರೋಡ್ ಶಾಖೆಯ ಕೋಟೆಕಾರು ಸಹಕಾರಿ ಬ್ಯಾಂಕಿಗೆ ಐದು ಮಂದಿ ಗನ್​ ತೋರಿಸಿ ಸಿನಿಮೀಯ ಶೈಲಿಯಲ್ಲಿ ದರೋಡೆ 10 ರಿಂದ 12 ಕೋಟಿ ರೂ ಹಣ ಲೂಟಿ ಮಾಡಿ ಪರಾರಿ!
102
VIEWS
WhatsappTelegramShare on FacebookShare on Twitter

ಉಳ್ಳಾಲ, ಜ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಡಹಗಲೇ ಐದು ಮಂದಿ ಆಗಂತುಕರ ತಂಡ ಫಿಯೆಟ್ ಕಾರಿನಲ್ಲಿ ಬಂದು ಬಂದೂಕು ತೋರಿಸಿ ಬ್ಯಾಂಕ್ ದರೋಡೆ ಮಾಡಿದೆ. ಉಳ್ಳಾಲ ತಾಲೂಕಿನ ಕೆ.ಸಿ.ರೋಡ್‌ ಶಾಕೆಯ  ಕೋಟೆಕಾರು ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಈ ದರೋಡೆ ನಡೆದಿದೆ. ಹಾಡಹಗಲೇ 5 ಮಂದಿ ಆಗಂತುಕರು ಬ್ಯಾಂಕ್‌ಗೆ ನುಗ್ಗಿ ಸಿನಿಮೀಯ ಶೈಲಿಯಲ್ಲಿ ಮಾರಕಾಸ್ತ್ರಗಳನ್ನು ತೋರಿಸಿ ಚಿನ್ನ ಒಡವೆ, ನಗದುಗಳೆಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ. ಚಿನ್ನ ಹಾಗೂ ನಗದು ಸೇರಿದಂತೆ ಬರೋಬ್ಬರಿ 10ರಿಂದ 12 ಕೋಟಿ ರೂ ಹಣ ಎಗರಿಸಿಕೊಂಡು ಹೋಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇನ್ನು ಇದೇ ಬ್ಯಾಂಕ್​ನಲ್ಲಿ ಈ ಹಿಂದೆಯೂ ಸಹ ಕಳ್ಳತನವಾಗಿತ್ತು.

ಪೊಲೀಸ್​ ಕಮಿಷನರ್​ ಹೇಳಿದ್ದೇನು?: ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು‌ ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್, “ಹಿಂದಿಯಲ್ಲಿ ಮಾತನಾಡುತ್ತಿದ್ದ ಆರೋಪಿಗಳು, ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಹೊಂದಿದ್ದ ಕಪಾಟನ್ನು ತೆರೆಸಿ, ದರೋಡೆ ಮಾಡಿದ್ದಾರೆ. ಕದ್ದ ವಸ್ತುಗಳ ಮೌಲ್ಯ ಸುಮಾರು 10 ರಿಂದ 12 ಕೋಟಿಗಳಷ್ಟಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಆದರೂ ವಿವರವಾದ ಮೌಲ್ಯಮಾಪನಗಳು ನಡೆಯುತ್ತಿವೆ” ಎಂದು ತಿಳಿಸಿದ್ದಾರೆ.

“ಅಪರಾಧಿಗಳು ಕಪ್ಪು ಫಿಯೆಟ್ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಕರಣದ ತನಿಖೆ ಮತ್ತು ಆರೋಪಿಗಳನ್ನು ಬಂಧಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಲಭ್ಯವಿರುವ ಸುಳಿವುಗಳು ಮತ್ತು ತಾಂತ್ರಿಕ ಕಣ್ಗಾವಲಿನ ಆಧಾರದ ಮೇಲೆ ಶಂಕಿತರನ್ನು ಪತ್ತೆಹಚ್ಚಲು ಪ್ರಯತ್ನಗಳನ್ನು ತೀವ್ರಗೊಳಿಸಲಾಗುತ್ತಿದೆ” ಎಂದು‌ ಮಾಹಿತಿ ನೀಡಿದ್ದಾರೆ.

ಹಿಂದಿ, ಕನ್ನಡ ಮಾತನಾಡುತ್ತಿದ್ದ ದರೋಡೆಕೋರರು: ಬ್ಯಾಂಕ್ ಸಿಬ್ಬಂದಿ ಬೊಬ್ಬೆ ಕೇಳಿ ಕೆಳಭಾಗದಲ್ಲಿದ್ದ ವಿದ್ಯಾರ್ಥಿಗಳು ಮೊದಲ ಮಹಡಿಯಲ್ಲಿರುವ ಬ್ಯಾಂಕಿನತ್ತ ದೌಡಾಯಿಸಿದ್ದರು. ದರೋಡೆಕೋರರು ಈ ವೇಳೆಯೂ ವಿದ್ಯಾರ್ಥಿಗಳಿಗೆ ವಾಪಸ್​ ಹೋಗುವಂತೆ ಬೆದರಿಸಿದ್ದಾರೆ. ವಿದ್ಯಾರ್ಥಿಗಳ ಜೊತೆ ಆಗಂತುಕರು ಕನ್ನಡದಲ್ಲಿ ಮಾತನಾಡಿದ್ದರೆ, ಬ್ಯಾಂಕ್ ಸಿಬ್ಬಂದಿ ಜೊತೆ ಹಿಂದಿ ಭಾಷೆಯಲ್ಲಿ ಸಂಭಾಷಣೆ ನಡೆಸಿದ್ದಾರೆ.

ಎಸಿಪಿ ಧನ್ಯ ನಾಯಕ್ ನೇತೃತ್ವದ ಪೊಲೀಸರ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸ್ಥಳಕ್ಕೆ ಸ್ಪೀಕರ್ ಖಾದರ್ ಭೇಟಿ ನೀಡಿ ಆರೋಪಿಗಳನ್ನ ಶೀಘ್ರ ಬಂಧಿಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ವಿಶೇಷ ಅಂದ್ರೆ, ಬ್ಯಾಂಕ್ ಒಳಗಿನ ಸಿಸಿಟಿವಿ ಕ್ಯಾಮೆರಾವನ್ನು ಸರ್ವಿಸ್ ಮಾಡುತ್ತಿದ್ದ ವೇಳೆಯೇ ಘಟನೆ ನಡೆದಿದೆ. ಹೊರಗಿನ ಕ್ಯಾಮೆರಾದಲ್ಲಿ ಆರೋಪಿಗಳು ಪಲಾಯನಗೈಯುತ್ತಿರುವ ದೃಶ್ಯ ಸೆರೆಯಾಗಿದೆ. ಹೀಗಾಗಿ ಬ್ಯಾಂಕ್ ಬಗ್ಗೆ ತಿಳಿದಿರುವ ಮಂದಿಯೇ ದರೋಡೆ ನಡೆಸಿರುವಂತೆ ಕಂಡುಬಂದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ರಾಜ್ಯದಲ್ಲಿ ಮಂಗಳೂರು ಸೇರಿ 6 ಕಡೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದ ಪ್ರಾದೇಶಿಕ ಕೇಂದ್ರ ಸ್ಥಾಪನೆ: ಕುಲಪತಿ ಎಚ್ ಕೆ.ರಮೇಶ್

Next Post

ಸುಳ್ಯ ; ಮಗನಿಗೆ ಗುರಿಯಿಟ್ಟ ಬಂದೂಕಿಗೆ ಪತ್ನಿ ಬಲಿ, ನೊಂದ ಪತಿ ವಿಷ ಕುಡಿದು ಆತ್ಮಹತ್ಯೆ !

Related Posts

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​
ಕ್ರೈಮ್ ನ್ಯೂಸ್

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
61
ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಹಣ ಡಬಲ್ ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 5-6 ತಿಂಗಳಾದರೂ ಹಣ ವಾಪಸ್‌ ಇಲ್ಲ
ಕ್ರೈಮ್ ನ್ಯೂಸ್

ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಹಣ ಡಬಲ್ ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 5-6 ತಿಂಗಳಾದರೂ ಹಣ ವಾಪಸ್‌ ಇಲ್ಲ

June 10, 2026
757
Next Post
ಸುಳ್ಯ ; ಮಗನಿಗೆ ಗುರಿಯಿಟ್ಟ ಬಂದೂಕಿಗೆ ಪತ್ನಿ ಬಲಿ, ನೊಂದ ಪತಿ ವಿಷ ಕುಡಿದು ಆತ್ಮಹತ್ಯೆ !

ಸುಳ್ಯ ; ಮಗನಿಗೆ ಗುರಿಯಿಟ್ಟ ಬಂದೂಕಿಗೆ ಪತ್ನಿ ಬಲಿ, ನೊಂದ ಪತಿ ವಿಷ ಕುಡಿದು ಆತ್ಮಹತ್ಯೆ !

Discussion about this post

Recent News

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
61
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d