• About us
  • Contact us
  • Disclaimer
Friday, April 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಿರಾಡಿ ಹಾಗೂ ಅಡ್ಡಹೊಳೆ ಸರ್ವೀಸ್ ರಸ್ತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ; ಎನ್ ಹೆಚ್ ಎ ಯೋಜನಾ ನಿರ್ದೇಶಕರಿಂದ ಬೇಡಿಕೆ ಈಡೇರಿಕೆ ಭರವಸೆ

Coastal Times by Coastal Times
March 17, 2023
in ಕರಾವಳಿ
ಶಿರಾಡಿ ಹಾಗೂ ಅಡ್ಡಹೊಳೆ ಸರ್ವೀಸ್ ರಸ್ತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ; ಎನ್ ಹೆಚ್ ಎ ಯೋಜನಾ ನಿರ್ದೇಶಕರಿಂದ ಬೇಡಿಕೆ ಈಡೇರಿಕೆ ಭರವಸೆ
110
VIEWS
WhatsappTelegramShare on FacebookShare on Twitter

ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಶಿರಾಡಿ ಹಾಗೂ ಅಡ್ಡಹೊಳೆ ಪೇಟೆಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ, ಹೆದ್ದಾರಿಯ ಹಲವು ಕಡೆಗಳಲ್ಲಿ ತಡೆಗೋಡೆ ರಚನೆ, ಸಂಪರ್ಕ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾ.16ರಂದು ಬೆಳಿಗ್ಗೆ ಗ್ರಾಮಸ್ಥರು ಶಿರಾಡಿ ಪೇಟೆಯಲ್ಲಿ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇ ಗೌಡರವರು ಬಹುತೇಕ ಬೇಡಿಕೆಗೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ಹಿಂತೆಗೆದುಕೊಂಡರು.

ಬೆಳಿಗ್ಗೆ ಶಿರಾಡಿ ಪೇಟೆಯಲ್ಲಿ ಜನಾಗ್ರಹ ಸಭೆ ನಡೆಸಿದ ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳು ಬಳಿಕ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಸ್ಥಳದಲ್ಲಿದ್ದ ಉಪ್ಪಿನಂಗಡಿ ಎಸ್.ಐ.ರಾಜೇಶ್ ಕೆ.ವಿ., ರಾಷ್ಟ್ರೀಯ ಹೆದ್ದಾರಿ ಭೂ ಸ್ವಾಧೀನಾಧಿಕಾರಿ ಮಂಜುನಾಥ್ ಹಾಗೂ ಇತರೇ ಅಧಿಕಾರಿಗಳು ರಸ್ತೆ ತಡೆ ನಡೆಸಲು ಮುಂದಾದ ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳನ್ನು ತಡೆದು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರೂ ಬರುತ್ತಿದ್ದು ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ ಎಂದು ಹೇಳಿ ಮನವೊಲಿಸಿದರು. ಈ ವೇಳೆ ಗ್ರಾಮಸ್ಥರು ಘೋಷಣೆ ಕೂಗಲಾರಂಭಿಸಿದರು.

ಮಧ್ಯಾಹ್ನ ಸುಮಾರು 12.30ರ ವೇಳೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇ ಗೌಡರವರು ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರ ಮನವಿ ಸ್ವೀಕರಿಸಿ ಮಾತನಾಡಿ, ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಮೊದಲೇ ಅಂದಾಜುಪಟ್ಟಿ ಮಾಡಲಾಗಿದ್ದು ಅದನ್ನು ಈಗ ಬದಲಾವಣೆ ಮಾಡಲು ಸಾಧ್ಯವಿಲ್ಲ. ಸರಕಾರದಿಂದ ದೊರೆತ ಅನುಮೋದನೆಯಾದಂತೆ ರಸ್ತೆ ನಿರ್ಮಾಣ ಕೆಲಸ ಆಗುತ್ತಿದೆ. ಅಲ್ಲದೆ ಸದ್ರಿ ರಸ್ತೆ ಪಶ್ಚಿಮಘಾಟ್‌ನಲ್ಲಿ ಹಾದುಹೋಗುತ್ತಿದೆ. ಇಲ್ಲಿ ರಸ್ತೆಗೆ 30 ಮೀ. ಜಾಗ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಅದರೊಳಗೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಬೇಕಾಗಿದೆ. ಆದರೂ ಗ್ರಾಮಸ್ಥರ ಬೇಡಿಕೆಯಂತೆ ಸಂಪರ್ಕ ರಸ್ತೆ ಸೇರಿದಂತೆ ಸಣ್ಣಪುಟ್ಟ ಕೆಲಸ ಮಾಡಿಕೊಡಲು ಬದ್ಧರಾಗಿದ್ದೇವೆ ಎಂದರು. ಜನರ ಬೇಡಿಕೆಯಂತೆ ಶಿರಾಡಿ ಪೇಟೆಯ ಎರಡೂ ಬದಿ ಸರ್ವೀಸ್ ರಸ್ತೆ ಸಾಧ್ಯವಿಲ್ಲ. ಆಸ್ಪತ್ರೆ, ಚರ್ಚ್ ಸಂಪರ್ಕಿಸುವ ಬದಿಯಲ್ಲಿ ಸರ್ವೀಸ್ ರಸ್ತೆ ಮಾಡಿಕೊಡುತ್ತೇವೆ. ಇದಕ್ಕೆ ಬೇಕಾದ ಜಾಗ ಸ್ಥಳೀಯರು ಬಿಟ್ಟುಕೊಡಬೇಕೆಂದು ಹೇಳಿದರು.

ಉದನೆ ಸೈಂಟ್ ಆಂಟನೀಸ್ ಪ್ರೌಢಶಾಲೆಯ ಆಟದ ಮೈದಾನದ ಮುಂದೆ ಶಾಲೆಯವರ ಬೇಡಿಕೆಯಂತೆ ತಡೆಗೋಡೆ ನಿರ್ಮಿಸುವುದಾಗಿಯೂ ಅವರು ಹೇಳಿದರು. ಬಳಿಕ ಯೋಜನಾ ನಿರ್ದೇಶಕ ಲಿಂಗೇ ಗೌಡರವರು ಶಿರಾಡಿಯಲ್ಲಿ ಸರ್ವೀಸ್ ರಸ್ತೆಗೆ ಅವಶ್ಯಕವಿರುವ ಜಾಗದ ಪರಿಶೀಲನೆಯೂ ನಡೆಸಿದರು. ನಂತರ ಅವರು ಶಿರಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪರ್ಕಿಸುವ ರಸ್ತೆ, ಶಿರಾಡಿ ಚರ್ಚ್, ಅಡ್ಡಹೊಳೆ ಅಯ್ಯಪ್ಪ ದೇವಸ್ಥಾನ, ಅಡ್ಡಹೊಳೆ ಚರ್ಚ್‌ಗೆ ಸಂಪರ್ಕ ಕಲ್ಪಿಸುವ ಸಂಪರ್ಕ ರಸ್ತೆಗಳ ಪರಿಶೀಲನೆ ನಡೆಸಿ ಇಲಾಖೆಯ ಇಂಜಿನಿಯರ್‌ಗಳಿಗೆ ಸೂಕ್ತ ನಿರ್ದೇಶನ ನೀಡಿದರು. ಈ ವೇಳೆ ಜನಪ್ರತಿನಿಧಿಗಳು, ಗ್ರಾಮಸ್ಥರು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

ಜನಾಗ್ರಹ ಸಭೆ: ಯೋಜನಾ ನಿರ್ದೇಶಕ ಲಿಂಗೇ ಗೌಡರ ಭೇಟಿಗೂ ಮೊದಲು ನಡೆದ ಜನಾಗ್ರಹ ಸಭೆಯಲ್ಲಿ ಉದನೆ ಸೈಂಟ್ ಆಂಟನೀಸ್ ಪ್ರೌಢಶಾಲೆಯ ಸಂಚಾಲಕರಾದ ರೆ.ಫಾ.ಹನಿ ಜೇಕಬ್, ನಿವೃತ್ತ ಮುಖ್ಯಶಿಕ್ಷಕ ಚಾಕೋ ವರ್ಗೀಸ್, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್‌ಕುಮಾರ್, ಜಿ.ಪಂ.ಮಾಜಿ ಸದಸ್ಯರಾದ ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ, ತಾ.ಪಂ.ಮಾಜಿ ಸದಸ್ಯೆ ಆಶಾಲಕ್ಷ್ಮಣ್, ಶಿರಾಡಿ ಗ್ರಾ.ಪಂ.ಅಧ್ಯಕ್ಷೆ ವಿನಿತಾತಂಗಚ್ಚನ್, ಸದಸ್ಯ ಎಂ.ಕೆ.ಪೌಲೋಸ್‌ರವರು ಮಾತನಾಡಿದರು. ಶಿರಾಡಿ ಸಂತಸೆಬಾಸ್ಟಿನ್ ಚರ್ಚ್‌ನ ವಿಕಾರ್ ಫಾ.ಸನೀಶ್, ರೆ.ಫಾ.ಜೈಸನ್, ರೆ.ಫಾ.ಜೋಸೆಫ್ ಅಡ್ಡಹೊಳೆ, ಕೆಪಿಸಿಸಿ ಸುಳ್ಯ ಬ್ಲಾಕ್ ಉಸ್ತುವಾರಿ ನಂದಕುಮಾರ್, ಕೆಪಿಸಿಸಿ ಸದಸ್ಯ ಕೆ.ಪಿ.ತೋಮಸ್, ಬಿಳಿನೆಲೆ ಗ್ರಾ.ಪಂ.ಅಧ್ಯಕ್ಷ ಶಿವಶಂಕರ್, ಶಿರಾಡಿ ಗ್ರಾ.ಪಂ.ಉಪಾಧ್ಯಕ್ಷ ಕಾರ್ತಿಕೇಯನ್, ಸದಸ್ಯ ಸಣ್ಣಿಜಾನ್, ಗೋಳಿತ್ತೊಟ್ಟು ಗ್ರಾ.ಪಂ.ಮಾಜಿ ಅಧ್ಯಕ್ಷ ಪೂವಪ್ಪ ಕರ್ಕೇರ, ನೆಲ್ಯಾಡಿ ಗ್ರಾ.ಪಂ.ಮಾಜಿ ಸದಸ್ಯ ಕೆ.ಪಿ.ಅಬ್ರಹಾಂ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು. ಉಪ್ಪಿನಂಗಡಿ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕಳೆದು ಹೋದ ಮೊಬೈಲ್‌ ಪತ್ತೆಗೆ ಸಿಇಐಆರ್‌ ಪೋರ್ಟಲ್‌ : ಯಾವ ಮೂಲೆಯಲ್ಲಿ ಮೊಬೈಲ್ ಬಚ್ಚಿಟ್ಟರೂ ಎತ್ತಿ ತೋರಿಸುತ್ತೆ ಹೊಸ ತಂತ್ರಜ್ಞಾನ

Next Post

ಊರ್ಫಿ ತಂಗಿ ಎಂದು ನಿಯಾ ಶರ್ಮಾಗೆ ಟ್ರೋಲ್ ಮಾಡಿದ ನೆಟ್ಟಿಗರು

Related Posts

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ
ಕರಾವಳಿ

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

April 10, 2026
8
ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ
ಕರಾವಳಿ

ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

April 9, 2026
40
Next Post
ಊರ್ಫಿ ತಂಗಿ ಎಂದು ನಿಯಾ ಶರ್ಮಾಗೆ ಟ್ರೋಲ್ ಮಾಡಿದ ನೆಟ್ಟಿಗರು

ಊರ್ಫಿ ತಂಗಿ ಎಂದು ನಿಯಾ ಶರ್ಮಾಗೆ ಟ್ರೋಲ್ ಮಾಡಿದ ನೆಟ್ಟಿಗರು

Discussion about this post

Recent News

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

April 10, 2026
8
ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

April 9, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

April 10, 2026
ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

April 9, 2026
ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ ಮುಹೂರ್ತ ಮತ್ತು ಲಾಂಛನ ಬಿಡುಗಡೆ

ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ ಮುಹೂರ್ತ ಮತ್ತು ಲಾಂಛನ ಬಿಡುಗಡೆ

April 9, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d