• About us
  • Contact us
  • Disclaimer
Monday, March 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು : ಯುವಕನನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿ ವಿಡಿಯೋ ಮಾಡಿದ್ದ ಪ್ರಕರಣ: 19 ಮಂದಿ ಆರೋಪಿಗಳು ಖುಲಾಸೆ

Coastal Times by Coastal Times
March 17, 2025
in ಕ್ರೈಮ್ ನ್ಯೂಸ್
ಮಂಗಳೂರು : ಯುವಕನನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿ ವಿಡಿಯೋ ಮಾಡಿದ್ದ ಪ್ರಕರಣ: 19 ಮಂದಿ ಆರೋಪಿಗಳು ಖುಲಾಸೆ
17
VIEWS
WhatsappTelegramShare on FacebookShare on Twitter

ಮಂಗಳೂರು : ಯುವತಿಯೊಂದಿಗಿದ್ದ ಎಂದು ಯುವಕನನ್ನು ಕಾರಿನಿಂದೆಳೆದು ಹಲ್ಲೆಗೈದು, ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ವಿಡಿಯೋ ಮಾಡಿದ್ದ ಪ್ರಕರಣ ಸಂಬಂಧ 19 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.

ಈ ಬಗ್ಗೆ ವಕೀಲ ಅರುಣ್ ಬಂಗೇರ ವಿವರಿಸಿದ್ದು, ಅತ್ತಾವರದ ಖಾಸಗಿ ಮಳಿಗೆಯಲ್ಲಿ ಕೆಲಸಕ್ಕಿದ್ದ ಯುವತಿಯೊಂದಿಗೆ ಮಳಿಗೆಯ ವ್ಯವಸ್ಥಾಪಕ ಕಾರಿನಲ್ಲಿ ಹೋಗುತ್ತಿದ್ದ. ಆತನ ಕಾರನ್ನು ಅತ್ತಾವರ ನಂದಿಗುಡ್ಡೆ ಬಳಿ ಅಡ್ಡಗಟ್ಟಿದ್ದ ಹಿಂದೂ ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರು ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದಾನೆಂದು ಆರೋಪಿಸಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. 2015ರ ಆಗಸ್ಟ್ 28ರಂದು ಘಟನೆ ನಡೆದಿತ್ತು.

ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ : ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ಸಹೋದ್ಯೋಗಿ ಯುವತಿ 2 ಸಾವಿರ ಹಣ ಬೇಕೆಂದು ಕೇಳಿದ್ದಕ್ಕೆ ವ್ಯವಸ್ಥಾಪಕ ಅತ್ತಾವರ ಕೆಎಂಸಿ ಆಸ್ಪತ್ರೆಯ ಬಳಿ ತೆರಳಿ ಹಣ ಕೊಡಲು ಹೋಗಿದ್ದ. ಈ ವೇಳೆ ನಾಲ್ಕು ಬೈಕ್‌ಗಳಲ್ಲಿ ಬಂದ ಯುವಕರ ತಂಡ ಕಾರಿಗೆ ಅಡ್ಡಲಾಗಿ ಬೈಕ್ ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ಆತನನ್ನು ಕಾರಿನಿಂದ ಎಳೆದು ಹಾಕಿ 10ರಿಂದ 12 ಮಂದಿ ಆರೋಪಿಗಳು ಸೇರಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ. ಬಳಿಕ ಆತನ ಬಳಿಯಿದ್ದ ಎಟಿಎಂ ಕಾರ್ಡ್, ಎರಡು ಸಾವಿರ ನಗದು, ಮೊಬೈಲ್ ಕಿತ್ತುಕೊಂಡು ಹೋಗಿರುವುದಾಗಿ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

33 ಸಾಕ್ಷಿ ಹಾಜರುಪಡಿಸಿದರೂ ಸಾಬೀತಾಗದ ಆರೋಪ : ಬಳಿಕ ತನಿಖೆ ನಡೆಸಿದ ಪೊಲೀಸರು 19 ಮಂದಿ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ 78 ದಾಖಲೆ, 33 ಸಾಕ್ಷಿಗಳನ್ನು ಹಾಜರುಪಡಿಸಿದರೂ ಪೊಲೀಸರಿಗೆ ಆರೋಪ ಸಾಬೀತುಪಡಿಸಲು ಸಾಧ್ಯವಾಗಿಲ್ಲ. ಹೀಗಾಗಿ, 19 ಜನ ಆರೋಪಿಗಳನ್ನು ಖುಲಾಸೆಗೊಳಿಸಿ ಮಾರ್ಚ್​​ 15ರಂದು ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಆದೇಶಿಸಿದ್ದಾರೆ. ಆರೋಪಿಗಳ ಪರ ವಕೀಲರಾದ ಬಿ.ಅರುಣ ಬಂಗೇರ, ಮೋಹನರಾಜ್ ಕೆ.ಆ‌ರ್., ಆಶಾ ನಾಯ್ಕ ಸುನೀಲ್ ಮತ್ತು ರಿಹಾನ ಪರ್ವೀನ್ ವಾದ ಮಂಡಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಲಕ್ಕಿ ಭಾಸ್ಕರ್ ಸಿನಿಮಾ ಮಾದರಿಯಲ್ಲಿ ವೃದ್ಧೆಗೆ 50 ಲಕ್ಷ ರೂ. ವಂಚಿಸಿದ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಸೇರಿದಂತೆ ನಾಲ್ವರು ಅರೆಸ್ಟ್​

Next Post

ಅನ್ಯಧರ್ಮದ ಹೆಣ್ಮಕ್ಕಳನ್ನು ಮದುವೆಯಾಗಿ ಎಂದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎಫ್ಐಆರ್

Related Posts

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು
ಕ್ರೈಮ್ ನ್ಯೂಸ್

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
57
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
51
Next Post
ಅನ್ಯಧರ್ಮದ ಹೆಣ್ಮಕ್ಕಳನ್ನು ಮದುವೆಯಾಗಿ ಎಂದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎಫ್ಐಆರ್

ಅನ್ಯಧರ್ಮದ ಹೆಣ್ಮಕ್ಕಳನ್ನು ಮದುವೆಯಾಗಿ ಎಂದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎಫ್ಐಆರ್

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
69
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d