• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರು: ಭಾವೈಕ್ಯದ ಸಂದೇಶ ಸಾರಿದ ಐತಿಹಾಸಿಕ ಕರಗ : ಹಜ್ರತ್ ತವಕ್ಕಲ್‌ ಮಸ್ತಾನ್‌ ದರ್ಗಾಕ್ಕೂ ಭೇಟಿ

Coastal Times by Coastal Times
April 17, 2022
in ರಾಜ್ಯ
ಬೆಂಗಳೂರು: ಭಾವೈಕ್ಯದ ಸಂದೇಶ ಸಾರಿದ ಐತಿಹಾಸಿಕ ಕರಗ : ಹಜ್ರತ್ ತವಕ್ಕಲ್‌ ಮಸ್ತಾನ್‌ ದರ್ಗಾಕ್ಕೂ ಭೇಟಿ
30
VIEWS
WhatsappTelegramShare on FacebookShare on Twitter

ಬೆಂಗಳೂರು: ಐತಿಹಾಸಿಕ ಧರ್ಮರಾಯ ಸ್ವಾಮಿ ಕರಗ ಉತ್ಸವ ಭಾನುವಾರ ನಸುಕಿನ ಜಾವ ವಿಜೃಂಭಣೆಯಿಂದ ನಡೆಯಿತು. ತವಕ್ಕಲ್‌ ಮಸ್ತಾನ್‌ ದರ್ಗಾಕ್ಕೆ ಭೇಟಿ ನೀಡುವ ಸಂಪ್ರದಾಯವನ್ನು ಪಾಲಿಸುವ ಮೂಲಕ ಈ ಹಬ್ಬವು ‘ನಾಡಿನ ಭಾವೈಕ್ಯಕ್ಕೆ ಧಕ್ಕೆ ತರುವ ತಂತ್ರಗಳು ಫಲಿಸುವುದಿಲ್ಲ’ ಎಂಬ ಸ್ಪಷ್ಟ ಸಂದೇಶವನ್ನು ಸಾರಿತು. ಕೊರೊನಾ ಕಾರಣದಿಂದ ಕಳೆದ ಎರಡು ವರ್ಷ ಕರಗವನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಮತ್ತೆ  ಕಳೆಗಟ್ಟಿದ ಉತ್ಸವ ಹಳೆ ವೈಭವಕ್ಕೆ ಮರಳಿತು.

ಪರಂಪರಾನುಗತವಾಗಿ ಭೇಟಿ ನೀಡುತ್ತಿದ್ದ ಪ್ರದೇಶಗಳಿಲ್ಲೆಲ್ಲ ಕರಗ ಸಾಗಿತು. ಈ ಬಾರಿಯೂ ಚಿಕ್ಕಪೇಟೆಯ ಅಕ್ಕಿಪೇಟೆ ಮುಖ್ಯರಸ್ತೆಯ ಹಜ್ರತ್ ತವಕ್ಕಲ್ ಶಾ ಮಸ್ತಾನ್ ಸೋಹರ್ವಾರ್ಡಿ ರಹಮತುಲ್ಲಾ ದರ್ಗಾಕ್ಕೆ ಬೆಳಗಿನ ಜಾವ ಆರು ಗಂಟೆ ಸುಮಾರಿಗೆ ಕರಗ ಪ್ರವೇಶಿಸುವ ಮೂಲಕ ಈ ಪರಂಪರೆಗೆ ತಗಾದೆ ತೆಗೆದ ಟೀಕಾಕಾರರಿಗೆ ಉತ್ತರ ನೀಡಿತು. ದರ್ಗಾದಲ್ಲಿ ಮುಸ್ಲಿಂ ಸಮುದಾಯದವರು ಸಾಂಪ್ರದಾಯಿಕ ಸ್ವಾಗತ ನೀಡಿದರು. ಭಕ್ತಾದಿಗಳಿಗೆ ಸಿಹಿ ತಿಂಡಿ, ನೀರು, ಹಣ್ಣುಗಳನ್ನು ನೀಡಿ ಸ್ವಾಗತಿಸಿದರು.

ಕರಗ ನೋಡಲು ದರ್ಗಾ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಮುಸ್ಲಿಮರು ಜಮಾಯಿಸಿದ್ದರು. ದರ್ಗಾದಲ್ಲಿ ಸೇರಿದ್ದವರು ‘ಗೋವಿಂದಾ ಗೋವಿಂದಾ…’ ಎಂದು ಕೂಗಿ ಕರಗದ ಸಂಭ್ರಮ ಹೆಚ್ಚಿಸಿದರು.

‘ಹಿಂದೂ ಮುಸ್ಲಿಮರ ಭಾವೈಕ್ಯತೆಯ ಪ್ರತೀಕ ಇದು. ಬೆಂಗಳೂರು ಕರಗ ಕರ್ನಾಟಕದ ದೊಡ್ಡ ಹಬ್ಬ. ಶಾಂತಿಯುತವಾಗಿ ಸಹೋದರ ಭಾವನೆಯಿಂದ ಎಲ್ಲ ಕಾರ್ಯಗಳು ನಡೆದಿವೆ. ಈ ಬಾರಿ ರಂಜಾನ್‌ ಮತ್ತು ಕರಗ ಒಟ್ಟಿಗೆ ಬಂದಿವೆ. ಹಿಂದೂ–ಮುಸ್ಲಿಮರು ಒಗ್ಗಟ್ಟಿನಿಂದ ಇರಬೇಕು. ಈ ಹಬ್ಬವು ಕೋಮು ಸಾಮರಸ್ಯದ ಸಂಕೇತ. ಸಂಪ್ರದಾಯದ ಪ್ರಕಾರ ಎಲ್ಲವೂ ಒಳ್ಳೆಯ ರೀತಿಯಲ್ಲಿ ನಡೆದಿದೆ. ದರ್ಗಾ ಸುತ್ತಲೂ ಮೂರು ಸುತ್ತು ಕರಗ ಪ್ರದಕ್ಷಿಣೆ ಹಾಕಿತು. ಕೆಲವರು ಕರಗ ಬರುವುದಿಲ್ಲ ಎಂದು ಹೇಳುತ್ತಿದ್ದರು. ಅದೆಲ್ಲವೂ ರಾಜಕೀಯ ಅಷ್ಟೇ’ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ದರ್ಗಾ ಕಾರ್ಯದರ್ಶಿ ಮಹಮ್ಮದ್‌ ಇನಾಯತ್‌ ಉಲ್ಲಾ ಹೇಳಿದರು.

ಕಬ್ಬನ್‍ಪೇಟೆ, ಆಂಜನೇಯ ಸ್ವಾಮಿ ದೇವಸ್ಥಾನ, ಗಣೇಶ ದೇವಸ್ಥಾನ, ಕಾಟನ್ ಪೇಟೆ,  ಬಳೇ ಪೇಟೆ ಸರ್ಕಲ್, ಅಣ್ಣಮ್ಮ ದೇವಸ್ಥಾನ, ಕುಂಬಾರ ಪೇಟೆ, ಚೌಡೇಶ್ವರಿ ದೇವಸ್ಥಾನ, ತಿಗಳರ ಪೇಟೆ ಮೂಲಕ ದೇವಸ್ಥಾನಕ್ಕೆ ದ್ರೌಪದಿ ಕರಗ ಹಿಂತಿರುಗಿತು. ಕರಗ ಸಾಗುವ ಮಾರ್ಗದಲ್ಲಿ  ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಹಾಸನ: ಜೆಡಿಎಸ್‌ಗೆ ಬಿಜೆಪಿ ಬಗ್ಗೆ ಪ್ರೀತಿ‌ಯಿದ್ದರೆ ನೇರವಾಗಿ ಬೆಂಬಲಿಸಲಿ: ಸಿದ್ದರಾಮಯ್ಯ

Next Post

ಪುತ್ತೂರು : ಆಟೋ ಬಳಿಕ ಮಲ್ಲಿಗೆ ವ್ಯಾಪಾರಕ್ಕಿಳಿದ ಹಿಂದೂ ಸಂಘಟನೆಗಳು

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ಪುತ್ತೂರು : ಆಟೋ ಬಳಿಕ ಮಲ್ಲಿಗೆ ವ್ಯಾಪಾರಕ್ಕಿಳಿದ ಹಿಂದೂ ಸಂಘಟನೆಗಳು

ಪುತ್ತೂರು : ಆಟೋ ಬಳಿಕ ಮಲ್ಲಿಗೆ ವ್ಯಾಪಾರಕ್ಕಿಳಿದ ಹಿಂದೂ ಸಂಘಟನೆಗಳು

Discussion about this post

Recent News

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
56
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
38
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
ಈ ವಿಶ್ವ  ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

April 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d