• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಈಶ್ವರಪ್ಪ ಬಂಧಿಸಿ, ನ್ಯಾಯಾಂಗ ತನಿಖೆ ನಡೆಸಿ: ಕಾಂಗ್ರೆಸ್ ಜಿಲ್ಲಾ ಘಟಕ ಆಗ್ರಹ

Coastal Times by Coastal Times
April 17, 2022
in ಕರಾವಳಿ, ರಾಜಕೀಯ
ಮಂಗಳೂರು: ಈಶ್ವರಪ್ಪ ಬಂಧಿಸಿ, ನ್ಯಾಯಾಂಗ ತನಿಖೆ ನಡೆಸಿ: ಕಾಂಗ್ರೆಸ್ ಜಿಲ್ಲಾ ಘಟಕ ಆಗ್ರಹ
34
VIEWS
WhatsappTelegramShare on FacebookShare on Twitter

ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೆ.ಎಸ್. ಈಶ್ವರಪ್ಪ ಕೊನೆಗೂ ತಪ್ಪನ್ನು ಒಪ್ಪಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಅವರನ್ನು ಬಂಧಿಸಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಒತ್ತಾಯಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಯಾವ ರೀತಿಯಲ್ಲಿ ಆಡಳಿತ ನಡೆಸುತ್ತಿದೆ ಎಂಬುದನ್ನು ದೇಶ, ರಾಜ್ಯದ ಜನರು ಕಂಡಿದ್ದಾರೆ.  ಪ್ರಧಾನಿ ಮೋದಿ ಅವರು ಸಿದ್ದರಾಮಯ್ಯ ಸರ್ಕಾರವನ್ನು 10 ಪರ್ಸೆಂಟ್ ಸರ್ಕಾರ ಎಂದು ಆರೋಪಿಸಿದ್ದರು. ಆದರೆ ತಮ್ಮದೇ ಪಕ್ಷದ ಸರ್ಕಾರದ ಸಚಿವರ ವಿರುದ್ಧ ಗುತ್ತಿಗೆದಾರ ಸಂಘದ ಅಧ್ಯಕ್ಷರೇ ಒಂದು ವರ್ಷದ ಹಿಂದೆ 40 ಪರ್ಸೆಂಟ್ ಲಂಚದ ಆರೋಪ ಮಾಡಿದ್ದರೂ ಪ್ರಧಾನಿ ಮೌನ ವಹಿಸಿದ್ದರು. ಇದರ ಪರಿಣಾಮವಾಗಿ ಗುತ್ತಿಗೆದಾರ ಸಂತೋಷ್ ಪಾಟೀಲ ಪ್ರಾಣಕಳೆದುಕೊಳ್ಳುವ ಪರಿಸ್ಥಿತಿ ಬಂತು ಎಂದು ಆರೋಪಿಸಿದರು.

ಭ್ರಷ್ಟಾಚಾರ, ಲಂಚ ಆರೋಪದ ಬಗ್ಗೆ ವಿಧಾನಸಭೆ, ವಿಧಾನ ಪರಿಷತ್‍ನಲ್ಲಿ ಚರ್ಚಿಸಲು ಕಾಂಗ್ರೆಸ್‌ ಪಕ್ಷಕ್ಕೆ ಅವಕಾಶ ಸಿಗಲಿಲ್ಲ. ಹೀಗಾಗಿ, ಬೀದಿಗಿಳಿದು ಕಾಂಗ್ರೆಸ್ ಪ್ರತಿಭಟಿಸುತ್ತಿದೆ. ತಪ್ಪು ಮಾಡಿದ್ದು ಒಪ್ಪಿಕೊಂಡು ಈಶ್ವರಪ್ಪ ರಾಜೀನಾಮೆ ಕೊಟ್ಟಿದ್ದಾರೆ. ಈ ಕುರಿತು ಸರ್ಕಾರದ ವಿರುದ್ಧವೇ ತನಿಖೆ ನಡೆಸುವಂತೆ ಕೋರಿ ರಾಜ್ಯಪಾಲರಿಗೆ ಕಾಂಗ್ರೆಸ್ ಮನವಿ ಸಲ್ಲಿಸಿದೆ. ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಮೃತ ಗುತ್ತಿಗೆದಾರರ ಕುಟುಂಬಕ್ಕೆ ₹ 1 ಕೋಟಿ ಪರಿಹಾರ ಒದಗಿಸಬೇಕು ಎಂದು ಡಾ. ಪರಮೇಶ್ವರ್ ಆಗ್ರಹಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ.ಆರ್. ಲೋಬೊ,  ಈಶ್ವರಪ್ಪ ಅವರ ಪ್ರತಿಕೃತಿಯನ್ನು ದಹಿಸಲಾಯಿತು. ಕಾರ್ಯಕರ್ತರೊಬ್ಬರು ಈಶ್ವರಪ್ಪ ಮುಖವಾಡ ಹಾಕಿ ಅಣುಕು ಪ್ರದರ್ಶನ ನೀಡಿದರು. ಮಿನಿ ವಿಧಾನ ಸೌಧದ ಎದುರು ಕಾರ್ಯಕರ್ತರು ಕೆಲ ನಿಮಿಷಗಳ ಕಾಲ ರಸ್ತೆ ತಡೆ ಮಾಡಿ ಬಿಜೆಪಿ ಸರ್ಕಾರ ಹಾಗೂ ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗಿದರು.

ಮುಖಂಡರಾದ ಮಂಜುನಾಥ ಭಂಡಾರಿ, ಶಕುಂತಳಾ ಶೆಟ್ಟಿ, ಮಿಥುನ್ ರೈ, ಲುಕ್ಮಾನ್ ಬಂಟ್ವಾಳ, ಪಿ.ವಿ. ಮೋಹನ್, ಶಾಲೆಟ್ ಪಿಂಟೊ, ಅಪ್ಪಿ, ಶಾಹುಲ್ ಹಮೀದ್, ಟಿ.ಕೆ. ಸುಧೀರ್, ನಝೀರ್ ಬಜಾಲ್, ಮುಹಮ್ಮದ್ ಮೋನು, ವಿಶ್ವಾಸ್ ಕುಮಾರ್ ದಾಸ್ ಇದ್ದರು.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ , 7 ತಂಡಗಳನ್ನು ರಾಜ್ಯದ ವಿವಿಧ ಭಾಗಗಳಿಗೆ ಕಳುಹಿಸಲಾಗಿದೆ’ – ಎಡಿಜಿಪಿ

Next Post

ಮಂಗಳೂರು: ಅಪಘಾತದಲ್ಲಿ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಮೃತ್ಯು; ದುಃಖ ತಾಳಲಾರದೆ ಮಗು ಕೊಂದು ಪತ್ನಿ ಆತ್ಮಹತ್ಯೆ

Related Posts

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ
ಕರಾವಳಿ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಕರಾವಳಿ

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

June 27, 2025
92
Next Post
ಮಂಗಳೂರು: ಅಪಘಾತದಲ್ಲಿ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಮೃತ್ಯು; ದುಃಖ ತಾಳಲಾರದೆ ಮಗು ಕೊಂದು ಪತ್ನಿ ಆತ್ಮಹತ್ಯೆ

ಮಂಗಳೂರು: ಅಪಘಾತದಲ್ಲಿ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಮೃತ್ಯು; ದುಃಖ ತಾಳಲಾರದೆ ಮಗು ಕೊಂದು ಪತ್ನಿ ಆತ್ಮಹತ್ಯೆ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d