ಮಂಗಳೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಗಂಬಿಲದ ಮನೆಯೊಂದರಲ್ಲಿ ಗುರುವಾರ ಸಂಜೆ ( ಜೂ.16 ರಂದು) ನಡೆದಿದೆ. ಹರ್ದೀಪ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ನಗರದ ಖಾಸಗಿ ಕಾಲೇಜಿನಲ್ಲಿ 2 ನೇ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದ. ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಯಾಗಿದ್ದ ಈತ ಗುರುವಾರ ಬಗಂಬಿಲದ ಮನೆಗೆ ಬಂದಿದ್ದು, ಮನೆಯಲ್ಲಿ ತಾಯಿ ಮತ್ತು ಮಗ ವಾಸವಾಗಿದ್ದರು. ತಾಯಿಗೆ ತುಂಬಾ ಸಾಲ ಇರುವ ಬಗ್ಗೆ ಅರಿತ ವಿದ್ಯಾರ್ಥಿ ಹರ್ಷದೀಪ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.