ನವದೆಹಲಿ, ಜುಲೈ 17; ಕೇಂದ್ರದ ಮಾಜಿ ಸಚಿವೆ, ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ. ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಭಾನುವಾರ ದೆಹಲಿಯಲ್ಲಿ ವಿರೋಧ ಪಕ್ಷಗಳ ಸಭೆ ನಡೆಯಿತು. ಸಭೆಯ ಬಳಿಕ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮಾರ್ಗರೇಟ್ ಆಳ್ವಾ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು. ಶನಿವಾರ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಗದೀಪ್ ಧನ್ಖರ್ ಹೆಸರು ಘೋಷಣೆ ಮಾಡಲಾಗಿತ್ತು. ವಿರೋಧ ಪಕ್ಷಗಳು ದೆಹಲಿಯಲ್ಲಿ ಭಾನುವಾರ ಸಭೆ ನಡೆಸಿ, ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿವೆ. ಕಾಂಗ್ರಸ್‌ನ ಹಿರಿಯ ನಾಯಕಿ ಮಾರ್ಗರೇಟ್ ಆಳ್ವ ಕೇಂದ್ರದ ಸಚಿವರಾಗಿ ಕೆಲಸ ಮಾಡಿದ್ದಾರೆ. ರಾಜಸ್ಥಾನದ ರಾಜ್ಯಪಾಲರಾಗಿಯೂ ಅವರು ಕಾರ್ಯ ನಿರ್ವಹಣೆ ಮಾಡಿದ್ದಾರೆ. ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿರುವ ವಿರೋಧ ಪಕ್ಷಗಳು ಮಾರ್ಗರೇಟ್ ಆಳ್ವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿವೆ. ಉಪ ರಾಷ್ಟ್ರಪತಿಯಾಗಿರುವ ವೆಂಕಯ್ಯ ನಾಯ್ಡು ಅವಧಿ ಆಗಸ್ಟ್ 10ರಂದು ಅಂತ್ಯಗೊಳ್ಳಲಿದೆ. ಅದಕ್ಕೂ ಮೊದಲು ಹೊಸ ಉಪ ರಾಷ್ಟ್ರಪತಿ ಆಯ್ಕೆಯಾಗಬೇಕಿದೆ. ಈ ಹಿನ್ನಲೆಯಲ್ಲಿ ಆಗಸ್ಟ್ 6ರಂದು ಚುನಾವಣೆ ನಡೆಯಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಜುಲೈ 19 ಕೊನೆಯ ದಿನವಾಗಿದೆ.
ಮಂಗಳೂರಿನಲ್ಲಿ ಜನಿಸಿದ್ದ ಮಾರ್ಗರೆಟ್ ಆಳ್ವಾ, ಬೆಂಗಳೂರಿನ ಮೌಂಟ್ ಕಾರ್ಮೆಲ್ ಸ್ಕೂಲ್ ನಲ್ಲಿ ಬಿಎ ಪದವಿ ಮುಗಿಸಿದ್ದರು. ಆಬಳಿಕ ಸರಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ವಕೀಲರಾಗಿದ್ದರು. ಜೊತೆ ಜೊತೆಗೆ ಕಾಂಗ್ರೆಸ್ ಪಕ್ಷದಲ್ಲಿ ಪ್ರತಿನಿಧಿಸಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು. ಉತ್ತರ ಕನ್ನಡ ಜಿಲ್ಲೆಯಿಂದ ಮೊದಲ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿದ್ದರು. ಒಂದು ಬಾರಿ ರಾಜ್ಯಸಭಾ ಸದಸ್ಯರಾಗಿಯೂ ಇದ್ದರು. ಆನಂತರ, ಗೋವಾ, ಗುಜರಾತ್, ರಾಜಸ್ಥಾನ, ಉತ್ತರಾಖಂಡ ರಾಜ್ಯಪಾಲರಾಗಿ 2014ರಲ್ಲಿ ನಿವೃತ್ತಿ ಪಡೆದಿದ್ದರು. ಇದೀಗ 80 ವರ್ಷದ ಮಾರ್ಗರೆಟ್ ಅವರನ್ನು ದೇಶದ ಎರಡನೇ ಅತ್ಯುನ್ನತ ಹುದ್ದೆಗೆ ಅಭ್ಯರ್ಥಿಯಾಗಿ ಮಾಡಲಾಗಿದೆ.
ಜಗದೀಪ್ ಧನ್ಖರ್; ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿರುವ ಜಗದೀಪ್ ಧನ್ಖರ್ ಎನ್‌ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿದ್ದಾರೆ. ಇವರಿಗೆ ಮಾರ್ಗರೇಟ್ ಆಳ್ವ ಎದುರಾಳಿಯಾಗಿದ್ದಾರೆ.
It is a privilege and an honour to be nominated as the candidate of the joint opposition for the post of Vice President of India. I accept this nomination with great humility and thank the leaders of the opposition for the faith they’ve put in me.
Jai Hind 🇮🇳
— Margaret Alva (@alva_margaret) July 17, 2022
Discover more from Coastal Times Kannada
Subscribe to get the latest posts sent to your email.
Discussion about this post