• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಾರ್ಗರೇಟ್ ಆಳ್ವ ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ

Coastal Times by Coastal Times
July 17, 2022
in ರಾಜಕೀಯ
ಮಾರ್ಗರೇಟ್ ಆಳ್ವ ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ
50
VIEWS
WhatsappTelegramShare on FacebookShare on Twitter

ನವದೆಹಲಿ, ಜುಲೈ 17; ಕೇಂದ್ರದ ಮಾಜಿ ಸಚಿವೆ, ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ. ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಭಾನುವಾರ ದೆಹಲಿಯಲ್ಲಿ ವಿರೋಧ ಪಕ್ಷಗಳ ಸಭೆ ನಡೆಯಿತು. ಸಭೆಯ ಬಳಿಕ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮಾರ್ಗರೇಟ್ ಆಳ್ವಾ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು. ಶನಿವಾರ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಗದೀಪ್ ಧನ್ಖರ್‌ ಹೆಸರು ಘೋಷಣೆ ಮಾಡಲಾಗಿತ್ತು. ವಿರೋಧ ಪಕ್ಷಗಳು ದೆಹಲಿಯಲ್ಲಿ ಭಾನುವಾರ ಸಭೆ ನಡೆಸಿ, ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿವೆ. ಕಾಂಗ್ರಸ್‌ನ ಹಿರಿಯ ನಾಯಕಿ ಮಾರ್ಗರೇಟ್ ಆಳ್ವ ಕೇಂದ್ರದ ಸಚಿವರಾಗಿ ಕೆಲಸ ಮಾಡಿದ್ದಾರೆ. ರಾಜಸ್ಥಾನದ ರಾಜ್ಯಪಾಲರಾಗಿಯೂ ಅವರು ಕಾರ್ಯ ನಿರ್ವಹಣೆ ಮಾಡಿದ್ದಾರೆ. ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿರುವ ವಿರೋಧ ಪಕ್ಷಗಳು ಮಾರ್ಗರೇಟ್ ಆಳ್ವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿವೆ. ಉಪ ರಾಷ್ಟ್ರಪತಿಯಾಗಿರುವ ವೆಂಕಯ್ಯ ನಾಯ್ಡು ಅವಧಿ ಆಗಸ್ಟ್ 10ರಂದು ಅಂತ್ಯಗೊಳ್ಳಲಿದೆ. ಅದಕ್ಕೂ ಮೊದಲು ಹೊಸ ಉಪ ರಾಷ್ಟ್ರಪತಿ ಆಯ್ಕೆಯಾಗಬೇಕಿದೆ. ಈ ಹಿನ್ನಲೆಯಲ್ಲಿ ಆಗಸ್ಟ್‌ 6ರಂದು ಚುನಾವಣೆ ನಡೆಯಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಜುಲೈ 19 ಕೊನೆಯ ದಿನವಾಗಿದೆ.

ಮಂಗಳೂರಿನಲ್ಲಿ ಜನಿಸಿದ್ದ ಮಾರ್ಗರೆಟ್ ಆಳ್ವಾ, ಬೆಂಗಳೂರಿನ ಮೌಂಟ್ ಕಾರ್ಮೆಲ್ ಸ್ಕೂಲ್ ನಲ್ಲಿ ಬಿಎ ಪದವಿ ಮುಗಿಸಿದ್ದರು. ಆಬಳಿಕ ಸರಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ವಕೀಲರಾಗಿದ್ದರು. ಜೊತೆ ಜೊತೆಗೆ ಕಾಂಗ್ರೆಸ್ ಪಕ್ಷದಲ್ಲಿ ಪ್ರತಿನಿಧಿಸಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು. ಉತ್ತರ ಕನ್ನಡ ಜಿಲ್ಲೆಯಿಂದ ಮೊದಲ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿದ್ದರು. ಒಂದು ಬಾರಿ ರಾಜ್ಯಸಭಾ ಸದಸ್ಯರಾಗಿಯೂ ಇದ್ದರು. ಆನಂತರ, ಗೋವಾ, ಗುಜರಾತ್, ರಾಜಸ್ಥಾನ, ಉತ್ತರಾಖಂಡ ರಾಜ್ಯಪಾಲರಾಗಿ 2014ರಲ್ಲಿ ನಿವೃತ್ತಿ ಪಡೆದಿದ್ದರು. ಇದೀಗ 80 ವರ್ಷದ ಮಾರ್ಗರೆಟ್ ಅವರನ್ನು ದೇಶದ ಎರಡನೇ ಅತ್ಯುನ್ನತ ಹುದ್ದೆಗೆ ಅಭ್ಯರ್ಥಿಯಾಗಿ ಮಾಡಲಾಗಿದೆ.

ಜಗದೀಪ್ ಧನ್ಖರ್‌; ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿರುವ ಜಗದೀಪ್ ಧನ್ಖರ್‌ ಎನ್‌ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿದ್ದಾರೆ. ಇವರಿಗೆ ಮಾರ್ಗರೇಟ್ ಆಳ್ವ ಎದುರಾಳಿಯಾಗಿದ್ದಾರೆ.

It is a privilege and an honour to be nominated as the candidate of the joint opposition for the post of Vice President of India. I accept this nomination with great humility and thank the leaders of the opposition for the faith they’ve put in me.

Jai Hind 🇮🇳

— Margaret Alva (@alva_margaret) July 17, 2022

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ತಪ್ಪಿಸಿಕೊಳ್ಳಲು ಯತ್ನಿಸಿದ, ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧನ

Next Post

ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ‘ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ , ರಾಜ್ಯದಲ್ಲಿ ನೀಟ್‌ ಸುಸೂತ್ರ,

Related Posts

ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ
ರಾಜಕೀಯ

ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ

August 18, 2026
35
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
26
Next Post
ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ‘ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ , ರಾಜ್ಯದಲ್ಲಿ ನೀಟ್‌ ಸುಸೂತ್ರ,

ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ‘ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ , ರಾಜ್ಯದಲ್ಲಿ ನೀಟ್‌ ಸುಸೂತ್ರ,

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d