• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ತಪ್ಪಿಸಿಕೊಳ್ಳಲು ಯತ್ನಿಸಿದ, ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧನ

Coastal Times by Coastal Times
July 17, 2022
in ಕ್ರೈಮ್ ನ್ಯೂಸ್
ಉಳ್ಳಾಲ: ತಪ್ಪಿಸಿಕೊಳ್ಳಲು ಯತ್ನಿಸಿದ, ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧನ
214
VIEWS
WhatsappTelegramShare on FacebookShare on Twitter

ಮುಡಿಪು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಿ ಸ್ಥಳ ಮಹಜರಿಗೆ ಕರೆದೊಯ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮಹಮದ್ ಮುಕ್ತಾರ್ ಅಹಮದ್ (27) ಮೇಲೆ ಉಳ್ಳಾಲ ಠಾಣೆಯ ಇನ್‌ಸ್ಪೆಕ್ಟರ್‌ ಸಂದೀಪ್ ಅವರು ಭಾನುವಾರ ಮುಂಜಾನೆ ಅಸೈಗೋಳಿಯ ಪಟೋರಿ ಬಳಿ ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಆರೋಪಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಧರ್ಮನಗರ ನಿವಾಸಿಯಾಗಿರುವ ಆರೋಪಿ ಮಹಮದ್ ಮುಕ್ತಾರ್ 15 ಪ್ರಕರಣಗಳಲ್ಲಿ ಆರೋಪಿ. ಕೆಲವು ಪ್ರಕರಣಗಳಲ್ಲಿ ವಾರಂಟ್ ಜಾರಿಯಾಗಿತ್ತು. ಆತನನ್ನು ಉಳ್ಳಾಲ ಪೊಲೀಸರು ಶನಿವಾರ ಮಧ್ಯಾಹ್ನ ವಶಕ್ಕೆ ಪಡೆದಿದ್ದರು. ಪ್ರಕರಣವೊಂದರಲ್ಲಿ ಬಳಸಿದ ವಾಹನ ಜಪ್ತಿ ಮಾಡಲು ಹಾಗೂ ಇತರ ಆರೋಪಿಗಳ ಪತ್ತೆ ಸಲುವಾಗಿ ಪೊಲೀಸರು ಆತನನ್ನು ಅಸೈಗೋಳಿಗೆ ಕರೆ ತಂದಿದ್ದರು. ಈ ವೇಳೆ ಆರೋಪಿಯು ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ತೋರಿಸುವುದಾಗಿ ಸ್ಥಳಕ್ಕೆ ಕರೆದೊಯ್ದಿದ್ದ. ಏಕಾಏಕಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುದ್ದಿಗಾರರ ಜಿತೆ ಮಾತನಾಡಿದ ಪೊಲೀಸ್ ಕಮಿಷನರ್, ‘ಉಳ್ಳಾಲ ಠಾಣೆಯ ಇನ್ಸ್ಪೆಕ್ಟರ್ ಅವರು ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದ್ದರು. ಆಗಲೂ ಆರೋಪಿ ಶರಣಾಗದ ಕಾರಣ ಆತನ ಎಡ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಿದ್ದೇವೆ.

ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ವಾಸುದೇವ್ ಹಾಗೂ ಅಬ್ಬಾಸ್ ಅವರಿಗೂ ಸಣ್ಣಪುಟ್ಟ ಗಾಯಗೊಂಡಿದ್ದು, ಅವರೂ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ತಿಳಿಸಿದರು. ‘ಕೊಲೆ ಮತ್ತಿತರ ಗಂಭೀರ ಪ್ರಕರಣಗಳಲ್ಲಿ ವಾರಂಟ್ ಜಾರಿಯಾದ ಆರೋಪಿಗಳ ಪತ್ತೆಗೆ ಕ್ರಮಕೈಗೊಂಡಿದ್ದೆವು. ಗೃಹಸಚಿವ ಆರಗ ಜ್ಞಾನೇಂದ್ರ ಅವರು ಇತ್ತೀಚೆಗೆ ಮಂಗಳೂರು ಕಮಿಷನರೇಟ್ಗೆ ಭೇಟಿ ನೀಡಿದಾಗ ಈ ಬಗ್ಗೆ ಸ್ಪಷ್ಟ ಸೂಚನೆ ನೀಡಿದ್ದರು’ ಎಂದು ಅವರು ತಿಳಿಸಿದರು. ‘ಪ್ರಕರಣಗಳಲ್ಲಿ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಸುವುದನ್ನು ಸಹಿಸಲು ಸಾಧ್ಯವಿಲ್ಲ’ ಎಂದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಪೊಲೀಸ್ ಅನುಮತಿ ಪಡೆಯದ ಸಿಎಫ್ಐ: ‘ಹುಡುಗಿಯರ ಮೆರವಣಿಗೆ’ ರದ್ದು

Next Post

ಮಾರ್ಗರೇಟ್ ಆಳ್ವ ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ

Related Posts

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ
ಕ್ರೈಮ್ ನ್ಯೂಸ್

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
1
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
61
Next Post
ಮಾರ್ಗರೇಟ್ ಆಳ್ವ ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ

ಮಾರ್ಗರೇಟ್ ಆಳ್ವ ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ

Discussion about this post

Recent News

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
1
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d