• About us
  • Contact us
  • Disclaimer
Friday, July 17, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

Coastal Times by Coastal Times
July 17, 2026
in ಕರಾವಳಿ
ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
15
VIEWS
WhatsappTelegramShare on FacebookShare on Twitter

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಶನಿವಾರ (ಜುಲೈ 18) ತುರ್ತು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯ ತೀವ್ರತೆ ಹೆಚ್ಚಾಗಿದ್ದು, ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನ ಪ್ರಮುಖ ತುರ್ತು ಕ್ರಮಗಳನ್ನು ಕೈಗೊಂಡಿದೆ.

12ನೇ ತರಗತಿವರೆಗಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ: ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ವಸತಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಗೆಯೇ, ಪದವಿ ಪೂರ್ವ (ಪಿಯುಸಿ) ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳ (12ನೇ ತರಗತಿಯವರೆಗೆ) ಯಾವುದೇ ತರಗತಿಗಳನ್ನು ನಡೆಸದಂತೆ ಕಟ್ಟುನಿಟ್ಟಿನ ಆದೇಶ ಜಾರಿಗೊಳಿಸಲಾಗಿದೆ.
ಈ ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ಪೋಷಕರು ಹಾಗೂ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಸೂಚನೆಗಳು: ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ತೀವ್ರ ಜಾಗ್ರತೆ ವಹಿಸಬೇಕು. ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದೆ. ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಆದೇಶ: ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದುಕೊಂಡು, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಚಾಚೂ ತಪ್ಪದೆ ನಿರ್ವಹಿಸಬೇಕು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಿ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಸೂಚಿಸಲಾಗಿದ್ದು, ಪ್ರತಿ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ.

ತುರ್ತು ಸಹಾಯವಾಣಿ ಸಂಖ್ಯೆಗಳು: ನೈಸರ್ಗಿಕ ವಿಕೋಪ ಅಥವಾ ಮಳೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ತಕ್ಷಣವೇ ಈ ಕೆಳಗಿನ ನಿಯಂತ್ರಣ ಕೊಠಡಿಯ ಸಂಖ್ಯೆಗಳನ್ನು ಸಂಪರ್ಕಿಸಬಹುದು: ಟೋಲ್ ಫ್ರೀ ಸಂಖ್ಯೆ: 1077 ಹಾಗೂ ದೂರವಾಣಿ ಸಂಖ್ಯೆ: 0824-2442590.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!

Related Posts

ಸುರತ್ಕಲ್ ಸಮುದ್ರದಲ್ಲಿ ಮಲ್ಪೆ ಮೂಲದ ಮೀನುಗಾರಿಕಾ ಬೋಟ್ ಮಗುಚಿ ಬಿದ್ದು ಅಪಾಯದಲ್ಲಿದ್ದ ಆರು ಮಂದಿಯ ರಕ್ಷಣೆ
ಕರಾವಳಿ

ಸುರತ್ಕಲ್ ಸಮುದ್ರದಲ್ಲಿ ಮಲ್ಪೆ ಮೂಲದ ಮೀನುಗಾರಿಕಾ ಬೋಟ್ ಮಗುಚಿ ಬಿದ್ದು ಅಪಾಯದಲ್ಲಿದ್ದ ಆರು ಮಂದಿಯ ರಕ್ಷಣೆ

July 17, 2026
15
ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ
ಕರಾವಳಿ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

July 13, 2026
31

Discussion about this post

Recent News

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

July 17, 2026
15
ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!

ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!

July 17, 2026
51
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

July 17, 2026
ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!

ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!

July 17, 2026
ಸುರತ್ಕಲ್ ಸಮುದ್ರದಲ್ಲಿ ಮಲ್ಪೆ ಮೂಲದ ಮೀನುಗಾರಿಕಾ ಬೋಟ್ ಮಗುಚಿ ಬಿದ್ದು ಅಪಾಯದಲ್ಲಿದ್ದ ಆರು ಮಂದಿಯ ರಕ್ಷಣೆ

ಸುರತ್ಕಲ್ ಸಮುದ್ರದಲ್ಲಿ ಮಲ್ಪೆ ಮೂಲದ ಮೀನುಗಾರಿಕಾ ಬೋಟ್ ಮಗುಚಿ ಬಿದ್ದು ಅಪಾಯದಲ್ಲಿದ್ದ ಆರು ಮಂದಿಯ ರಕ್ಷಣೆ

July 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d