ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ದೊಡ್ಡಕೊಪ್ಲ ಕಡಲ ತೀರದ ಬಳಿ ಶುಕ್ರವಾರ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ನಾಡದೋಣಿ (ಮೀನುಗಾರಿಕಾ ಬೋಟ್) ಮಗುಚಿ ಬಿದ್ದಿದೆ. ಬೋಟ್‌ಗೆ ಹಾನಿಯಾಗಿದ್ದು, ಮೀನುಗಾರಿಕೆಗೆ ಬಳಸುತ್ತಿದ್ದ ಬಲೆಗಳು (ನೆಟ್‌ಗಳು) ಸಮುದ್ರ ಪಾಲಾಗಿವೆ.
ಬೋಟ್‌ನಲ್ಲಿ ಒಟ್ಟು 7 ಮಂದಿ ಮೀನುಗಾರರಿದ್ದು, ಎಲ್ಲರೂ ತಮಿಳುನಾಡು ಮೂಲದವರಾಗಿದ್ದಾರೆ. ಬೋಟ್ ಮಗುಚುತ್ತಿರುವುದನ್ನು ಗಮನಿಸಿದ ಸುತ್ತಮುತ್ತ ಮೀನುಗಾರಿಕೆಯಲ್ಲಿ ತೊಡಗಿದ್ದ ಸ್ಥಳೀಯ ಮೀನುಗಾರರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ, ಎಲ್ಲಾ ಏಳು ಮಂದಿಯನ್ನೂ ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ಮಾಹಿತಿ ತಿಳಿಯುತ್ತಿದ್ದಂತೆಯೇ ಭಾರತೀಯ ಕರಾವಳಿ ರಕ್ಷಣಾ ಪಡೆ (ಕೋಸ್ಟ್ ಗಾರ್ಡ್) ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬೋಟ್ ಮಗುಚಲು ನಿಖರ ಕಾರಣವೇನು ಎಂಬ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದು, ಸಮುದ್ರದ ಅಲೆಗಳ ತೀವ್ರತೆ ಅಥವಾ ಇತರ ತಾಂತ್ರಿಕ ಕಾರಣಗಳ ಸಾಧ್ಯತೆಯನ್ನೂ ಪರಿಶೀಲಿಸಲಾಗುತ್ತಿದೆ.
ಈ ಕುರಿತು ಮಂಗಳೂರು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕಿ ದರ್ಶನ್ ಟಿ. ಅವರು ಮಾಹಿತಿ ನೀಡಿದ್ದು, ಘಟನೆಗೆ ಒಳಗಾದ ಬೋಟ್ ಉಡುಪಿ ಜಿಲ್ಲೆಯ ಮಲ್ಪೆ ಬಂದರಿಗೆ ಸೇರಿದ ಮೀನುಗಾರಿಕಾ ನಾಡದೋಣಿಯಾಗಿದೆ ಎಂದು ತಿಳಿಸಿದ್ದಾರೆ. ಬೋಟ್‌ಗೆ ಹಾನಿಯಾಗಿರುವುದರ ಜೊತೆಗೆ ಮೀನುಗಾರಿಕೆಗೆ ಬಳಸುವ ಬಲೆಗಳೂ ಕಳೆದುಹೋಗಿದ್ದು, ಆರ್ಥಿಕ ನಷ್ಟ ಸಂಭವಿಸಿದೆ. ಆದರೆ ಬೋಟ್‌ನಲ್ಲಿದ್ದ ಎಲ್ಲ ಮೀನುಗಾರರು ಸುರಕ್ಷಿತರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.


Discover more from Coastal Times Kannada
Subscribe to get the latest posts sent to your email.








Discussion about this post