ಮಂಗಳೂರು: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ಮಂಗಳೂರು ಹೊರವಲಯದ ಚಿತ್ರಾಪುರ ರಹೆಜಾ ಅಪಾರ್ಟ್ಮೆಂಟ್ನ ಫ್ಲಾಟ್ನಲ್ಲಿ ನಡೆದಿದೆ.
ಮೃತ ದಂಪತಿಯನ್ನು ರಮೇಶ್ಕುಮಾರ್ ಮತ್ತು ಗುಣ ಎಂದು ಗುರುತಿಸಲಾಗಿದೆ. ಕರೊನಾ ಕಾರಣದಿಂದ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಚಿತ್ರಾಪುರದ ಫ್ಲ್ಯಾಟ್ನಲ್ಲಿ ವಾಸವಿದ್ದ ದಂಪತಿ ಒಂದು ವಾರದಿಂದ ಕರೊನಾ ಸೋಂಕಿಗೆ ಒಳಗಾಗಿದ್ದರು. ಆರೋಗ್ಯ ತೀವ್ರ ಹದಗೆಟ್ಟ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ನಿರ್ಧಾರ ಮಾಡಿದ್ದಾರೆಂದು ತಿಳಿದುಬಂದಿದೆ.
ಆತ್ಮಹತ್ಯೆ ಮಾಡುವ ಮುನ್ನ ಸಹಾಯಕ ಪೊಲೀಸ್ ಆಯುಕ್ತರಿಗೆ ಹಾಗೂ ಹಿಂದು ಸಂಘಟನೆ ಮುಖಂಡರಿಗೆ ದಂಪತಿ ವಾಯ್ಸ್ ಮೆಸೇಜ್ ಕಳುಹಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮೀಷನರ್ಗೆ ವಾಯ್ಸ್ ಮೆಸೇಜ್ ತಲುಪಿಸುವಂತೆ ರಮೇಶ್ ಮನವಿ ಮಾಡಿಕೊಂಡಿದ್ದರು. ಶರಣ್ ಪಂಪ್ವೆಲ್, ಸತ್ಯಜಿತ್ ಸುರತ್ಕಲ್ ಗೂ ಅಂತ್ಯಕ್ರಿಯೆಯನ್ನು ಮಾಡುವಂತೆ ವಾಯ್ಸ್ ಮೆಸೇಜ್ ಕಳುಹಿಸಿದ್ದಾರೆ.
ಅಂತ್ಯಕ್ರಿಯೆಗಾಗಿ ಒಂದು ಲಕ್ಷ ರೂಪಾಯಿ ಇಟ್ಟಿರೋದಾಗಿ ಮೆಸೇಜ್ ಮಾಡಿದ್ದು, ಮನೆಯ ಉಪಕರಣ ಮಾರಿ ಬಡವರಿಗೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಾಯ್ಸ್ ಮೆಸೇಜ್ ಬಂದ ಕೂಡಲೇ ಅಡ್ರೆಸ್ ಟ್ರ್ಯಾಕ್ ಮಾಡಿದ ಕಮೀಷನರ್, ಮನೆ ತಲುಪುವ ವೇಳೆಯಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮನೆಯಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡುತ್ತಿರುವುದಾಗಿ ಉಲ್ಲೇಖ ಮಾಡಲಾಗಿದೆ. ಪತ್ನಿ ಗುಣಗೆ ನಿರಂತರವಾಗಿ ಆರೋಗ್ಯ ಸಮಸ್ಯೆ ಕಾಡುತ್ತಿತ್ತು. ಸದ್ಯ ಕೋವಿಡ್ನ ಲಕ್ಷಣಗಳು ಕಂಡು ಬಂದಿದೆ. ಕೋವಿಡ್ನ ಗಂಭೀರ ಲಕ್ಷಣಗಳ ಬಗ್ಗೆ ಭಯವಿದೆ ಎಂದು ಉಲ್ಲೇಖಿಸಿರುವ ದಂಪತಿ ಹಿಂದೂ ಧರ್ಮದ ಪ್ರಕಾರ ಅಂತ್ಯಕ್ರಿಯೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post