ಮೂಡುಬಿದಿರೆ: ಸಾರ್ವಜನಿಕ ಶಾಂತಿ ಭಂಗ ಹಾಗು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದಾಗಿ ಮೂವರ ವಿರುದ್ದ ಪ್ರಕರಣ ದಾಖಲಿಸಿ ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ ಒಂಟಿಕಟ್ಟೆ ನಿವಾಸಿಗಳಾದ ಮೂಡುಬಿದಿರೆ ಮುಡಾ ಸದಸ್ಯ ಪ್ರಕಾಶ್, ಅಬ್ದುಲ್ ಸತ್ತಾರ್ ಮತ್ತು ವಿಜೇತ್ ಬಂಧಿತರು.
ಗುರುವಾರ ಸಂಜೆ ಮೂಡುಬಿದಿರೆ ಪೊಲೀಸರು ಬೀಟ್ ನಲ್ಲಿರುವ ಸಂದರ್ಭ ದ್ವಿಚಕ್ರ ವಾಹನದಲ್ಲಿ ಹೆಲ್ಮಟ್ ಹಾಕದೆ ಹೋಗುತ್ತಿದ್ದ ಒಂಟಿಕಟ್ಟೆಯ ಪ್ರಕಾಶ್ ಕೋಟ್ಯಾನ್ ಮತ್ತು ಸತ್ತಾರ್ ನನ್ನು ಪೊಲೀಸ್ ಉಪನಿರೀಕ್ಷಕ ಕೃಷ್ಣಪ್ಪ ಅವರು ನಿಲ್ಲಿಸಿ ದ್ವಿಚಕ್ರ ವಾಹನದ ದಾಖಲೆಗಳನ್ನು ನೀಡುವಂತೆ ಕೇಳಿದ್ದಾರೆ. ಆಗ ದಾಖಲೆ ಇಲ್ಲ ನಾಳೆ ತಂದು ಕೊಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಇದೇ ಸಂದರ್ಭ ಏಕಮುಖ ರಸ್ತೆಯಲ್ಲಿ ಇನ್ನೊಂದು ವಾಹನ ಬಂದಿದ್ದು ಅವರಿಗೂ ಗಾಡಿಯನ್ನು ಬದಿಯಲ್ಲಿ ನಿಲ್ಲಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಇನ್ನೊಂದು ವಾಹನದವರ ಪರವು ಪ್ರಕಾಶ್ ಹಾಗೂ ತಂಡ ಹೋಗಿ ಕರ್ತವ್ಯ ನಿರತ ಪೊಲೀಸರ ವಿರುದ್ದ ವಾಗ್ವಾದಕ್ಕಿಳಿದಿದ್ದಾರೆ.
ಪ್ರಕಾಶ್, ವಿಜೇತ್ ಮತ್ತು ಸತ್ತಾರ್ ಮೂವರು ಸೇರಿ ಪೊಲೀಸರಿಗೆ ಏರು ಧ್ವನಿಯಲ್ಲಿ ಮಾತನಾಡಿ ಸಾರ್ವಜನಿಕ ಶಾಂತಿ ಭಂಗ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಅವರು ಮೂವರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಮೂಡಬಿದಿರೆ ಪೊಲೀಸ್ ಠಾಣೆಯ ಪಿಎಸ್ ಐ ಕೃಷ್ಣಪ್ಪ ಎಂಬವರು ಬಸ್ ನಿಲ್ದಾಣದ ಬಳಿಯ ರಸ್ತೆಯಲ್ಲಿ ವಾಹನಗಳ ಹೈಮಾಸ್ಟ್ ದೀಪಗಳ ಪರಿಶೀಲನೆ ನಡೆಸುತ್ತಿದ್ದ ವೇಳೆ ಹೆಲ್ಮೆಟ್ ಧರಿಸದೇ ತ್ರಿಪಲ್ ರೈಡ್‌ನಲ್ಲಿ ದ್ವಿಚಕ್ರ ಚಲಾಯಿಸುತ್ತಿದ್ದ ಸವಾರರಿಗೆ ಪಿಎಸ್‌ಐ ಬೈದಿದ್ದಾರೆ ಎಂದು ಆರೋಪಿಸಿ ಮೂಡುಬಿದಿರೆ ಮುಡಾ ಸದಸ್ಯ ಪ್ರಕಾಶ್, ಅಬ್ದುಲ್ ಸತ್ತಾರ್ ಮತ್ತು ವಿಜೇತ್ ಎಂಬವರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದರು. ಈ ವೇಳೆ ಮೂವರೂ ಪಿಎಸ್‌ಐ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಲ್ಲದೆ, ಅವರ ಜಾತಿ ನಿಂದನೆ ನಡೆಸಿ ಅವಾಚ್ಯವಾಗಿ ಬೈದು ನಿಂದಿಸಿದ್ದಾರೆ ಎಂದು ಪಿಎಸ್‌ಐ ಕೃಷ್ಣಪ್ಪ ಅವರು ಮೂದಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈ ಮಧ್ಯೆ ಪೊಲೀಸ್ ಅಧಿಕಾರಿಯನ್ನು ಬೈದಾಡಿಕೊಳ್ಳುತ್ತಿದ್ದ ವೀಡಿಯೋ ಮಾಡಿಕೊಂಡಿದ್ದ ಆರೋಪಿಗಳು, ತಮ್ಮ ತಪ್ಪನ್ನು ಮುಚ್ಚಿಡುವ ಸಲುವಾಗಿ ವೀಡಿಯೊವನ್ನು ನಾಗರೀಕರು ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, “ಮೂಡುಬಿದಿರೆಯ ಪೋಲಿಸ್ ಅಧಿಕಾರಿಯ ಲಂಚ ಸ್ವೀಕಾರಕ್ಕೆ ಬೇಸತ್ತ ಸಾರ್ವಜನಿಕರು” ಎಂಬ ತಲೆ ಬರಹ ನೀಡಿ ಪೊಲೀಸ್ ಅಧಿಕಾರಿಯ ಗೌರವಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ ಎಂದೂ ಅವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
Discover more from Coastal Times Kannada
Subscribe to get the latest posts sent to your email.
Discussion about this post