• About us
  • Contact us
  • Disclaimer
Monday, August 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Coastal Times by Coastal Times
August 17, 2025
in ಕರಾವಳಿ
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
66
VIEWS
WhatsappTelegramShare on FacebookShare on Twitter

ಬೆಳ್ತಂಗಡಿ: ಇಂದು ಬೆಳಗ್ಗೆ ರಾಜ್ಯ ಬಿಜೆಪಿ ನಿಯೋಗ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಶಾಸಕರು, ಪರಿಷತ್ ವಿಪಕ್ಷ ನಾಯಕರು, ಸದಸ್ಯರು, ಸಂಸದರು, ಪಕ್ಷದ ವಿವಿಧ ಪದಾಧಿಕಾರಿಗಳು ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ವಿಜಯೇಂದ್ರ ಮಾತನಾಡಿ, “ಎಸ್​ಐಟಿ ತನಿಖೆಯನ್ನು ಬಿಜೆಪಿ ಪ್ರಾರಂಭದಲ್ಲೇ ಸ್ವಾಗತಿಸಿದೆ. ತನಿಖೆಯ ಮಧ್ಯಂತರ ವರದಿಯನ್ನು ಸರಕಾರ ಮಂಡಿಸಬೇಕು ಎಂದು ಸದನದಲ್ಲಿ ಆಗ್ರಹಿಸಿದ್ದೇವೆ. ಆದರೆ ಅದರ ಹೆಸರಿನಲ್ಲಿ ನಡೆಯುತ್ತಿರುವ ಅಪಪ್ರಚಾರಗಳನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. “ಈಗ ಹುಟ್ಟು ಹಾಕಿರುವ ಅನುಮಾನಗಳೆಲ್ಲವೂ ಇತ್ಯರ್ಥವಾಗಬೇಕು ಎಂಬ ಅಪೇಕ್ಷೆಯನ್ನು ನಾವೆಲ್ಲರೂ ವ್ಯಕ್ತಪಡಿಸಿದ್ದೇವೆ. ತನಿಖೆ ಸಂದರ್ಭದಲ್ಲಿ ಅನೇಕ ಗೊಂದಲಗಳು, ಅಪಪ್ರಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಯಥೇಚ್ಛವಾಗಿ ನಡೆಯುತ್ತಿವೆ” ಎಂದು ಹೇಳಿದರು.

“ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್​ ಗುಂಡೂರಾವ್​ ಅವರು ಎಡಪಂಥೀಯ ಗುಂಪುಗಳ ಒತ್ತಡಕ್ಕೆ ಮಣಿದು ನಾವು ತನಿಖೆಗೆ ಆದೇಶ ಮಾಡಿದ್ದೇವೆ ಎಂದು ಹೇಳಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಸ್ವತಃ, ಇದರ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಉಲ್ಲೇಖಿಸಿದ್ದಾರೆ. ತನಿಖೆಯ ಭರದಲ್ಲಿ ನಡೆಯುತ್ತಿರುವ ಅಪಪ್ರಚಾರಕ್ಕೆ ಕಡಿವಾಣ ಹಾಕುವ ಕೆಲಸವನ್ನು ಸರ್ಕಾರ ಮಾಡಬೇಕಿತ್ತು. ಇದಕ್ಕೆಲ್ಲ ಕಡಿವಾಣ ಹಾಕದೆ ಸರ್ಕಾರ ಅಪರಾಧ ಎಸಗಿದೆ. ಹಾಗಾಗಿ ಮುಖ್ಯಮಂತ್ರಿ ನಾಡಿನ ಜನತೆಯ ಕ್ಷಮೆ ಕೇಳಬೇಕು. ಬಿಜೆಪಿ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿಲ್ಲ. ಧರ್ಮಸ್ಥಳದ ಶ್ರೀ ಮಂಜುನಾಥ ಹಾಗೂ ಅಣ್ಣಪ್ಪ ಸ್ವಾಮಿಯ ಬಗ್ಗೆ ಅಪಪ್ರಚಾರ ಮಾಡಿ, ಅಸಂಖ್ಯಾತ ಭಕ್ತರಲ್ಲಿ ಗೊಂದಲ ಸೃಷ್ಟಿಸುವ ಷಡ್ಯಂತ್ರ ಕೂಡ ಇದರ ಹಿಂದಿದೆ” ಎಂದರು.

ಈ ವೇಳೆ ಬಿಜೆಪಿ ನಾಯಕರಾದ ಸಿ.ಟಿ ರವಿ, ಛಲವಾದಿ ನಾರಾಯಣಸ್ವಾಮಿ, ಸಂಸದ ಬ್ರಿಜೇಶ್ ಚೌಟ, ಶಾಸಕರುಗಳಾದ ವೇದವ್ಯಾಸ್ ಕಾಮತ್, ಹರೀಶ್ ಪೂಂಜ, ಭಗೀರಥಿ ಮುರುಳ್ಯ, ಉಮಾನಾಥ್‌ ಕೋಟ್ಯಾನ್, ಭರತ್ ಶೆಟ್ಟಿ, ಪ್ರತಾಪ ಸಿಂಹ ನಾಯಕ್, ಯಶ್‌ಪಾಲ್ ಸುವರ್ಣ ಹಾಗೂ ಇತರರು ಇದ್ದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಾದಕ ವಸ್ತು ಸೇವನೆ ಆರೋಪ: ಅಡ್ಯಾರ್, ಪಂಪ್ವೆಲ್ ಬಳಿ ಆರು ಮಂದಿ ಯುವಕರು ಸೆರೆ

Next Post

ಪುತ್ತೂರು ಮನೆಗೆ ನುಗ್ಗಿ ನಗ-ನಗದು ಕಳವು ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪಿ ಬಂಧನ

Related Posts

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ
ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
45
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ
ಕರಾವಳಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
26
Next Post
ಪುತ್ತೂರು ಮನೆಗೆ ನುಗ್ಗಿ ನಗ-ನಗದು ಕಳವು ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪಿ ಬಂಧನ

ಪುತ್ತೂರು ಮನೆಗೆ ನುಗ್ಗಿ ನಗ-ನಗದು ಕಳವು ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪಿ ಬಂಧನ

Discussion about this post

Recent News

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
45
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
26
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

August 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d